AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಜೈಸ್ವಾಲ್- ಸುದರ್ಶನ್ ಅರ್ಧಶತಕ; ಮೊದಲ ದಿನದಾಟದಂತ್ಯಕ್ಕೆ ಭಾರತ 264/4

India vs England 4th Test: ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಯಶಸ್ವಿ ಜೈಸ್ವಾಲ್ (58) ಮತ್ತು ಸಾಯಿ ಸುದರ್ಶನ್ (61) ಅರ್ಧಶತಕ ಗಳಿಸಿದರು. ಆದರೆ ರಿಷಭ್ ಪಂತ್ ಗಂಭೀರ ಗಾಯಗೊಂಡು ಆಟದಿಂದ ಹೊರಗುಳಿದರು. ದಿನದಾಟದ ಅಂತ್ಯದ ವೇಳೆಗೆ ಭಾರತ 4 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿದೆ.

IND vs ENG: ಜೈಸ್ವಾಲ್- ಸುದರ್ಶನ್ ಅರ್ಧಶತಕ; ಮೊದಲ ದಿನದಾಟದಂತ್ಯಕ್ಕೆ ಭಾರತ 264/4
Team India
ಪೃಥ್ವಿಶಂಕರ
|

Updated on: Jul 23, 2025 | 11:20 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಬುಧವಾರದಿಂದ ಮ್ಯಾಂಚೆಸ್ಟರ್‌ನಲ್ಲಿ (Manchester Test) ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ಬ್ಯಾಟಿಂಗ್ ಆರಂಭಿಸಿದೆ. ಅದರಂತೆ ಮೊದಲ ದಿನದಂದು ಭಾರತ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳ ನಷ್ಟಕ್ಕೆ 264 ರನ್ ಕಲೆಹಾಕಿದೆ. ದಿನದಾಟದಂತ್ಯದ ವೇಳೆಗೆ, ರವೀಂದ್ರ ಜಡೇಜಾ 19 ರನ್‌ ಮತ್ತು ಶಾರ್ದೂಲ್ ಠಾಕೂರ್ 19 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ. ಉಳಿದಂತೆ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ಸಾಯಿ ಸುದರ್ಶನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಯಶಸ್ವಿ-ರಾಹುಲ್ ಉತ್ತಮ ಆರಂಭ

ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರ ಆರಂಭಿಕ ಜೋಡಿ ಭಾರತಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭವನ್ನು ನೀಡಿತು. ಆದರೆ ಎರಡನೇ ಸೆಷನ್‌ನಲ್ಲಿ ಕ್ರಿಸ್ ವೋಕ್ಸ್, ಕೆಎಲ್ ರಾಹುಲ್‌ ವಿಕೆಟ್ ಉರುಳಿಸಿ ಈ ಜೊತೆಯಾಟ ಮುರಿದರು. ರಾಹುಲ್ 98 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ಸಹಾಯದಿಂದ 46 ರನ್ ಗಳಿಸಿ ಔಟಾದರು. ಇದರ ನಂತರ, ಎಂಟು ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್‌ಗೆ ಮರಳಿದ ಲಿಯಾಮ್ ಡಾಸನ್, ಯಶಸ್ವಿ ಜೈಸ್ವಾಲ್‌ಗೆ ಪೆವಿಲಿಯನ್‌ ದಾರಿ ತೋರಿಸಿದರು. ಜೈಸ್ವಾಲ್ 107 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರು.

ಎರಡನೇ ಸೆಷನ್‌ನಲ್ಲಿ ಭಾರತ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಕೆಎಲ್ ಮತ್ತು ಯಶಸ್ವಿ ಹೊರತುಪಡಿಸಿ, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ನಾಯಕ ಶುಭ್​ಮನ್ ಗಿಲ್ ಕೂಡ ಔಟಾದರು. ಬೆನ್ ಸ್ಟೋಕ್ಸ್ ಅವರನ್ನು ಎಲ್‌ಬಿಡಬ್ಲ್ಯೂ ಆಗಿ ಔಟ್ ಮಾಡಿದರು. ಗಿಲ್​ಗೆ ಕೇವಲ 12 ರನ್ ಗಳಿಸಲು ಸಾಧ್ಯವಾಯಿತು. ಮೂರನೇ ಸೆಷನ್‌ನಲ್ಲಿ, ರಿಷಭ್ ಪಂತ್ ಮತ್ತು ಸಾಯಿ ಸುದರ್ಶನ್ ಜವಾಬ್ದಾರಿ ವಹಿಸಿಕೊಂಡು 72 ರನ್​ಗಳ ಜೊತೆಯಾಟವನ್ನಾಡಿದರು.

ಪಂತ್ ಕಾಲಿಗೆ ಗಾಯ

ಈ ವೇಳೆ ಪಂತ್ ಗಂಭೀರವಾಗಿ ಗಾಯಗೊಂಡಿದ್ದು ತಂಡಕ್ಕೆ ಆಘಾತ ನೀಡಿದೆ. ಪಂತ್ ತಮ್ಮ ಬಲಗಾಲಿಗೆ ಗಾಯ ಮಾಡಿಕೊಂಡಿದ್ದು ಅವರ ಕಾಲಿನಿಂದ ರಕ್ತ ಸುರಿದಿದೆ. ಹೀಗಾಗಿ ಅವರನ್ನು ಮೈದಾನದಿಂದ ಹೊರಗೆ ಕರೆದುಕೊಂಡು ಹೋಗಲು ಆಂಬ್ಯುಲೆನ್ಸ್ ಬಳಸಬೇಕಾಯಿತು. ಪಂತ್ ಗಾಯಗೊಳ್ಳುವ ಮೊದಲು 48 ಎಸೆತಗಳಲ್ಲಿ 37 ರನ್ ಗಳಿಸಿದ್ದರು. ಈ ವೇಳೆ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಬಾರಿಸಿದ್ದರು.

IND vs ENG: ಗಂಭೀರವಾಗಿ ಗಾಯಗೊಂಡ ರಿಷಭ್ ಪಂತ್! ಕಾಲಿನಿಂದ ಹರಿಯಿತು ರಕ್ತ; ವಿಡಿಯೋ ನೋಡಿ

ಜೈಸ್ವಾಲ್ ಜೊತೆಗೆ, ಸಾಯಿ ಸುದರ್ಶನ್ ಮೊದಲ ದಿನದಂದು ಅರ್ಧಶತಕ ಗಳಿಸಿದರು. ಇದು ಅವರ ಟೆಸ್ಟ್ ವೃತ್ತಿಜೀವನದ ಮೊದಲ ಅರ್ಧಶತಕವಾಗಿತ್ತು. ಆದರೆ ಅರ್ಧಶತಕದಬೆನ್ನಲ್ಲೇ ಸುದರ್ಶನ್, ಸ್ಟೋಕ್ಸ್​ಗೆ ವಿಕೆಟ್ ಒಪ್ಪಿಸಿದರು. ಸುದರ್ಶನ್ 151 ಎಸೆತಗಳಲ್ಲಿ ಏಳು ಬೌಂಡರಿಗಳ ಸಹಾಯದಿಂದ 61 ರನ್ ಗಳಿಸಿದರು. ಪ್ರಸ್ತುತ, ರವೀಂದ್ರ ಜಡೇಜಾ 37 ಎಸೆತಗಳಲ್ಲಿ 19 ರನ್ ಮತ್ತು ಶಾರ್ದೂಲ್ ಠಾಕೂರ್ 36 ಎಸೆತಗಳಲ್ಲಿ 19 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಮಂದ ಬೆಳಕಿನಿಂದಾಗಿ ಮೊದಲ ದಿನದ ಆಟ ಬೇಗನೆ ಕೊನೆಗೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ