AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ vs ಇಂಗ್ಲೆಂಡ್ 3ನೇ ಟಿ20 ಪಂದ್ಯ ಎಲ್ಲಿ, ಯಾವಾಗ?

India vs England T20I: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಚೆನ್ನೈನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿದೆ.

IND vs ENG: ಭಾರತ vs ಇಂಗ್ಲೆಂಡ್ 3ನೇ ಟಿ20 ಪಂದ್ಯ ಎಲ್ಲಿ, ಯಾವಾಗ?
Ind Vs Eng
ಝಾಹಿರ್ ಯೂಸುಫ್
|

Updated on: Jan 27, 2025 | 7:17 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟಿ20 ಪಂದ್ಯವು ಮಂಗಳವಾರ (ಜ.28) ನಡೆಯಲಿದೆ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ 5 ಪಂದ್ಯಗಳ ಸರಣೀಯಲ್ಲಿ ಈಗಾಗಲೇ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಅತ್ತ ಇಂಗ್ಲೆಂಡ್ ತಂಡವು ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ, ಮೂರನೇ ಟಿ20 ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ರಾಜ್​ಕೋಟ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ vs ಇಂಗ್ಲೆಂಡ್ 3ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು?

ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯವು​​ ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಇದಕ್ಕೂ ಮುನ್ನ ರಾತ್ರಿ 6.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ vs ಇಂಗ್ಲೆಂಡ್ ಸರಣಿ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಸರಣಿಯ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರಮಣ್​ದೀಪ್ ಸಿಂಗ್, ಶಿವಂ ದುಬೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.