IND vs ENG: ಓವಲ್ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರದ ವಿವರ ಇಲ್ಲಿದೆ

India vs England 5th Test: ಜುಲೈ 31 ರಂದು ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯ ನಡೆಯಲಿದೆ. ಸರಣಿಯನ್ನು ಸಮಬಲಗೊಳಿಸಲು ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕು. ಇತ್ತ ಇಂಗ್ಲೆಂಡ್ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೆ, ಸರಣಿ ಅದರ ಪಾಲಾಗಲಿದೆ. ಉಳಿದಂತೆ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಲ್ಲಿದೆ.

IND vs ENG: ಓವಲ್ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರದ ವಿವರ ಇಲ್ಲಿದೆ
Ind Vs Eng

Updated on: Jul 30, 2025 | 10:59 PM

ಜುಲೈ 31 ರಿಂದ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ (Oval Test Match) ಇಂಗ್ಲೆಂಡ್ ಹಾಗೂ ಭಾರತ (India vs England) ನಡುವಿನ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ನಡೆಯಲಿದೆ. ಸರಣಿಯನ್ನು ಸಮಬಲಗೊಳಿಸಬೇಕಾದರೆ, ಭಾರತ ಈ ಪಂದ್ಯವನ್ನು ಗೆಲ್ಲಬೇಕು. ಈ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಲ್ಲಿಯವರೆಗೆ, ಇಂಗ್ಲೆಂಡ್ 2-1 ಮುನ್ನಡೆಯಲ್ಲಿದೆ. ಮೊದಲ ಮತ್ತು ಮೂರನೇ ಟೆಸ್ಟ್‌ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿದ್ದರೆ, ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತ್ತು. ಉಳಿದಂತೆ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯ ಸರಣಿ ನಿರ್ಧಾರಕವಾಗಿದ್ದು ತೀರ್ವ ಕುತೂಹಲ ಕೆರಳಿಸಿದೆ. ಆದರೆ ಅದಕ್ಕೂ ಮುನ್ನ ಇಂಗ್ಲೆಂಡ್ ಮತ್ತು ಭಾರತ ನಡುವಿನ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಎಂಬುದರ ವಿವರ ನೋಡೋಣ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಎಲ್ಲಿ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಲಂಡನ್‌ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಓವಲ್ ಟೆಸ್ಟ್ ಜುಲೈ 31 ರಂದು (ಗುರುವಾರ) ಆರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ. ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್​ಲ್ಲಿಯೂ ವೀಕ್ಷಿಸಬಹುದು.

ಓವಲ್ ಪಿಚ್ ವರದಿ

ಕೆನ್ನಿಂಗ್ಟನ್ ಓವಲ್‌ನಲ್ಲಿ ವೇಗದ ಬೌಲರ್‌ಗಳಿಗೆ ಸಾಕಷ್ಟು ಸಹಾಯ ಸಿಗುತ್ತದೆ. ಮೊದಲ ಎರಡು ದಿನಗಳಲ್ಲಿ ವೇಗದ ಬೌಲರ್‌ಗಳು ಇಲ್ಲಿ ತುಂಬಾ ಮಾರಕವಾಗಬಹುದು. ಆದಾಗ್ಯೂ, ಆಟ ಮುಂದುವರೆದಂತೆ, ಸ್ಪಿನ್ನರ್‌ಗಳ ಪಾತ್ರವೂ ಮುಖ್ಯವಾಗುತ್ತದೆ. ಬ್ಯಾಟ್ಸ್‌ಮನ್‌ಗಳು ಇಲ್ಲಿ ದೊಡ್ಡ ಸ್ಕೋರ್ ಗಳಿಸಲು ಬಯಸಿದರೆ, ಅವರು ಕ್ರೀಸ್‌ನಲ್ಲಿ ಸ್ವಲ್ಪ ಸಮಯ ಕಳೆಯುವುದು ಬಹಳ ಮುಖ್ಯ. ಅಲ್ಲದೆ ಬ್ಯಾಟರ್​​ಗಳು ಬಂದ ತಕ್ಷಣ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಏಕೆಂದರೆ ವೇಗದ ಬೌಲರ್ ಇಲ್ಲಿ ಸಾಕಷ್ಟು ಸ್ವಿಂಗ್ ಪಡೆಯುತ್ತಾರೆ.

IND vs ENG: 50 ವರ್ಷಗಳಲ್ಲಿ ಏಕೈಕ ಗೆಲುವು; ಓವಲ್‌ನಲ್ಲಿ ಭಾರತದ ಪ್ರದರ್ಶನ ಹೇಗಿದೆ?

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್/ ಶಾರ್ದೂಲ್ ಠಾಕೂರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ/ ಅರ್ಷದೀಪ್ ಸಿಂಗ್

ಇಂಗ್ಲೆಂಡ್ ಪ್ಲೇಯಿಂಗ್ 11: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್ ಮತ್ತು ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ