IND vs ENG: 14 ತಿಂಗಳ ವನವಾಸ ಮುಗಿಸಿದ ಶಮಿ; ಭಾರತ ತಂಡದಲ್ಲಿ ಒಂದು ಬದಲಾವಣೆ

|

Updated on: Jan 28, 2025 | 6:52 PM

IND vs ENG: ರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಮೂರನೇ ಪಂದ್ಯ ರಾಜ್‌ಕೋಟ್‌ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಅದೇ ಸಮಯದಲ್ಲಿ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ಆಡುವ ಹನ್ನಿಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

IND vs ENG: 14 ತಿಂಗಳ ವನವಾಸ ಮುಗಿಸಿದ ಶಮಿ; ಭಾರತ ತಂಡದಲ್ಲಿ ಒಂದು ಬದಲಾವಣೆ
ಭಾರತ- ಇಂಗ್ಲೆಂಡ್
Follow us on

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸದ್ಯ ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯವನ್ನೂ ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಇರಾದೆಯಲ್ಲಿ ಸೂರ್ಯ ಪಡೆ ಇದೆ. ಇತ್ತ ಸರಣಿ ಸೋಲುವ ಆತಂಕದಲ್ಲಿರುವ ಆಂಗ್ಲರು ಕೂಡ ಮತ್ತೆ ಗೆಲುವನ ಟ್ರ್ಯಾಕ್​ಗೆ ಮರಳಲು ಎದುರು ನೋಡುತ್ತಿದ್ದಾರೆ. ಇದೀಗ ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಸತತ ಮೂರನೇ ಪಂದ್ಯದಲ್ಲೂ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದರೊಂದಿಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಶಮಿ ಇನ್, ಅರ್ಷದೀಪ್ ಔಟ್

ಮೂರನೇ ಪಂದ್ಯಕ್ಕೆ ಟೀಂ ಇಂಡಿಯಾದ ಆಡುವ 11 ರ ಬಳಗದಲ್ಲಿ ದೊಡ್ಡ ಬದಲಾವಣೆಯಾಗಿದೆ. ಮೊದಲೆರಡು ಪಂದ್ಯಗಳಲ್ಲಿ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದ ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅವರ ಜಾಗದಲ್ಲಿ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲಾಗಿದೆ. ಇದರೊಂದಿಗೆ ಬರೋಬ್ಬರಿ 14 ತಿಂಗಳ ನಂತರ ಶಮಿ ಅಂತರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ. ಮೊಹಮ್ಮದ್ ಶಮಿ ಈ ಹಿಂದೆ 2023 ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಕೊನೆಯ ಪಂದ್ಯವನ್ನು ಆಡಿದ್ದರು.

2022 ರಲ್ಲಿ ಕೊನೆಯ ಟಿ20 ಪಂದ್ಯ

ಅಲ್ಲದೆ ಟಿ20 ಮಾದರಿಯಲ್ಲಿ ಶಮಿ ಕೊನೆಯದಾಗಿ 2022ರ ಟಿ20 ವಿಶ್ವಕಪ್​ನಲ್ಲಿ ತಂಡದ ಪರ ಆಡಿದ್ದರು. ಈ ಪಂದ್ಯಕ್ಕೂ ಮುನ್ನ ಮೊಹಮ್ಮದ್ ಶಮಿ ಟೀಂ ಇಂಡಿಯಾ ಪರ ಕೇವಲ 23 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ಅವಧಿಯಲ್ಲಿ ಅವರು 8.94 ಎಕಾನಮಿಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದಾರೆ. ಶಮಿಯನ್ನು ಟಿ20 ತಂಡದಲ್ಲಿ ಆಡಿಸುತ್ತಿರುವ ಹಿಂದಿನ ಕಾರಣವೆಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ. ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದಿರುವ ಶಮಿ ಎಷ್ಟರ ಮಟ್ಟಿಗೆ ಫಿಟ್ ಆಗಿದ್ದಾರೆ ಎಂಬುದನ್ನು ತಿಳಿಯಲು ಬಿಸಿಸಿಐ, ಶಮಿಗೆ ಟಿ20 ತಂಡದಲ್ಲಿ ಅವಕಾಶ ನೀಡಿದೆ.

ಉಭಯ ತಂಡಗಳು

ಭಾರತ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಬೆನ್ ಡಕೆಟ್, ಫಿಲ್ ಸಾಲ್ಟ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟನ್, ಜೇಮೀ ಸ್ಮಿತ್, ಜೇಮೀ ಓವರ್‌ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಮಾರ್ಕ್ ವುಡ್ ಮತ್ತು ಆದಿಲ್ ರಶೀದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Tue, 28 January 25