AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಓವಲ್‌ನಲ್ಲಿ ಇಂಗ್ಲೆಂಡ್‌ ತಂಡ ಇದುವರೆಗೆ ಬೆನ್ನಟ್ಟಿರುವ ಅತ್ಯಧಿಕ ಸ್ಕೋರ್ ಎಷ್ಟು?

India vs England 5th Test: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತವನ್ನು ಕಲೆಹಾಕಿದೆ. ಯಶಸ್ವಿ ಜೈಸ್ವಾಲ್ ಶತಕ, ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾ ಅವರ ಅರ್ಧಶತಕಗಳಿಂದಾಗಿ ಭಾರತ ಗೆಲುವಿನತ್ತ ಸಾಗುತ್ತಿದೆ. ಇಂಗ್ಲೆಂಡ್ ತಂಡವು ಈ ಮೈದಾನದಲ್ಲಿ 250 ರನ್‌ಗಳಿಗಿಂತ ಹೆಚ್ಚು ಬೆನ್ನಟ್ಟಿ ಗೆದ್ದಿರುವ ಇತಿಹಾಸ ಇಲ್ಲ. ಹೀಗಾಗಿ ಭಾರತದ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ.

IND vs ENG: ಓವಲ್‌ನಲ್ಲಿ ಇಂಗ್ಲೆಂಡ್‌ ತಂಡ ಇದುವರೆಗೆ ಬೆನ್ನಟ್ಟಿರುವ ಅತ್ಯಧಿಕ ಸ್ಕೋರ್ ಎಷ್ಟು?
England Team
ಪೃಥ್ವಿಶಂಕರ
|

Updated on: Aug 02, 2025 | 9:50 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದನೇ ಟೆಸ್ಟ್ ಪಂದ್ಯ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ (Oval Test) ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್ ಗಳಿಸಿತು. ಆ ಬಳಿಕ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ 247 ರನ್​ಗಳಿಗೆ ಆಲೌಟ್ ಆಯಿತು. ಇದೀಗ ಎರಡನೇ ಇನ್ನಿಂಗ್ಸ್‌ ಆಡುತ್ತಿರುವ ಟೀಂ ಇಂಡಿಯಾ ಪ್ರಸ್ತುತ 350 ರನ್​ಗಳ ಗಡಿ ದಾಟಿದೆ. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ (Yashasvi Jaiswal) ಶತಕ ಬಾರಿಸಿದರೆ, ಆಕಾಶ್ ದೀಪ್ ಹಾಗೂ ರವೀಂದ್ರ ಜಡೇಜಾ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಇಂಗ್ಲೆಂಡ್​ಗೆ ಸ್ಪರ್ಧಾತ್ಮಕ ಮೊತ್ತವನ್ನೇ ಗುರಿಯಾಗಿ ನೀಡುತ್ತಿದೆ. ಹಾಗಿದ್ದರೆ, ಈ ಮೈದಾನದಲ್ಲಿ ಇಂಗ್ಲೆಂಡ್‌ ತಂಡ ಎಷ್ಟು ರನ್​ಗಳನ್ನು ಬೆನ್ನಟ್ಟಿ ಗೆಲುವು ಸಾಧಿಸಿದೆ ಎಂಬುದನ್ನು ನೋಡಬೇಕಾಗಿದೆ.

263 ಅತ್ಯಧಿಕ ಸ್ಕೋರ್

ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ತಂಡವು ಅತಿ ದೊಡ್ಡ ರನ್ ಚೇಸ್ ಮಾಡಿರುವುದು 123 ವರ್ಷಗಳ ಹಿಂದೆ. ಅಂದರೆ 1902 ರಲ್ಲಿ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 263 ರನ್​ಗಳ ಗುರಿಯನ್ನು ಬೆನ್ನಟ್ಟಿ ಒಂದು ವಿಕೆಟ್​ನಿಂದ ಪಂದ್ಯವನ್ನು ಗೆದ್ದಿತು. ಆ ಪಂದ್ಯದಲ್ಲಿ ಗಿಲ್ಬರ್ಟ್ ಜೆಸ್ಸಾಪ್ ಇಂಗ್ಲೆಂಡ್ ಪರ 102 ರನ್ ಗಳ ಬಲಿಷ್ಠ ಇನ್ನಿಂಗ್ಸ್ ಆಡಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಓವಲ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಎರಡನೇ ಅತಿ ಹೆಚ್ಚು ಚೇಸ್ ಮಾಡಿದ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿದೆ. 1963 ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 255 ರನ್‌ಗಳ ಸ್ಕೋರ್ ಅನ್ನು ಬೆನ್ನಟ್ಟಿತು. ಓವಲ್‌ನಲ್ಲಿ ಇದುವರೆಗೆ ಕೇವಲ ಎರಡು ತಂಡಗಳು ಮಾತ್ರ 250+ ರನ್‌ಗಳ ಸ್ಕೋರ್ ಅನ್ನು ಬೆನ್ನಟ್ಟಲು ಸಾಧ್ಯವಾಗಿದೆ. ಇದೀಗ ಟೀಂ ಇಂಡಿಯಾ 250+ ರನ್‌ಗಳಿಗಿಂತ ಹೆಚ್ಚು ಗಳಿಸಿರುವುದರಿಂದ ತಂಡದ ಗೆಲುವಿನ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ, ವಿಕೆಟ್ ಕೂಡ ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತಿರುವುದರಿಂದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವುದು ಅಷ್ಟು ಸುಲಭವಲ್ಲ.

IND vs ENG: 18 ಶತಕಗಳ ಜೊತೆಯಾಟ; 21 ವರ್ಷಗಳ ಹಳೆಯ ದಾಖಲೆ ಉಡೀಸ್

ಯಶಸ್ವಿ ಜೈಸ್ವಾಲ್ ಶತಕ

ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಕರುಣ್ ನಾಯರ್ ಭಾರತ ಪರ ಅರ್ಧಶತಕ ಬಾರಿಸಿದರು. ಇನ್ನು ಎರಡನೇ ಇನ್ನಿಂಗ್ಸ್​ನಲ್ಲಿ 23 ರನ್‌ಗಳ ಹಿನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಭಾರತದ ಪರ ಯಶಸ್ವಿ ಜೈಸ್ವಾಲ್ 118 ರನ್​ಗಳ ಇನ್ನಿಂಗ್ಸ್ ಆಡಿದರೆ, ಆಕಾಶ್ ದೀಪ್ 66 ರನ್​ಗಳ ಕಾಣಿಕೆ ನೀಡಿದರು. ರವೀಂದ್ರ ಜಡೇಜಾ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ