India vs England 5th Test: ಟೀಮ್ ಇಂಡಿಯಾದ ಐತಿಹಾಸಿಕ ಗೆಲುವಿನ ಕನಸು ಬಹುತೇಕ ಭಗ್ನ
India vs England 5th Test: ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ.
ಭಾರತ-ಇಂಗ್ಲೆಂಡ್ (India vs England 5th Test) ನಡುವಣ ಟೆಸ್ಟ್ ಸರಣಿಯು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ (Team India) ನೀಡಿದ 378 ರನ್ಗಳ ಟಾರ್ಗೆಟ್ ಅನ್ನು ಇಂಗ್ಲೆಂಡ್ ತಂಡವು ಸುಲಭವಾಗಿ ಚೇಸ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಇಂಗ್ಲೆಂಡ್ ತಂಡವು 3 ವಿಕೆಟ್ ನಷ್ಟಕ್ಕೆ 259 ರನ್ಗಳಿಸಿದ್ದು, ಇನ್ನು 5ನೇ ದಿನದಾಟದಲ್ಲಿ ಆಂಗ್ಲರಿಗೆ ಗೆಲ್ಲಲು ಬೇಕಿರುವುದು ಕೇವಲ 119 ರನ್ ಮಾತ್ರ. ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲುವುದು ಖಚಿತ ಎಂದೇ ಹೇಳಬಹುದು. ಇನ್ನು ಅದೃಷ್ಟ ಕೈಹಿಡಿದರೆ ಮಾತ್ರ ಭಾರತ ತಂಡ ಗೆಲ್ಲಬಹುದು. ಇತ್ತ ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಸರಣಿ ಡ್ರಾ ಆಗಲಿದೆ. ಏಕೆಂದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಇದೀಗ ಇಂಗ್ಲೆಂಡ್ ಗೆದ್ದರೆ ಸರಣಿ 2-2 ರಿಂದ ಸಮವಾಗಲಿದೆ.
ಏಕೆಂದರೆ ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ. ಇನ್ನು ಐದನೇ ಪಂದ್ಯವನ್ನು ಕೊರೋನಾ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಐದನೇ ಟೆಸ್ಟ್ ಪಂದ್ಯವನ್ನು ಆಡಲಾಗುತ್ತಿದೆ.
ಅತ್ತ ಮೊದಲ 4 ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಂದರೆ ನ್ಯಾಟಿಂಗ್ಹ್ಯಾಮ್ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ಡ್ರಾನಲ್ಲಿ ಅಂತ್ಯ ಕಂಡಿತ್ತು. ಇದಾದ ಬಳಿಕ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್ಗಳ ಐತಿಹಾಸಿಕ ಗೆಲುವು ದಾಖಲಿಸಿತ್ತು.
ಇನ್ನು ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು. ಓವಲ್ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ 157 ರನ್ಗಳ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.
ಅದರಂತೆ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆಯಲ್ಲಿದ್ದು, ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಏಕೆಂದರೆ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅದರಂತೆ ಈಗಾಗಲೇ ಇಂಗ್ಲೆಂಡ್ ತಂಡವು ಗೆಲುವಿನ ಸಮೀಪಕ್ಕೆ ತಲುಪಿದೆ. ಇನ್ನು ಕೊನೆಯ ದಿನದಾಟದಲ್ಲಿ ಕೇವಲ 119 ರನ್ ಕಲೆಹಾಕಿದರೆ ಸರಣಿಯು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳ್ಳಲಿದೆ.
ಇದರೊಂದಿಗೆ 15 ವರ್ಷಗಳ ಬಳಿಕ ಇಂಗ್ಲೆಂಡ್ನಲ್ಲಿ ಸರಣಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಭಗ್ನವಾಗಲಿದೆ. ಏಕೆಂದರೆ ಕಳೆದ 15 ವರ್ಷಗಳಿಂದ ಭಾರತ ತಂಡವು ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಈ ಬಾರಿ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿರುವ ಟೀಮ್ ಇಂಡಿಯಾ ಪಂದ್ಯವನ್ನು ಬಹುತೇಕ ಕೈಚೆಲ್ಲಿಕೊಂಡಿದೆ.
ಇನ್ನು ಭಾರತ ತಂಡವು ಕೊನೆಯ ಬಾರಿ ಇಂಗ್ಲೆಂಡ್ನಲ್ಲಿ ಸರಣಿ ಗೆದ್ದಿದ್ದು 2007 ರಲ್ಲಿ. ಅಂದು ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ತಂಡವು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಬಾರಿ ಮತ್ತೆ ಇತಿಹಾಸ ನಿರ್ಮಿಸುವ ಅವಕಾಶ ಹೊಂದಿತ್ತು. ಆದರೆ 2ನೇ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್ಮನ್ಗಳು ಕೈಕೊಟ್ಟ ಪರಿಣಾಮ ಕೇವಲ 245 ರನ್ಗಳಿಗೆ ಆಲೌಟ್ ಆಯಿತು. ಅದರಂತೆ 378 ರನ್ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಟದ 2ನೇ ಮತ್ತು 3ನೇ ಸೆಷನ್ನಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಇದೀಗ 259 ರನ್ ಕಲೆಹಾಕಿದೆ.
ಇದೀಗ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಕೇವಲ 119 ರನ್ಗಳು ಬೇಕಿದ್ದರೆ, ಟೀಮ್ ಇಂಡಿಯಾಗೆ 7 ವಿಕೆಟ್ಗಳ ಅವಶ್ಯಕತೆಯಿದೆ. ಆದರೆ ಪ್ರಸ್ತುತ ಸನ್ನಿವೇಶ ಗಮನಿಸಿದರೆ ಇಂಗ್ಲೆಂಡ್ ತಂಡಕ್ಕೆ ಗೆಲ್ಲುವ ಚಾನ್ಸ್ ಜಾಸ್ತಿಯಿದೆ. ಇದಾಗ್ಯೂ ಟೀಮ್ ಇಂಡಿಯಾ ಬೌಲರ್ಗಳು ಪರಾಕ್ರಮ ಮೆರೆದು ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.