
ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ಕಠಿಣ ಸವಾಲು ನೀಡಲು ಟೀಂ ಇಂಡಿಯಾ (India vs England 3rd Test) ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯ ಜುಲೈ 10 ರಿಂದ ಆರಂಭವಾಗಲಿದೆ. ಈ ಪಂದ್ಯದ ಗೆಲುವು ಉಭಯ ತಂಡಗಳಿಗೂ ಬಹಳ ಅವಶ್ಯಕವಾಗಿದೆ. ಏಕೆಂದರೆ ಇಂಗ್ಲೆಂಡ್ ಮೊದಲ ಪಂದ್ಯವನ್ನು ಗೆದ್ದರೆ, ಭಾರತ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಈಗ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ತಂಡವು ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ. ಅದರಲ್ಲೂ ಲಾರ್ಡ್ಸ್ ಮೈದಾನದಲ್ಲಿ (Lords Cricket Ground) ಗೆಲುವು ಸಾಧಿಸುವುದೆಂದರೆ ಎರಡೂ ತಂಡಗಳಿಗೆ ಅದು ಅವಿಸ್ಮರಣೀಯ ಕ್ಷಣವಾಗಿರುತ್ತದೆ.
ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಏನೆಂದರೆ ಪಂದ್ಯದ ಐದು ದಿನಗಳಲ್ಲೂ ಮಳೆ ಬರುವ ಸಾಧ್ಯತೆಗಳಿಲ್ಲ. ಹೀಗಾಗಿ ಎರಡೂ ತಂಡಗಳ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿಯೂ ಮಳೆ ಇತ್ತಾದರೂ, ಆಟಕ್ಕೆ ಹೆಚ್ಚು ತೊಂದರೆ ನೀಡಿರಲಿಲ್ಲ.
ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯ ಜುಲೈ 10 ರಿಂದ ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ. ಹೀಗಾಗಿ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಇದರ ನೇರಪ್ರಸಾರ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಇರುತ್ತದೆ. ಪ್ರತಿಯೊಬ್ಬರೂ ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
IND vs ENG: ಲಾರ್ಡ್ಸ್ ಟೆಸ್ಟ್ಗೆ ಹೇಗಿರಲಿದೆ ಭಾರತದ ಪ್ಲೇಯಿಂಗ್ 11? ರಿಷಭ್ ಪಂತ್ ಹೇಳಿದ್ದೇನು?
ಇಂಗ್ಲೆಂಡ್ ಆಡುವ XI: ಬೆನ್ ಡಕೆಟ್, ಜ್ಯಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್ ಮತ್ತು ಶೋಯೆಬ್ ಬಶೀರ್.
ಭಾರತದ ಸಂಭಾವ್ಯ ಆಡುವ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಆಕಾಶ್ ದೀಪ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ