IND vs ENG: ಭಾರತ- ಇಂಗ್ಲೆಂಡ್ ನಡುವಿನ 4ನೇ ಟಿ20 ಯಾವಾಗ, ಎಲ್ಲಿ ನಡೆಯಲಿದೆ? ಇಲ್ಲಿದೆ ವಿವರ
India vs England 4th T20: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಮತ್ತು ನಿರ್ಣಾಯಕ ಟಿ20 ಪಂದ್ಯ ಪುಣೆಯಲ್ಲಿ ಜನವರಿ 31 ರಂದು ನಡೆಯಲಿದೆ. ಮೂರನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತಂಡ ಸರಣಿಯನ್ನು ಗೆಲ್ಲುವ ಇರಾದೆಯಲ್ಲಿ ಕಣಕ್ಕಿಳಿದರೆ, ಇತ್ತ ಇಂಗ್ಲೆಂಡ್ ಸರಣಿಯನ್ನು ಸಮಬಲಗೊಳಿಸಲು ನೋಡುತ್ತಿದೆ. ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯಕ್ಕೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಮೂರನೇ ಟಿ20 ಪಂದ್ಯವನ್ನು ಸೋತು ಆಘಾತಕ್ಕೊಳಗಾಗಿರುವ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸರಣಿ ಗೆಲ್ಲುವ ಉದ್ದೇಶದೊಂದಿಗೆ ನಾಲ್ಕನೇ ಟಿ20 ಪಂದ್ಯಕ್ಕೆ ಪ್ರವೇಶಿಸಲಿದೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ನಡೆದ ಮೊದಲ ಎರಡು ಟಿ20 ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಪುಟಿದೇದ್ದ ಇಂಗ್ಲೆಂಡ್, ಭಾರತವನ್ನು 26 ರನ್‌ಗಳಿಂದ ಸೋಲಿಸಿತ್ತು. ಒಂದು ವೇಳೆ ಟೀಂ ಇಂಡಿಯಾ ನಾಲ್ಕನೇ ಟಿ20 ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್ ಗೆದ್ದರೆ ಸರಣಿ 2-2 ರಿಂದ ಸಮಬಲವಾಗಲಿದೆ.
ಇಂಗ್ಲೆಂಡ್ ವಿರುದ್ಧ ಭಾರತದ ಪ್ರಾಬಲ್ಯ
2017 ರಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. 2017 ರಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ, 2018 ರಲ್ಲಿ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ, 2021 ರಲ್ಲಿ ಐದು ಪಂದ್ಯಗಳ ಸರಣಿಯನ್ನು 3-2 ಅಂತರದಿಂದ ಮತ್ತು 2022 ರಲ್ಲಿ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಸೋಲಿಸಿತ್ತು. ಹೀಗಾಗಿ ಈ ಸರಣಿಯನ್ನು ಗೆಲ್ಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಶುಕ್ರವಾರ ಅಂದರೆ ಜನವರಿ 31 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅದಕ್ಕೂ ಅರ್ಧ ಗಂಟೆ ಮೊದಲು, ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ನೀವು ಯಾವ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಪ್ರಸಾರ ಮಾಡುವ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ಹೊಂದಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದ ನೇರ ಪ್ರಸಾರ ಎಲ್ಲಿ ಲಭ್ಯವಿರುತ್ತದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:30 pm, Thu, 30 January 25