IND vs ENG: ಭಾರತ vs ಇಂಗ್ಲೆಂಡ್ ನಡುವಣ 4ನೇ ಟಿ20 ಪಂದ್ಯ ಯಾವಾಗ?
India vs England 4th T20: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲೂ ಭಾರತ ತಂಡ 2 ವಿಕೆಟ್ಗಳ ರೋಚಕ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಮೂರನೇ ಮ್ಯಾಚ್ನಲ್ಲಿ ಟೀಮ್ ಇಂಡಿಯಾವನ್ನು 26 ರನ್ಗಳಿಂದ
![IND vs ENG: ಭಾರತ vs ಇಂಗ್ಲೆಂಡ್ ನಡುವಣ 4ನೇ ಟಿ20 ಪಂದ್ಯ ಯಾವಾಗ?](https://images.tv9kannada.com/wp-content/uploads/2025/01/ind-vs-eng-8-1.jpg?w=1280)
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ರಣರೋಚಕಘಟ್ಟದತ್ತ ಸಾಗುತ್ತಿದೆ. ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ 2 ವಿಕೆಟ್ಗಳ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 26 ರನ್ಗಳ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯು 2-1 ಅಂತರಕ್ಕೇರಿದೆ.
ಇನ್ನು ನಾಲ್ಕನೇ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ 2-1 ಅಂತರದಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಕೊನೆಯ ಪಂದ್ಯಕ್ಕೂ ಮುನ್ನ ಸರಣಿ ವಶಪಡಿಸಿಕೊಳ್ಳಬೇಕಿದ್ದರೆ, ನಾಲ್ಕನೇ ಪಂದ್ಯದಲ್ಲಿ ಗೆಲ್ಲಲೇಬೇಕು.
ಅತ್ತ ಇಂಗ್ಲೆಂಡ್ ತಂಡವು ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ನಾಲ್ಕನೇ ಮ್ಯಾಚ್ನಲ್ಲಿ ಗೆಲುವು ಅನಿವಾರ್ಯ. ಹೀಗಾಗಿ ನಾಲ್ಕನೇ ಟಿ20 ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ಎದುರು ನೋಡಬಹುದು.
ಭಾರತ vs ಇಂಗ್ಲೆಂಡ್ ನಡುವಣ 4ನೇ ಟಿ20 ಪಂದ್ಯ ಯಾವಾಗ?
ಇಂಡೊ-ಇಂಗ್ಲೆಂಡ್ ನಡುವಣ 4ನೇ ಟಿ20 ಪಂದ್ಯವು ಜನವರಿ 31 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಶುರು?
ಈ ಪಂದ್ಯವು ರಾತ್ರಿ 7 ಗಂಟೆಗೆ ಆರಂಭವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟಿ20 ಪಂದ್ಯವನ್ನು ಸಹ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ಗಳಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.
ಉಭಯ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ?
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರಮಣ್ದೀಪ್ ಸಿಂಗ್, ಶಿವಂ ದುಬೆ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೆ ಮೊಹಮ್ಮದ್ ಸಿರಾಜ್ ವೈಲ್ಡ್ ಕಾರ್ಡ್ ಎಂಟ್ರಿ ಸಾಧ್ಯತೆ
ಇಂಗ್ಲೆಂಡ್ ಟಿ20 ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್ (ಉಪನಾಯಕ), ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.