IND vs ENG 3rd Test, Day 2: ಭಾರತಕ್ಕೆ ಧ್ರುವ್-ಅಶ್ವಿನ್ ಆಸರೆ: 400 ರನ್​ಗಳತ್ತ ರೋಹಿತ್ ಪಡೆ

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನದ ಆರಂಭದಲ್ಲೇ ಭಾರತ ಕುಸಿತ ಕಂಡಿತು. ಮೊದಲ ದಿನ ಶತಕ ಸಿಡಿಸಿದ್ದ ರವೀಂದ್ರ ಜಡೇಜಾ ಎರಡನೇ ದಿನ ಮೋಡಿ ಮಾಡುವಲ್ಲಿ ವಿಫಲರಾದರು. ತಮ್ಮ ಖಾತೆಗೆ ಕೇವಲ 2 ರನ್ ಸೇರಿಸಿ ನಿರ್ಗಮಿಸಿದರು.

IND vs ENG 3rd Test, Day 2: ಭಾರತಕ್ಕೆ ಧ್ರುವ್-ಅಶ್ವಿನ್ ಆಸರೆ: 400 ರನ್​ಗಳತ್ತ ರೋಹಿತ್ ಪಡೆ
Dhruv Jurel and R Ashwin
Follow us
Vinay Bhat
|

Updated on: Feb 16, 2024 | 11:34 AM

ರಾಜ್ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನದಾಟದ ಆರಂಭದಲ್ಲೇ ಭಾರತ (India vs England) ಕುಸಿತ ಕಂಡಿತು. ಆದರೆ, ರವಿಚಂದ್ರನ್ ಅಶ್ವಿನ್ ಹಾಗೂ ಪದಾರ್ಪಣೆ ಪಂದ್ಯ ಆಡುತ್ತಿರುವ ಧ್ರುವ್ ಜುರೆಲ್ ಆಸರೆಯಾಗಿ ನಿಂತಿದ್ದು ತಂಡದ ಮೊತ್ತ 400ರ ಗಡಿಯತ್ತ ತಲುಪಿದೆ. ಸದ್ಯ ಭೋಜನ ವಿರಾಮದ ವೇಳೆಗೆ ಭಾರತ 7 ವಿಕೆಟ್ ಕಳೆದುಕೊಂಡು 388 ರನ್ ಗಳಿಸಿದೆ. ಅಶ್ವಿನ್ 25 ಹಾಗೂ ಧ್ರುವ್ 31 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಮೊದಲ ದಿನ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಶತಕ ಗಳಿಸಿದರು. ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್ ಕೂಡ ಅರ್ಧಶತಕ ಗಳಿಸಿದರು. ಇಂಗ್ಲೆಂಡ್ ಬೌಲರ್‌ಗಳಲ್ಲಿ ಮಾರ್ಕ್ ವುಡ್ 3 ಮತ್ತು ಟಾಮ್ ಹಾರ್ಟ್ಲಿ ಒಂದು ವಿಕೆಟ್ ಪಡೆದಿದ್ದರು.

ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದಾಗ ಸರ್ಫರಾಜ್ ಪತ್ನಿ ಏನು ಮಾಡಿದ್ರು ಗೊತ್ತೇ?

ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ 10, ಶುಭ್​ಮನ್ ಗಿಲ್ 0 ಮತ್ತು ಪಾಟಿದಾರ್ 5 ರನ್  ವಿಕೆಟ್ ಕಳೆದುಕೊಂಡಿತು. ಈ ಸಂದರ್ಭ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ 204 ರನ್‌ಗಳ ಜೊತೆಯಾಟ ಆಡಿದರು. ಈ ಜೊತೆಯಾಟ ರೋಹಿತ್ ವಿಕೆಟ್‌ನೊಂದಿಗೆ ಮುರಿದುಬಿತ್ತು. 131 ರನ್‌ಗಳಿದ್ದಾಗ ರೋಹಿತ್ ಮಾರ್ಕ್ ವುಡ್​ಗೆ ವಿಕೆಟ್ ಒಪ್ಪಿಸಿದರು. ನಂತ್ ಸರ್ಫರಾಜ್ – ಜಡೇಜಾ 77 ರನ್​ಗಳ ಕಾಣಿಕೆ ನೀಡಿದರು.

ಇಂದು ಎರಡನೇ ದಿನ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕುಲ್ದೀಪ್ ಯಾದವ್ 4 ರನ್​ಗೆ ನಿರ್ಗಮಿಸಿದರು. ಬಳಿಕ ಆರ್. ಅಶ್ವಿನ್ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಜೊತೆಯಾಟ ಆಡಿ ಮುನ್ನುಗ್ಗುತ್ತಿದ್ದಾರೆ.

ಪಂದ್ಯ ನೋಡಲು ಬರಲ್ಲ ಎಂದಿದ್ದ ಸರ್ಫರಾಜ್ ತಂದೆ: ಬರುವಂತೆ ಮಾಡಿದ್ದು ಸೂರ್ಯಕುಮಾರ್

ಭಾರತ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್ ಪ್ಲೇಯಿಂಗ್ XI:

ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್