AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಆಂಗ್ಲರಿಗೆ ಕ್ಲೀನ್ ಸ್ವೀಪ್ ಭಯ; ಭಾರತಕ್ಕೆ ಪಾಕಿಸ್ತಾನದ ದಾಖಲೆ ಮುರಿಯುವ ತವಕ..!

IND vs ENG: ಕ್ರಿಕೆಟ್‌ನ ಮೂರು ಸ್ವರೂಪಗಳ ಬಗ್ಗೆ ಮಾತನಾಡುವುದಾದರೆ, ಭಾರತವು 32 ವರ್ಷಗಳ ನಂತರ ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಕ್ಲೀನ್ ಸ್ವೀಪ್ ಮಾಡುವ ಅವಕಾಶ ಸಿಕ್ಕಿದೆ.

IND vs ENG: ಆಂಗ್ಲರಿಗೆ ಕ್ಲೀನ್ ಸ್ವೀಪ್ ಭಯ; ಭಾರತಕ್ಕೆ ಪಾಕಿಸ್ತಾನದ ದಾಖಲೆ ಮುರಿಯುವ ತವಕ..!
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on:Jul 10, 2022 | 4:57 PM

Share

ಕಳೆದ ನಾಲ್ಕು ವರ್ಷಗಳಲ್ಲಿ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಎರಡು ಬಾರಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾ (Team India) ಈ ದಾಖಲೆ ಮಾಡಿದ ವಿಶ್ವದ ಮೊದಲ ತಂಡ ಎಂಬ ಹೆ್ಗ್ಗಳಿಕೆಗೆ ಪಾತ್ರವಾಗಿದೆ. ಶನಿವಾರ ನಡೆದ ಎರಡನೇ ಪಂದ್ಯವನ್ನು ಭಾರತ 49 ರನ್‌ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಇಂದು ನಾಟಿಂಗ್​ಹ್ಯಾಮ್​ನಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಭಾರತ ತಂಡ ತವರಿನಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ತಂಡವಾಗಲಿದೆ. ಈ ಮೂಲಕ ರೋಹಿತ್ (Rohit Sharma) ಅಂಡ್ ಕಂಪನಿಗೆ ಪಾಕ್ ದಾಖಲೆ ಮುರಿಯುವ ಅವಕಾಶವಿದೆ.

ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳೊಂದಿಗೆ..

ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು T20I ಗೆಲುವುಗಳಿಗೆ ಭಾರತವು ಪ್ರಸ್ತುತ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್‌ನೊಂದಿಗೆ ಟೈ ಆಗಿದೆ. ಭಾರತ ತವರು ನೆಲದಲ್ಲಿ ಇದುವರೆಗೆ 8 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡವನ್ನು 4 ಬಾರಿ ಸೋಲಿಸಿದೆ. 7 ಪಂದ್ಯಗಳನ್ನು ಆಡಿರುವ ಪಾಕಿಸ್ತಾನ 4 ಬಾರಿ ಮತ್ತು 12 ಪಂದ್ಯಗಳನ್ನು ಆಡಿರುವ ವೆಸ್ಟ್ ಇಂಡೀಸ್ ತಂಡ 4 ಬಾರಿ ಗೆದ್ದಿದೆ. ಮೂರನೇ ಟಿ20 ಪಂದ್ಯವನ್ನು ಗೆದ್ದರೆ ಭಾರತ ಈ ಎರಡು ತಂಡಗಳನ್ನು ಮೀರಿಸುತ್ತದೆ.

ಇದನ್ನೂ ಓದಿ
Image
Rohit Sharma: ಟಿ20 ಕ್ರಿಕೆಟ್​ನಲ್ಲಿ ತ್ರಿಶತಕ ಸಿಡಿಸಿದ ಹಿಟ್​ಮ್ಯಾನ್! ಈ ದಾಖಲೆ ಮಾಡಿದ ಮೊದಲ ಭಾರತೀಯ
Image
India vs England 3rd T20 Match Live Streaming: ಇಂದೇ ಅಂತಿಮ ಟಿ20 ಕದನ; ಪಂದ್ಯದ ಆರಂಭ ಯಾವಾಗ?

32 ವರ್ಷಗಳ ನಂತರ ಕ್ಲೀನ್ ಸ್ವೀಪ್​ಗೆ ಅವಕಾಶ

ಕ್ರಿಕೆಟ್‌ನ ಮೂರು ಸ್ವರೂಪಗಳ ಬಗ್ಗೆ ಮಾತನಾಡುವುದಾದರೆ, ಭಾರತವು 32 ವರ್ಷಗಳ ನಂತರ ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಕ್ಲೀನ್ ಸ್ವೀಪ್ ಮಾಡುವ ಅವಕಾಶ ಸಿಕ್ಕಿದೆ. ಇದಕ್ಕೂ ಮುನ್ನ 1990ರಲ್ಲಿ ಭಾರತ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿತ್ತು. ಆದರೆ ಟಿ20 ಮತ್ತು ಟೆಸ್ಟ್ ಸರಣಿಗಳಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಮಾಡಲು ಸಾಧ್ಯವಾಗಿಲ್ಲ.

ವಿರಾಟ್ ಫಾರ್ಮ್ ಮೇಲೆ ಅನುಮಾನ..!

ಎರಡನೇ ಟಿ20ಯಲ್ಲಿ ವಿರಾಟ್ ಕೊಹ್ಲಿ ರನ್ ಗಳಿಸುವಲ್ಲಿ ವಿಫಲರಾದರು. ಕೇವಲ 1 ರನ್‌ಗೆ ಕೊಹ್ಲಿ ಔಟಾದರು. ಆದರೆ, ಮೂರನೇ ಪಂದ್ಯದಲ್ಲಿ ಅವರಿಗೆ ಮತ್ತೊಂದು ಅವಕಾಶ ಸಿಗುವುದು ಖಚಿತವಾಗಿದೆ. ಅಂದರೆ ಅತ್ಯುತ್ತಮ ಫಾರ್ಮ್​ನಲ್ಲಿರುವ ದೀಪಕ್ ಹೂಡಾ ಮತ್ತೆ ಬೆಂಚ್​ಗೆ ಸೀಮಿತವಾಗಬೇಕಾಗಬಹುದು.

ನಾಟಿಂಗ್​ಹ್ಯಾಮ್​ನಲ್ಲಿ ಭಾರತದ ನಾಲ್ಕನೇ ಪಂದ್ಯ

ಭಾರತ ತಂಡ ನಾಟಿಂಗ್‌ಹ್ಯಾಮ್‌ನಲ್ಲಿ ಇದುವರೆಗೆ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಎರಡರಲ್ಲಿ ಗೆದ್ದು ಒಂದರಲ್ಲಿ ಸೋತಿದೆ. ಆದರೆ ಭಾರತ ಇಲ್ಲಿಯವರೆಗೆ ಇಂಗ್ಲೆಂಡ್ ವಿರುದ್ಧ ಯಾವುದೇ ಪಂದ್ಯವನ್ನು ಆಡಿಲ್ಲ.

ನಾಟಿಂಗ್​ಹ್ಯಾಮ್​ನಲ್ಲಿ 7 ಬಾರಿ ಮೊದಲು ಬ್ಯಾಟ್ ಮಾಡಿದ ತಂಡ ಇದುವರೆಗೆ 12 ಪಂದ್ಯಗಳನ್ನು ಗೆದ್ದಿದೆ. 2021ರಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 232 ರನ್‌ಗಳ ಬೃಹತ್ ಸ್ಕೋರ್ ಮಾಡಿತ್ತು.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ರಿಷಬ್ ಪಂತ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್.

ಇಂಗ್ಲೆಂಡ್: ಜೇಸನ್ ರಾಯ್, ಜೋಸ್ ಬಟ್ಲರ್ (ನಾಯಕ), ಡೇವಿಡ್ ಮಲಾನ್, ಲಿಯಾಮ್ ಲಿವಿಂಗ್‌ಸ್ಟನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಸ್ಯಾಮ್ ಕುರಾನ್, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರಿಚರ್ಡ್ ಗ್ಲೀಸನ್, ಮಾರ್ಕ್ ಪಾರ್ಕಿನ್ಸನ್.

Published On - 4:57 pm, Sun, 10 July 22