IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಪಾದಾರ್ಪಣೆ
India vs England, 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4 ಮ್ಯಾಚ್ಗಳು ಮುಗಿದಿದೆ. ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ, ರಾಜ್ಕೋಟ್ ಮತ್ತು ರಾಂಚಿಯಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಮೂಲಕ 3-1 ಅಂತರದಿಂದ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ.
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ರಜತ್ ಪಾಟಿದಾರ್ ಅವರನ್ನು ಆಡುವ ಬಳಗದಿಂದ ಕೈ ಬಿಡಲಾಗಿದೆ.
ಹಾಗೆಯೇ ರಾಂಚಿ ಟೆಸ್ಟ್ ವೇಳೆ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಆಕಾಶ್ ದೀಪ್ ಪ್ಲೇಯಿಂಗ್ ಇಲೆವೆನ್ನಿಂದ ಹೊರಬಿದ್ದಿದ್ದಾರೆ. ಇನ್ನು ಇಂಗ್ಲೆಂಡ್ ಆಡುವ ಬಳಗದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, 4ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಒಲೀ ರಾಬಿನ್ಸನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೇಗದ ಬೌಲರ್ ಮಾರ್ಕ್ ವುಡ್ ಕಣಕ್ಕಿಳಿದಿದ್ದಾರೆ.
ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್, ಮಾರ್ಕ್ ವುಡ್.
ಸರಣಿ ಗೆದ್ದಿರುವ ಟೀಮ್ ಇಂಡಿಯಾ:
ಧರ್ಮಶಾಲಾದಲ್ಲಿ ನಡೆಯುತ್ತಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿದೆ.
ಹೈದರಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ವಿಶಾಖಪಟ್ಟಣಂ, ರಾಜ್ಕೋಟ್ ಮತ್ತು ರಾಂಚಿಯಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಮೂಲಕ 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಹೀಗಾಗಿ ಕೊನೆಯ ಪಂದ್ಯವು ಸರಣಿಯ ಫಲಿತಾಂಶವನ್ನು ಬದಲಿಸುವುದಿಲ್ಲ. ಅಲ್ಲದೆ ಸೋತರೂ, ಗೆದ್ದರೂ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.
Published On - 9:03 am, Thu, 7 March 24