ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿದೆ. ಮೊದಲ ಇನ್ನಿಂಗ್ಸ್ನಲ್ಲಿ ಹೀನಾಯಕ ಪ್ರದರ್ಶನ ತೋರಿದ ಟೀಮ್ ಇಂಡಿಯಾ (Team India) ಎರಡನೇ ಇನ್ನಿಂಗ್ಸ್ನಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿದ್ದು 3ನೇ ದಿನದಾಟದ ಅಂತ್ಯಕ್ಕೆ 215 ರನ್ ಬಾರಿಸಿ ಕೇವಲ 2 ವಿಕೆಟ್ಗಳನ್ನಷ್ಟೆ ಕಳೆದುಕೊಂಡಿದೆ. ಚೇತೇಶ್ವರ್ ಪೂಜಾರ (Cheteshwar Pujara) ಹಾಗೂ ನಾಯಕ ವಿರಾಟ್ ಕೊಹ್ಲಿ (Virat Kohli) ತಂಡಕ್ಕೆ ಆಸರೆಯಾಗಿ ನಿಂತಿದ್ದಾರೆ. ಈ ನಡುವೆ ಕೊಹ್ಲಿ ಹೊಸ ದಾಖಲೆಯ ಹೊಸ್ತಿಲಲ್ಲಿದ್ದಾರೆ.
ಎರಡನೇ ಇನ್ನಿಂಗ್ಸ್ನಲ್ಲಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿರುವ ವಿರಾಟ್ 94 ಎಸೆತಗಳಲ್ಲಿ ಅಜೇಯ 45 ರನ್ ಗಳಿಸಿದ್ದಾರೆ. ಇಂದು ನಾಲ್ಕನೇ ದಿನ ಕೊಹ್ಲಿ ಕೇವಲ 11 ರನ್ ಗಳಿಸಿದರೆ 23,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ಸಾಧನೆ ಮಾಡಲಿದ್ದಾರೆ. ಒಟ್ಟು 437 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕಿಂಗ್ ಕೊಹ್ಲಿ ಈವರೆಗೆ 22,989 ಅಂತರರಾಷ್ಟ್ರೀಯ ರನ್ ಬಾರಿಸಿದ್ದಾರೆ.
ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಕಲೆಹಾಕಿದ ಮೂರನೇ ಬ್ಯಾಟ್ಸ್ಮನ್ ಕೊಹ್ಲಿ ಆಗಲಿದ್ದಾರೆ. ಸದ್ಯ ಈ ಸಾಲಿನಲ್ಲಿ ಮೊದಲನೆಯವರಾಗಿ ಸಚಿನ್ ತೆಂಡೂಲ್ಕರ್ (34,357) ಮತ್ತು ಎರಡನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ (24,208) ಇದ್ದಾರೆ.
ಇನ್ನೂ ಸ್ಫೋಟಕ ಬ್ಯಾಟ್ಸ್ಮನ್ ರಿಷಭ್ ಪಂತ್ 2018ರಲ್ಲಿ 16 ಟೆಸ್ಟ್ ಸಿಕ್ಸರ್ ಬಾರಿಸುವ ಮೂಲಕ ನೂತನ ದಾಖಲೆಯನ್ನು ನಿರ್ಮಿಸಿದ್ದರು. ವರ್ಷವೊಂದರಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್ ಬಾರಿಸಿದ ಭಾರತದ ವಿಕೆಟ್ ಕೀಪರ್ ಎಂಬ ಹೊಸ ಮೈಲಿಗಲ್ಲನ್ನು ರಿಷಭ್ ಪಂತ್ ನಿರ್ಮಿಸಿದ್ದರು. ಸದ್ಯ ಈ ವರ್ಷ 15 ಸಿಕ್ಸರ್ ಬಾರಿಸಿರುವ ಪಂತ್ ಇನ್ನೆರಡು ಸಿಕ್ಸರ್ ಬಾರಿಸಿದರೆ 2018ರಲ್ಲಿ ತಾನು ನಿರ್ಮಿಸಿದ ತನ್ನದೇ ದಾಖಲೆಯನ್ನು ಮುರಿದು ಹಾಕಲಿದ್ದಾರೆ.
ಇಂಗ್ಲೆಂಡ್ ತಂಡವನ್ನು 432 ರನ್ಗೆ ಆಲೌಟ್ ಮಾಡಿ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 34 ರನ್ ಗಳಿಸಿರುವಾಗ ಕೆ. ಎಲ್ ರಾಹುಲ್(8) ವಿಕೆಟ್ ಕಳೆದುಕೊಂಡಿತು. ಆದರೆ, ಎರಡನೇ ವಿಕೆಟ್ಗೆ ಎಚ್ಚರಿಕೆಯ ಜೊತೆಯಾಟ ಆಡಿದ ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ತಂಡದ ಮೊತ್ತವನ್ನು 100ರ ಗಡಿ ದಾಟಿಸಿದರು. ಈ ಬಾರಿ ಕೊಂಚ ಬಿರುಸಿನ ಆಟವಾಡಿದ ಹಿಟ್ಮ್ಯಾನ್ 7 ಬೌಂಡರಿ, 1 ಸಿಕ್ಸರ್ ಬಾರಿಸಿ 59 ರನ್ ಗಳಿಸಿದರು.
ಎರಡು ವಿಕೆಟ್ ಕಳೆದುಕೊಂಡಾಗ ಕುಗ್ಗದ ಭಾರತ ಮತ್ತೆ ಎದ್ದುನಿಂತಿತು. ಪೂಜಾರ ತಮ್ಮದೇ ಶೈಲಿಯ ಎಚ್ಚರಿಕೆಯ ಬ್ಯಾಟಿಂಗ್ ಮುಂದುವರೆಸಿದರೆ, ನಾಯಕ ವಿರಾಟ್ ಕೊಹ್ಲಿ ಇವರಿಗೆ ಅತ್ಯುತ್ತಮ ಸಾಥ್ ನೀಡಿದರು. 3ನೇ ದಿನದಾಟದ ಅಂತ್ಯಕ್ಕೆ ಭಾರತ 2 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿದೆ. 139 ರನ್ಗಳ ಹಿನ್ನಡೆಯಲ್ಲಿದೆ. ಪೂಜಾರ 180 ಎಸೆತಗಳಲ್ಲಿ 91 ರನ್ ಬಾರಿಸಿ ಮತ್ತು ಕೊಹ್ಲಿ 94 ಎಸೆತಗಳಲ್ಲಿ 45 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.
India vs England: ಶತಕದತ್ತ ಪೂಜಾರ, ಅರ್ಧಶತಕದತ್ತ ಕೊಹ್ಲಿ: ಇಂಗ್ಲೆಂಡ್ಗೆ ಶುರುವಾಗಿದೆ ನಡುಕ: 4ನೇ ದಿನ ಏನಾಗಲಿದೆ?
Rohit Sharma: ರೋಹಿತ್ ಸಿಡಿಸಿದ ಅಪ್ಪರ್ಕಟ್ ಸಿಕ್ಸರ್ ನೋಡಿದ್ರಾ?: ಹಿಟ್ಮ್ಯಾನ್ ಶಾಟ್ಗೆ ಕ್ರಿಕೆಟ್ ದಿಗ್ಗಜ ಫಿದಾ
(India vs England 3rd Test Team India Captain Virat Kohli needs 11 runs to create new record)