ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ರಾಂಚಿಯ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳಿಗೆ ಈ ಪಂದ್ಯ ಮುಖ್ಯವಾಗಿದೆ. ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಟೆಸ್ಟ್ ಪಂದ್ಯವನ್ನು ಗೆದ್ದರೆ, ಭಾರತವು ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಅತ್ತ ಇಂಗ್ಲೆಂಡ್ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಅಂದುಕೊಂಡಂತೆ ಜಸ್ಪ್ರಿತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರ ಬದಲು ಯುವ ವೇಗಿ ಆಕಾಶ್ ದೀಪ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರಜತ್ ಪಾಟಿದರ್ ಮತ್ತೊಂದು ಅವಕಾಶ ಪಡೆದುಕೊಂಡಿದ್ದಾರೆ. ಸರ್ಫರಾಝ್ ಖಾನ್ ಮತ್ತು ಧ್ರುವ್ ಜೂರೆಲ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ಗೆ ಇಂದು ಚಾಲನೆ: ಮೊದಲ ಪಂದ್ಯದಲ್ಲಿ ಮುಂಬೈ-ಡೆಲ್ಲಿ ಸೆಣೆಸಾಟ
ಇತ್ತ ಇಂಗ್ಲೆಂಡ್ ನಾಲ್ಕನೇ ಟೆಸ್ಟ್‌ಗೆ ಆಡುವ ಹನ್ನೊಂದರ ಬಳಗವನ್ನು ಗುರುವಾರವೇ ಘೋಷಿಸಿದೆ. ಆಂಗ್ಲರ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮಾರ್ಕ್ ವುಡ್ ಮತ್ತು ರೆಹಾನ್ ಅಹ್ಮದ್ ಇಬ್ಬರಿಗೂ ಕೊಕ್ ನೀಡಲಾಗಿದೆ. ಒಲಿ ರಾಬಿನ್ಸನ್ ಮತ್ತು ಶೋಯೆಬ್ ಬಶೀರ್ ಅವರಿಗೆ ಸ್ಥಾನ ನೀಡಲಾಗಿದೆ. ಈ ಎರಡು ಬದಲಾವಣೆಯ ಹೊರತಾಗಿ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಲೈನಪ್ನಲ್ಲಿ ಯಾವುದೇ ಚೇಂಜ್ ಮಾಡಲಾಗಿಲ್ಲ.
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
ರಾಂಚಿ ಪಿಚ್ ಯಾರಿಗೆ ಸಹಕಾರಿ; ಮುಂದಿನ 5 ದಿನಗಳ ಹವಾಮಾನ ವರದಿ ಏನು?
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಝಾಕ್ ಕ್ರಾಲಿ, ಬೆನ್ ಡಕೆಟ್, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಒಲೀ ರಾಬಿನ್ಸನ್, ಜೇಮ್ಸ್ ಅ್ಯಂಡರ್ಸನ್, ಶೋಯೆಬ್ ಬಶೀರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ