IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಪಾದಾರ್ಪಣೆ

| Updated By: ಝಾಹಿರ್ ಯೂಸುಫ್

Updated on: Mar 07, 2024 | 9:10 AM

India vs England, 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4 ಮ್ಯಾಚ್​ಗಳು ಮುಗಿದಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ವಿಶಾಖಪಟ್ಟಣಂ, ರಾಜ್​ಕೋಟ್ ಮತ್ತು ರಾಂಚಿಯಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಮೂಲಕ 3-1 ಅಂತರದಿಂದ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ.

IND vs ENG: ಟಾಸ್ ಗೆದ್ದ ಇಂಗ್ಲೆಂಡ್: ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಪಾದಾರ್ಪಣೆ
ಸಾಂದರ್ಭಿಕ ಚಿತ್ರ
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯ ಶುರುವಾಗಿದೆ. ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ರಜತ್ ಪಾಟಿದಾರ್ ಅವರನ್ನು ಆಡುವ ಬಳಗದಿಂದ ಕೈ ಬಿಡಲಾಗಿದೆ.

ಹಾಗೆಯೇ ರಾಂಚಿ ಟೆಸ್ಟ್ ವೇಳೆ ವಿಶ್ರಾಂತಿ ಪಡೆದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಆಕಾಶ್ ದೀಪ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬಿದ್ದಿದ್ದಾರೆ. ಇನ್ನು ಇಂಗ್ಲೆಂಡ್ ಆಡುವ ಬಳಗದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, 4ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಒಲೀ ರಾಬಿನ್ಸನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ವೇಗದ ಬೌಲರ್ ಮಾರ್ಕ್​ ವುಡ್​ ಕಣಕ್ಕಿಳಿದಿದ್ದಾರೆ.

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲೀ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೊಯೆಬ್ ಬಶೀರ್, ಜೇಮ್ಸ್ ಅ್ಯಂಡರ್ಸನ್, ಮಾರ್ಕ್ ವುಡ್.

ಸರಣಿ ಗೆದ್ದಿರುವ ಟೀಮ್ ಇಂಡಿಯಾ:

ಧರ್ಮಶಾಲಾದಲ್ಲಿ ನಡೆಯುತ್ತಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯ. ಏಕೆಂದರೆ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವು 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಒಂದು ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿದೆ.

ಹೈದರಾಬಾದ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ವಿಶಾಖಪಟ್ಟಣಂ, ರಾಜ್​ಕೋಟ್ ಮತ್ತು ರಾಂಚಿಯಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಮೂಲಕ 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಹೀಗಾಗಿ ಕೊನೆಯ ಪಂದ್ಯವು ಸರಣಿಯ ಫಲಿತಾಂಶವನ್ನು ಬದಲಿಸುವುದಿಲ್ಲ. ಅಲ್ಲದೆ ಸೋತರೂ, ಗೆದ್ದರೂ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ದೇವದತ್ ಪಡಿಕ್ಕಲ್.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲೀ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

Published On - 9:03 am, Thu, 7 March 24