
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಆರಂಭದಲ್ಲೇ ಸಮಬಲಗೊಂಡಿದೆ. ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 28 ರನ್ಗಳ ರೋಚಕ ಜಯ ಸಾಧಿಸಿದರೆ, ಇದೀಗ ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 106 ರನ್ಗಳ ಅಮೋಘ ಗೆಲುವು ದಾಖಲಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲಗೊಂಡಂತಾಗಿದೆ. ಹೀಗಾಗಿಯೇ ಮೂರನೇ ಪಂದ್ಯವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇಂಡೊ-ಇಂಗ್ಲೆಂಡ್ ಸರಣಿಯ ಮೂರನೇ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಹೀಗಾಗಿಯೇ ಉಭಯ ತಂಡಗಳ ಪಾಲಿಗೂ ಮೂರನೇ ಪಂದ್ಯ ಮಹತ್ವದ್ದಾಗಿ ಮಾರ್ಪಟ್ಟಿದೆ.
ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಿದ್ದಾರೆ. ಅಂದರೆ ಈ ಹಿಂದೆ ಮೊದಲೆರಡು ಪಂದ್ಯಗಳಿಗೆ ಮಾತ್ರ ಟೀಮ್ ಇಂಡಿಯಾವನ್ನು ಘೋಷಿಸಲಾಗಿತ್ತು.
ಇದೀಗ ಉಳಿದಿರುವ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಘೋಷಿಸಲಿದ್ದು, ಈ ಬಳಗದಿಂದ ಗಾಯಗೊಂಡಿರುವ ರವೀಂದ್ರ ಜಡೇಜಾ ಹೊರಗುಳಿಯುವ ಸಾಧ್ಯತೆಯಿದೆ. ಹಾಗೆಯೇ ಮೊದಲೆರಡು ಪಂದ್ಯಗಳಿಂದ ಹಿಂದೆ ಸರಿದಿದ್ದ ವಿರಾಟ್ ಕೊಹ್ಲಿ 3ನೇ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ.
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
ಇದನ್ನೂ ಓದಿ: ಬರೋಬ್ಬರಿ 18 ವಿಕೆಟ್ಗಳು: ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕ್ವೆನಾ
ಭಾರತ ಟೆಸ್ಟ್ ತಂಡ (ಪ್ರಸ್ತುತ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.