ರಾಜ್ಕೋಟ್ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನ ಎರಡನೇ ದಿನ ಭಾರತ (India vs England) ಆಲೌಟ್ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 326 ರನ್ ಗಳಿಸಿದ್ದ ಟೀಮ್ ಇಂಡಿಯಾ ಇದೀಗ 445 ರನ್ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿದೆ. ನಿನ್ನೆ 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಪದಾರ್ಪಣೆ ಪಂದ್ಯದಲ್ಲಿ ಧ್ರುವ್ ಜುರೆಲ್ 46 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಇಂಗ್ಲೆಂಡ್ ಪರ ಮಾರ್ಕ್ ವುಡ್ 4 ವಿಕೆಟ್ ಕಬಳಿಸಿದರು.
ಮೊದಲ ದಿನ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಶತಕ ಗಳಿಸಿದರು. ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್ ಕೂಡ ಅರ್ಧಶತಕ ಗಳಿಸಿದರು. ಇಂಗ್ಲೆಂಡ್ ಬೌಲರ್‌ಗಳಲ್ಲಿ ಮಾರ್ಕ್ ವುಡ್ 3 ಮತ್ತು ಟಾಮ್ ಹಾರ್ಟ್ಲಿ ಒಂದು ವಿಕೆಟ್ ಪಡೆದಿದ್ದರು.
ಆರ್. ಅಶ್ವಿನ್ನಿಂದ ನಡೆಯಿತು ದೊಡ್ಡ ತಪ್ಪು: ಬ್ಯಾಟಿಂಗ್ ಬರುವ ಮುನ್ನವೇ ಇಂಗ್ಲೆಂಡ್ಗೆ 5 ರನ್
ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ 10, ಶುಭ್ಮನ್ ಗಿಲ್ 0 ಮತ್ತು ಪಾಟಿದಾರ್ 5 ರನ್ ವಿಕೆಟ್ ಕಳೆದುಕೊಂಡಿತು. ಈ ಸಂದರ್ಭ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ 204 ರನ್‌ಗಳ ಜೊತೆಯಾಟ ಆಡಿದರು. ಈ ಜೊತೆಯಾಟ ರೋಹಿತ್ ವಿಕೆಟ್‌ನೊಂದಿಗೆ ಮುರಿದುಬಿತ್ತು. 131 ರನ್‌ಗಳಿದ್ದಾಗ ರೋಹಿತ್ ಮಾರ್ಕ್ ವುಡ್ಗೆ ವಿಕೆಟ್ ಒಪ್ಪಿಸಿದರು. ನಂತ್ ಸರ್ಫರಾಜ್ – ಜಡೇಜಾ 77 ರನ್‌ಗಳ ಕಾಣಿಕೆ ನೀಡಿದರು.
ಇಂದು ಎರಡನೇ ದಿನ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಹೆಚ್ಚುಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕುಲ್ದೀಪ್ ಯಾದವ್ 4 ರನ್ಗೆ ನಿರ್ಗಮಿಸಿದರು. ಬಳಿಕ ಆರ್. ಅಶ್ವಿನ್ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಜೊತೆಯಾಟ ಆಡಿ ಆಸರೆಯಾದರು. ಆದರೆ, ಚೆನ್ನಾಗಿಯೆ ಆಡುತ್ತಿದ್ದ ಅಶ್ವಿನ್ 37 ರನ್ಗೆ ನಿರ್ಗಮಿಸಿದರೆ, ಧ್ರುವ್ (46) ಅರ್ಧಶತಕದ ಅಂಚಿನಲ್ಲಿ ಎಡವಿದರು.
ಕೊನೆಯಲ್ಲಿ ಜಸ್ಪ್ರೀತ್ ಬುಮ್ರಾ 26 ರನ್ಗಳಿಗೆ ಔಟ್ ಆಗುವ ಮೂಲಕ ಟೀಮ್ ಇಂಡಿಯಾ ಆಲೌಟ್ ಆಯಿತು. ಮೊಹಮ್ಮದ್ ಸಿರಾಜ್ 3 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತ 130.5 ಓವರ್ಗಳಲ್ಲಿ 445 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇಂಗ್ಲೆಂಡ್ ಪರ ಮಾರ್ಕ್ ವುಡ್ 4 ವಿಕೆಟ್ ಕಿತ್ತರೆ, ರೆಹಾನ್ ಅಹ್ಮದ್ 2, ಜೇಮ್ಸ್ ಆಂಡರ್ಸನ್, ಹಾರ್ಟ್ಲಿ ಮತ್ತು ರೂಟ್ ತಲಾ 1 ವಿಕೆಟ್ ಪಡೆದರು.
ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದಾಗ ಸರ್ಫರಾಜ್ ಪತ್ನಿ ಏನು ಮಾಡಿದ್ರು ಗೊತ್ತೇ?
ಭಾರತ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ XI:
ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:35 pm, Fri, 16 February 24