IND vs ENG: ಭಾರತ- ಇಂಗ್ಲೆಂಡ್ ನಡುವೆ ಕೊನೆಯ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?
India vs England 5th T20I: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಫೆಬ್ರವರಿ 2 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಐದನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಆಂಗ್ಲರಿಗೆ ಹೀನಾಯ ಸೋಲಿನ ಆಘಾತ ನೀಡಲು ಸೂರ್ಯ ಪಡೆ ಸಜ್ಜಾಗಿದೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಮತ್ತು Disney+ Hotstar ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ, ಭಾನುವಾರ ನಡೆಯಲಿರುವ ಐದನೇ ಟಿ20ಐ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಇರಾದೆಯಲ್ಲಿದೆ. ಪುಣೆಯಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಈ ಮೂಲಕ ಭಾರತ 2019 ರಿಂದ ಇಲ್ಲಿಯವರೆಗೆ ತವರಿನಲ್ಲಿ ಅಜೇಯ ಓಟವನ್ನು ಮುಂದುವರೆಸಿದ್ದು, ಸತತ 17 ನೇ ಟಿ20 ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತ್ತು. ಇದೀಗ ಎರಡೂ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಗೂ ಮುನ್ನ ಕೊನೆಯ ಬಾರಿಗೆ ಟಿ20 ಪಂದ್ಯವನ್ನು ಆಡಲಿವೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಭಾನುವಾರ ಅಂದರೆ ಫೆಬ್ರವರಿ 02 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ಲಭ್ಯವಿರುತ್ತದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟಿ20 ಪಂದ್ಯವನ್ನು ಡಿಸ್ನಿ+ ಹೋಸ್ಟರ್‌ನಲ್ಲಿ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.
ಉಭಯ ತಂಡಗಳು
ಭಾರತದ ಟಿ20 ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಧ್ರುವ್ ಜುರೆಲ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ರಿಂಕು ಸಿಂಗ್, ಶಿವಂ ದುಬೆ, ರಮಣದೀಪ್ ಸಿಂಗ್, ಹರ್ಷಿತ್ ರಾಣಾ.
ಇಂಗ್ಲೆಂಡ್ ಟಿ20 ತಂಡ: ಪಿಲ್ ಸಾಲ್ಟ್, ಬೆನ್ ಡಕೆಟ್, ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಸ್ಮಿತ್ (ವಿಕೆಟ್ ಕೀಪರ್), ಜೇಮೀ ಓವರ್ಟನ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ರೆಹಾನ್ ಅಹ್ಮದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ