India vs England 3rd ODI: ಟಾಸ್ ಗೆದ್ದ ಭಾರತ; ಸರಣಿ ನಿರ್ಧಾರಕ ಪಂದ್ಯದಲಿಲ್ಲ ಬುಮ್ರಾ! ಉಭಯ ತಂಡಗಳು ಹೀಗಿವೆ

India vs England 3rd ODI: ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇಂದಿನ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ ಎರಡಕ್ಕೂ ಮಹತ್ವದ್ದಾಗಿದೆ. ಏಕೆಂದರೆ, ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಿಜೇತರಾಗಲಿದೆ.

India vs England 3rd ODI: ಟಾಸ್ ಗೆದ್ದ ಭಾರತ; ಸರಣಿ ನಿರ್ಧಾರಕ ಪಂದ್ಯದಲಿಲ್ಲ ಬುಮ್ರಾ! ಉಭಯ ತಂಡಗಳು ಹೀಗಿವೆ
ಬುಮ್ರಾಗೆ ಕೋಕ್
Follow us
| Updated By: ಪೃಥ್ವಿಶಂಕರ

Updated on:Jul 17, 2022 | 3:42 PM

ಭಾರತ ಮತ್ತು ಇಂಗ್ಲೆಂಡ್ (India and England) ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಇಂದು ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದ ಟಾಸ್ ಮುಗಿದಿದ್ದು, ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಬೌಲಿಂಗ್ ನಿರ್ಧಾರದೊಂದಿಗೆ ಭಾರತದ ಪ್ಲೇಯಿಂಗ್ ಇಲೆವೆನ್‌ನಲ್ಲಿಯೂ ಬದಲಾವಣೆ ಇದೆ. ಈ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಬದಲಿಗೆ ಸಿರಾಜ್‌ಗೆ ಅವಕಾಶ ಸಿಕ್ಕಿದೆ. ಇಂದಿನ ಪಂದ್ಯ ಭಾರತ ಹಾಗೂ ಇಂಗ್ಲೆಂಡ್ ಎರಡಕ್ಕೂ ಮಹತ್ವದ್ದಾಗಿದೆ. ಏಕೆಂದರೆ, ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಿಜೇತರಾಗಲಿದೆ.

ಮ್ಯಾಂಚೆಸ್ಟರ್‌ನಲ್ಲಿ ಭಾರತದ ದಾಖಲೆ ಕಳಪೆಯಾಗಿದೆ. ಇದರ ಹೊರತಾಗಿಯೂ ಟೀಂ ಇಂಡಿಯಾ ಇತ್ತೀಚಿನ ದಿನಗಳಲ್ಲಿ ಉತ್ತಮ ಕ್ರಿಕೆಟ್ ಆಡಿರುವ ಕಾರಣ ಭರವಸೆ ಇದೆ. ಭಾರತ ಏಕದಿನ ಸರಣಿಯನ್ನು ವಶಪಡಿಸಿಕೊಳ್ಳಬೇಕಾದರೆ ಹಿಂದಿನ ಅಂಕಿ-ಅಂಶಗಳನ್ನು ಮರೆತು ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬೇಕಿದೆ.

ಇದನ್ನೂ ಓದಿ
Image
India vs England 3rd ODI: ಟಾಸ್ ಗೆದ್ದ ಭಾರತ; ಸರಣಿ ನಿರ್ಧಾರಕ ಪಂದ್ಯದಲಿಲ್ಲ ಬುಮ್ರಾ! ಉಭಯ ತಂಡಗಳು ಹೀಗಿವೆ
Image
India vs England, 3rd ODI, Highlights: ಪಂತ್ ಚೊಚ್ಚಲ ಏಕದಿನ ಶತಕ; ಭಾರತಕ್ಕೆ ಏಕದಿನ ಸರಣಿ
Image
Team India: 28 ತಿಂಗಳಲ್ಲಿ 77 ಪಂದ್ಯಗಳನ್ನಾಡಿದ ಭಾರತ; ಆದರಿಲ್ಲಿ ಕೆಲವರು ದೇಶಕ್ಕಾಗಿ ಆಡಿದಕ್ಕಿಂತ ಐಪಿಎಲ್​ನಲ್ಲಿ ಆಡಿದ್ದೆ ಹೆಚ್ಚು..!

ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ, ಇಂಗ್ಲೆಂಡ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ

ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ತಂಡದಲ್ಲಿ ಬದಲಾವಣೆಯಾಗಿದೆ. ಅದೇ ವೇಳೆ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಿಂದ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದ ಈ ಪಂದ್ಯದಿಂದ ಹಿಂದೆ ಸರಿಯಬೇಕಾಯಿತು. ಹೀಗಿರುವಾಗ ಅವರ ಜಾಗದಲ್ಲಿ ಮೊಹಮ್ಮದ್ ಸಿರಾಜ್​ಗೆ ಅವಕಾಶ ಸಿಕ್ಕಿದೆ. ಮತ್ತೊಂದೆಡೆ, ಇಂಗ್ಲೆಂಡ್ ತನ್ನ ಗೆಲುವಿನ ಸಂಯೋಜನೆಯೊಂದಿಗೆ ಆಡಲು ನಿರ್ಧರಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

ಟೀಂ ಇಂಡಿಯಾ

ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್ ಪ್ಲೇಯಿಂಗ್ XI

ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋಸ್ ಬಟ್ಲರ್ (ನಾಯಕ), ಜೋ ರೂಟ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರೇಗ್ ಓವರ್‌ಟನ್, ಬ್ರೈಡನ್ ಕಾರ್ಲ್ಸ್, ರೀಸ್ ಟೋಪ್ಲಿ

Published On - 3:20 pm, Sun, 17 July 22

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ