AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 3rd Test: ಆಗಸ್ಟ್ 25 ರಿಂದ ಭಾರತ- ಇಂಗ್ಲೆಂಡ್ ಮೂರನೇ ಟೆಸ್ಟ್: ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಇಲ್ಲಿದೆ ಮಾಹಿತಿ

ನಾಳೆಯಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಲೀಡ್ಸ್​ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತದ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

India vs England 3rd Test: ಆಗಸ್ಟ್ 25 ರಿಂದ ಭಾರತ- ಇಂಗ್ಲೆಂಡ್ ಮೂರನೇ ಟೆಸ್ಟ್: ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಇಲ್ಲಿದೆ ಮಾಹಿತಿ
India vs England
TV9 Web
| Updated By: Vinay Bhat|

Updated on: Aug 24, 2021 | 7:10 AM

Share

ಆಗಸ್ಟ್ 25 ಬುಧವಾರದಿಂದ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಬಹುನಿರೀಕ್ಷಿತ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಒಂಬತ್ತು ದಿನಗಳ ದೀರ್ಘ ವಿರಾಮದ ಬಳಿಕ ನಡೆಯುತ್ತಿರುವ ಪಂದ್ಯ ಆಗಿರುವುದರಿಂದ ಉಭಯ ತಂಡಗಳು ಮಾಸ್ಟರ್ ಪ್ಲಾನ್​ನೊಂದಿಗೆ ಕಣಕ್ಕಿಳಿಯಲಿವೆ. ಟೀಮ್ ಇಂಡಿಯಾದಲ್ಲಿ (Team India) ಈ ಪಂದ್ಯಕ್ಕೆ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ. ಇತ್ತ ಇಂಗ್ಲೆಂಡ್ ತಂಡಕ್ಕೆ ಇಂಜುರಿ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸ್ಟಾರ್ ಆಟಗಾರ ಮಾರ್ಕ್ ವುಡ್ (Mark Wood) ಹೊರಗುಳಿಯಬೇಕಾಗಿದೆ.

ನ್ಯಾಟಿಂಗ್​ಹ್ಯಾಮ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆ ಸುಲಭವಾಗಿ ಗೆಲುವು ಸಾಧಿಸಬಹುದಿತ್ತು. ಆದರೆ, ಅಂತಿಮ ದಿನ ಮಳೆಯದ್ದೇ ಆಟ ನಡೆದ ಕಾರಣ ಭಾರತದ ಗೆಲುವಿನ ಕನಸು ಕಮರಿಹೋಯಿತು. ಆದರೆ, ಎರಡನೇ ಪಂದ್ಯದಲ್ಲಿ ಹಾಗಾಗಲಿಲ್ಲ. ವಿರಾಟ್ ಪಡೆ 151 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ1-0 ಮುನ್ನಡೆ ಸಾಧಿಸಿತು.

ಸದ್ಯ ನಾಳೆಯಿಂದ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಲೀಡ್ಸ್​ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತದ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ. ಹೆಡಿಂಗ್ಲೆ ಪಿಚ್ ಪಂದ್ಯದುದ್ದಕ್ಕೂ ವೇಗದ ಬೌಲರ್‌ಗಳಿಗೆ ಹೆಚ್ಚಿನ ಸಹಕಾರಿಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬ್ಯಾಟ್ಸ್‌ಮನ್‌ಗಳಿಗೂ ಪೂರಕವಾಗಿ ವರ್ತಿಸಲಿದೆ. ನಾಲ್ಕು ಮತ್ತು ಐದನೇ ದಿನದಲ್ಲಿ ಸ್ಪಿನ್ನರ್‌ಗಳು ಕೂಡ ಪಿಚ್‌ನ ಲಾಭವನ್ನು ಪಡೆಯುವ ಅವಕಾಶಗಳಿದೆ.

ಇನ್ನೂ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ತುಂಬಾ ಕಡಿಮೆಯಿದೆ. ಐದು ದಿನಗಳ ಕಾಲವೂ ಪಂದ್ಯ ನಡೆಯಲು ಪೂರಕವಾದ ವಾತಾವರಣವಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಸಂತಸದ ಸುದ್ದಿ. ಸರಾಸರಿ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿದೆ. ಪಂದ್ಯ ನಡೆಯುವ ಐದು ದಿನಗಳಲ್ಲಿಯೂ ಮಳೆಯಾಗುವ ಸಾಧ್ಯತೆ ತುಂಬಾ ವಿರಳವಾಗಿದೆ.

ಇಂಗ್ಲೆಂಡ್​ನಲ್ಲಿ ಬದಲಾವಣೆ?:

ಖಂಡಿತವಾಗಿಯೂ ಮೂರನೇ ಟೆಸ್ಟ್​ಗೆ ಇಂಗ್ಲೆಂಡ್ ತಂಡದಲ್ಲಿ ದೊಡ್ಡ ಬದಲಾವಣೆ ಆಗುವ ನಿರೀಕ್ಷೆ ಇದೆ. ಯಾಕೆಂದರೆ ಮೂರು ವರ್ಷಗಳ ಬಳಿಕ ಡೇವಿಡ್ ಮಲನ್ ತಂಡ ಸೇರಿಕೊಂಡಿದ್ದಾರೆ. ಇಂಜುರಿಯಿಂದ ಸ್ಟಾರ್ ಬೌಲರ್ ಮಾರ್ಕ್​ ವುಡ್ ಲಭ್ಯರಿಲ್ಲ. ಹೀಗಾಗಿ ತಂಡದಲ್ಲಿ ಕನಿಷ್ಠ ಮೂರು ಬದಲಾವಣೆ ಆಗುವುದು ಖಚಿತ ಎನ್ನಲಾಗಿದೆ.

ಭಾರತದಲ್ಲಿ ಬದಲಾವಣೆ?:

ಟೀಮ್ ಇಂಡಿಯಾದಲ್ಲೂ ಪ್ರಮುಖ ಎರಡು ಬದಲಾವಣೆಯ ಗಾಳಿ ಬೀಸುತ್ತಿದೆ. ಕಳಪೆ ಫಾರ್ಮ್​ನಲ್ಲಿರುವ ಚೇತೇಶ್ವರ್ ಪೂಜಾರ ಕೈಬಿಟ್ಟು ಸೂರ್ಯಕುಮಾರ್​ ಯಾದವ್​ಗೆ ಅವಕಾಶ ನೀಡುವ ಸಾಧ್ಯತೆ ಇದೆ. ಅಂತೆಯೆ ಮೊದಲೆರಡು ಟೆಸ್ಟ್​ನಿಂದ ಹೊರಗಿದ್ದ ರವಿಚಂದ್ರನ್ ಅಶ್ವಿನ್ ಅವರು ರವೀಂದ್ರ ಜಡೇಜಾ ಜಾಗದಲ್ಲಿ ಕಣಕ್ಕಿಳಿಯಬಹುದು.

ವಿನೇಶ್ ಫೋಗಟ್ ಬಳಿಕ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದ ಭಜರಂಗ್ ಪುನಿಯಾ! ಕಾರಣವೇನು ಗೊತ್ತಾ?

Tokyo Paralympics: ಪ್ಯಾರಾಲಿಂಪಿಕ್ಸ್ ಆಗಸ್ಟ್ 24 ರಿಂದ ಆರಂಭ; ಭಾರತದ ಸ್ಪರ್ಧಿಗಳ ಸಂಪೂರ್ಣ ವೇಳಾಪಟ್ಟಿ ಹೀಗಿದೆ

(India vs England 3rd Test IND vs ENG 3rd Test Weather report Full Schedule Date Time Venue all you need to know)

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು