India vs England 5th Test: ಟೀಮ್ ಇಂಡಿಯಾದ ಐತಿಹಾಸಿಕ ಗೆಲುವಿನ ಕನಸು ಬಹುತೇಕ ಭಗ್ನ

| Updated By: ಝಾಹಿರ್ ಯೂಸುಫ್

Updated on: Jul 05, 2022 | 2:30 PM

India vs England 5th Test: ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ.

India vs England 5th Test: ಟೀಮ್ ಇಂಡಿಯಾದ ಐತಿಹಾಸಿಕ ಗೆಲುವಿನ ಕನಸು ಬಹುತೇಕ ಭಗ್ನ
India vs England 5th Test
Follow us on

ಭಾರತ-ಇಂಗ್ಲೆಂಡ್ (India vs England 5th Test) ನಡುವಣ ಟೆಸ್ಟ್ ಸರಣಿಯು ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ 5ನೇ ಟೆಸ್ಟ್​ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ನೀಡಿದ 378 ರನ್​ಗಳ ಟಾರ್ಗೆಟ್ ಅನ್ನು ಇಂಗ್ಲೆಂಡ್​ ತಂಡವು ಸುಲಭವಾಗಿ ಚೇಸ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಇಂಗ್ಲೆಂಡ್ ತಂಡವು 3 ವಿಕೆಟ್ ನಷ್ಟಕ್ಕೆ 259 ರನ್​ಗಳಿಸಿದ್ದು, ಇನ್ನು 5ನೇ ದಿನದಾಟದಲ್ಲಿ ಆಂಗ್ಲರಿಗೆ ಗೆಲ್ಲಲು ಬೇಕಿರುವುದು ಕೇವಲ 119 ರನ್​ ಮಾತ್ರ. ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲುವುದು ಖಚಿತ ಎಂದೇ ಹೇಳಬಹುದು. ಇನ್ನು ಅದೃಷ್ಟ ಕೈಹಿಡಿದರೆ ಮಾತ್ರ ಭಾರತ ತಂಡ ಗೆಲ್ಲಬಹುದು. ಇತ್ತ ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಸರಣಿ ಡ್ರಾ ಆಗಲಿದೆ. ಏಕೆಂದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಹೊಂದಿದ್ದು, ಇದೀಗ ಇಂಗ್ಲೆಂಡ್ ಗೆದ್ದರೆ ಸರಣಿ 2-2 ರಿಂದ ಸಮವಾಗಲಿದೆ.

ಏಕೆಂದರೆ ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ. ಇನ್ನು ಐದನೇ ಪಂದ್ಯವನ್ನು ಕೊರೋನಾ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಐದನೇ ಟೆಸ್ಟ್ ಪಂದ್ಯವನ್ನು ಆಡಲಾಗುತ್ತಿದೆ.

ಅತ್ತ ಮೊದಲ 4 ಪಂದ್ಯಗಳಲ್ಲಿ ಟೀಮ್ ಇಂಡಿಯಾ 2 ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಂದರೆ ನ್ಯಾಟಿಂಗ್​ಹ್ಯಾಮ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ಡ್ರಾನಲ್ಲಿ ಅಂತ್ಯ ಕಂಡಿತ್ತು. ಇದಾದ ಬಳಿಕ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸಿತ್ತು.

ಇದನ್ನೂ ಓದಿ
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಇನ್ನು ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿತು. ಓವಲ್​ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ 157 ರನ್​ಗಳ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಅದರಂತೆ ಟೀಮ್ ಇಂಡಿಯಾ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆಯಲ್ಲಿದ್ದು, ಹೀಗಾಗಿ ಇಂಗ್ಲೆಂಡ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಏಕೆಂದರೆ ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಇಂಗ್ಲೆಂಡ್ ತಂಡ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಅದರಂತೆ ಈಗಾಗಲೇ ಇಂಗ್ಲೆಂಡ್ ತಂಡವು ಗೆಲುವಿನ ಸಮೀಪಕ್ಕೆ ತಲುಪಿದೆ. ಇನ್ನು ಕೊನೆಯ ದಿನದಾಟದಲ್ಲಿ ಕೇವಲ 119 ರನ್​ ಕಲೆಹಾಕಿದರೆ ಸರಣಿಯು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳ್ಳಲಿದೆ.

ಇದರೊಂದಿಗೆ 15 ವರ್ಷಗಳ ಬಳಿಕ ಇಂಗ್ಲೆಂಡ್​ನಲ್ಲಿ ಸರಣಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಭಗ್ನವಾಗಲಿದೆ. ಏಕೆಂದರೆ ಕಳೆದ 15 ವರ್ಷಗಳಿಂದ ಭಾರತ ತಂಡವು ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಈ ಬಾರಿ ಗೆಲ್ಲುವ ಉತ್ತಮ ಅವಕಾಶವಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಸೋಲಿನ ಸುಳಿಯಲ್ಲಿರುವ ಟೀಮ್ ಇಂಡಿಯಾ ಪಂದ್ಯವನ್ನು ಬಹುತೇಕ ಕೈಚೆಲ್ಲಿಕೊಂಡಿದೆ.

ಇನ್ನು ಭಾರತ ತಂಡವು ಕೊನೆಯ ಬಾರಿ ಇಂಗ್ಲೆಂಡ್​ನಲ್ಲಿ ಸರಣಿ ಗೆದ್ದಿದ್ದು 2007 ರಲ್ಲಿ. ಅಂದು ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ತಂಡವು ಐತಿಹಾಸಿಕ ಗೆಲುವು ದಾಖಲಿಸಿತ್ತು. ಈ ಬಾರಿ ಮತ್ತೆ ಇತಿಹಾಸ ನಿರ್ಮಿಸುವ ಅವಕಾಶ ಹೊಂದಿತ್ತು. ಆದರೆ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ಕೈಕೊಟ್ಟ ಪರಿಣಾಮ ಕೇವಲ 245 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ 378 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡವು ನಾಲ್ಕನೇ ದಿನದಾಟದ 2ನೇ ಮತ್ತು 3ನೇ ಸೆಷನ್​ನಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಇದೀಗ 259 ರನ್​ ಕಲೆಹಾಕಿದೆ.

ಇದೀಗ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು ಕೇವಲ 119 ರನ್​ಗಳು ಬೇಕಿದ್ದರೆ, ಟೀಮ್ ಇಂಡಿಯಾಗೆ 7 ವಿಕೆಟ್​ಗಳ ಅವಶ್ಯಕತೆಯಿದೆ. ಆದರೆ ಪ್ರಸ್ತುತ ಸನ್ನಿವೇಶ ಗಮನಿಸಿದರೆ ಇಂಗ್ಲೆಂಡ್​ ತಂಡಕ್ಕೆ ಗೆಲ್ಲುವ ಚಾನ್ಸ್ ಜಾಸ್ತಿಯಿದೆ. ಇದಾಗ್ಯೂ ಟೀಮ್ ಇಂಡಿಯಾ ಬೌಲರ್​ಗಳು ಪರಾಕ್ರಮ ಮೆರೆದು ಹೊಸ ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.