AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 3ನೇ ಟಿ20 ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್; ಹೇಗಿರಲಿದೆ ಭಾರತ ತಂಡ?

IND vs ENG: ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ರಾಜ್‌ಕೋಟ್‌ನಲ್ಲಿ ನಡೆಯುವ ಮೂರನೇ ಪಂದ್ಯದಲ್ಲಿ ಭಾರತ ತಂಡ ಸರಣಿಯನ್ನು ಗೆಲ್ಲುವ ಉದ್ದೇಶದಲ್ಲಿದೆ. ಇಂಗ್ಲೆಂಡ್ ತಂಡ ಚೆನ್ನೈನಲ್ಲಿ ಆಡಿದ ಅದೇ ತಂಡವನ್ನು ರಾಜ್‌ಕೋಟ್‌ನಲ್ಲೂ ಕಣಕ್ಕಿಳಿಸಿದೆ. ಭಾರತ ತಂಡದಲ್ಲಿ ರಿಂಕು ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಇಲ್ಲದಿರುವುದರಿಂದ ಶಿವಂ ದುಬೆ ಅಥವಾ ರಮಣದೀಪ್ ಸಿಂಗ್ ಅವರಿಗೆ ಅವಕಾಶ ಸಿಗಬಹುದು.

IND vs ENG: 3ನೇ ಟಿ20 ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್; ಹೇಗಿರಲಿದೆ ಭಾರತ ತಂಡ?
ಭಾರತ- ಇಂಗ್ಲೆಂಡ್
ಪೃಥ್ವಿಶಂಕರ
|

Updated on:Jan 27, 2025 | 9:36 PM

Share

ಐದು ಪಂದ್ಯಗಳ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿರುವ ಟೀಂ ಇಂಡಿಯಾ ಇದೀಗ ರಾಜ್‌ಕೋಟ್‌ನಲ್ಲಿ ಮೂರನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಇಂಗ್ಲೆಂಡ್ ತಂಡಕ್ಕೆ ರಾಜ್‌ಕೋಟ್‌ನಲ್ಲಿ ಇದು ಮೊದಲ ಟಿ20 ಪಂದ್ಯ ಆಗಿರುವ ಕಾರಣ ಟೀಂ ಇಂಡಿಯಾಕ್ಕೆ ಮೇಲುಗೈ ಸಾಧಿಸುವ ಅವಕಾಶವಿದೆ. ಇದೀಗ ತನ್ನ ಸಂಪ್ರದಾಯವನ್ನು ಮುಂದುವರೆಸಿರುವ ಇಂಗ್ಲೆಂಡ್ ತಂಡ ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿಯೇ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದ್ದು, ಚೆನ್ನೈನಲ್ಲಿ ಆಡಿದ ಆಟಗಾರರನ್ನೇ ರಾಜ್‌ಕೋಟ್‌ನಲ್ಲೂ ಕಣಕ್ಕಿಳಿಸಲು ತೀರ್ಮಾನಿಸಿದೆ.

ತಂಡದಲ್ಲಿ ಬದಲಾವಣೆ ಇಲ್ಲ

ಮೊದಲ ಎರಡು ಪಂದ್ಯಗಳಂತೆ, ಇಂಗ್ಲೆಂಡ್ ಈಗಾಗಲೇ ಮೂರನೇ ಪಂದ್ಯಕ್ಕೂ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದೆ. ಆದರೆ, ಅಚ್ಚರಿಯ ಸಂಗತಿ ಎಂದರೆ ಇಂಗ್ಲೆಂಡ್ ತಂಡ ಚೆನ್ನೈನಲ್ಲಿ ಕಣಕ್ಕಿಳಿಸಿದ್ದ ಅದೇ 11 ಆಟಗಾರರನ್ನು ರಾಜ್​ಕೋಟ್​ನಲ್ಲೂ ಆಡಿಸಲು ಮುಂದಾಗಿದೆ. ವಾಸ್ತವವಾಗಿ ಮೊದಲೆರಡು ಪಂದ್ಯಗಳಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ವಿಫಲವಾಗಿತ್ತು. ಅದರಲ್ಲೂ ಆರಂಭಿಕರಿಬ್ಬರೂ ಯಾವುದೇ ರೀತಿಯ ಗಮನಾರ್ಹ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಹೀಗಾಗಿ ಮೂರನೇ ಪಂದ್ಯಕ್ಕೆ ಇಂಗ್ಲೆಂಡ್ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆಯನ್ನು ನಿರೀಕ್ಷಿಸಲಾಗಿತ್ತು. ಆದಾಗ್ಯೂ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಇಂಗ್ಲೆಂಡ್ ತಂಡ: ಜೋಸ್ ಬ್ಯಾಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಜೇಮಿ ಸ್ಮಿತ್, ಜೇಮೀ ಓವರ್‌ಟನ್, ಬ್ರೇಡನ್ ಕಾರ್ಸೆ, ಜೋಫ್ರಾ ಆರ್ಚರ್, ಮಾರ್ಕ್ ವುಡ್ ಮತ್ತು ಆದಿಲ್ ರಶೀದ್.

ಭಾರತ ತಂಡ ಹೇಗಿರಲಿದೆ?

ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಿದೆ. ಭಾರತ ತಂಡದ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಹೆಚ್ಚಿನ ಬದಲಾವಣೆಗೆ ಅವಕಾಶವಿಲ್ಲ. ಕೋಲ್ಕತ್ತಾ ಟಿ20 ನಂತರ ರಿಂಕು ಸಿಂಗ್ ಬೆನ್ನು ಸೆಳೆತ ಸಮಸ್ಯೆಯಿಂದಾಗಿ ಎರಡು ಪಂದ್ಯಗಳಿಂದ ಹೊರಗುಳಿದಿದ್ದರೆ, ನಿತೀಶ್ ಕುಮಾರ್ ರೆಡ್ಡಿ ಸ್ನಾಯು ಸೆಳೆತದಿಂದಾಗಿ ಇಡೀ ಸರಣಿಯಿಂದ ಹೊರಗುಳಿದಿದ್ದರು. ಇವರಿಬ್ಬರ ಜಾಗದಲ್ಲಿ ಶಿವಂ ದುಬೆ ಮತ್ತು ರಮಣದೀಪ್ ಸಿಂಗ್ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಇಬ್ಬರಲ್ಲಿ ಯಾರಿಗಾದರೂ ರಾಜ್‌ಕೋಟ್‌ನಲ್ಲಿ ಅವಕಾಶ ಸಿಗಬಹುದು.

ಭಾರತದ ಸಂಭಾವ್ಯ ಪ್ಲೇಯಿಂಗ್ XI: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ/ರಮಣದೀಪ್ ಸಿಂಗ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Mon, 27 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್