AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ರಹಾನೆ ಔಟ್?: ನಾಲ್ಕನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾಕ್ಕೆ ಹೊಸ ಉಪ ನಾಯಕ: ಯಾರು ಗೊತ್ತೇ?

ರಹಾನೆ ಪದೇ ಪದೇ ಎಡವುತ್ತಿರುವುದು ಉಪ ನಾಯಕನ ಪಟ್ಟಕ್ಕೆ ಕುತ್ತುಬಂದಿದೆ. ಅದರಲ್ಲೂ ಮೂರನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಪೂಜಾರ, ರೋಹಿತ್ ಮತ್ತು ಕೊಹ್ಲಿ ತಂಡವನ್ನು ಮೇಲೆತ್ತಲು ಸಾಕಷ್ಟು ಶ್ರಮಿಸಿದರು. ಆದರೆ, ರಹಾನೆ 10 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು.

India vs England: ರಹಾನೆ ಔಟ್?: ನಾಲ್ಕನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾಕ್ಕೆ ಹೊಸ ಉಪ ನಾಯಕ: ಯಾರು ಗೊತ್ತೇ?
India vs England
TV9 Web
| Edited By: |

Updated on: Aug 30, 2021 | 11:35 AM

Share

ಇಂಗ್ಲೆಂಡ್ (England) ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ನೀಡಿದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 78 ರನ್​ಗೆ ಆಲೌಟ್ ಆದರೆ, ಎರಡನೇ ಇನ್ನಿಂಗ್ಸ್​ನಲ್ಲಿ ಮೊದಲು ಮಾಡಿದ ತಪ್ಪನ್ನು ಸರಿದೂಗಿಸಲು ಹರಸಾಹಸ ಪಟ್ಟಿತು. ಕಳಪೆ ಫಾರ್ಮ್​ನಿಂದ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಚೇತೇಶ್ವರ್ ಪೂಜಾರ (Cheteshwar Pujara) ಫಾರ್ಮ್​ಗೆ ಬಂದರು. ರೋಹಿತ್ ಶರ್ಮಾ (Rohit Sharma) ಮತ್ತು ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ಉತ್ತಮ ಪ್ರದರ್ಶನ ನೀಡಿದರು. ಆದರೆ, ಉಪ ನಾಯಕನ ಜವಾಬ್ದಾರಿಯಲ್ಲಿರುವ ಅಜಿಂಕ್ಯಾ ರಹಾನೆ ಬ್ಯಾಟ್ ಮಾತ್ರ ಸದ್ದು ಮಾಡಲೇ ಇಲ್ಲ.

ರಹಾನೆ ಪದೇ ಪದೇ ಎಡವುತ್ತಿರುವುದು ಉಪ ನಾಯಕನ ಪಟ್ಟಕ್ಕೆ ಕುತ್ತುಬಂದಿದೆ. ಅದರಲ್ಲೂ ಮೂರನೇ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಪೂಜಾರ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡವನ್ನು ಮೇಲೆತ್ತಲು ಸಾಕಷ್ಟು ಶ್ರಮಿಸಿದರು. ಆದರೆ, ರಹಾನೆ ಕೇವಲ 10 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ರಹಾನೆ ಕಳಪೆ ಫಾರ್ಮ್ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

2021 ರಲ್ಲಿ 10 ಟೆಸ್ಟ್ ಪಂದ್ಯಗಳನ್ನು ಆಡಿರುವ ರಹಾನೆ 17 ಇನ್ನಿಂಗ್ಸ್​ನಲ್ಲಿ 358 ರನ್ ಗಳಿಸಿದ್ದಾರಷ್ಟೆ. 21.06 ಸರಾಸರಿ ಹೊಂದಿರುವ ರಹಾನೆ ನಾಲ್ಕನೇ ಟೆಸ್ಟ್​ನಲ್ಲಿ ಕೈಬಿಡುವ ಸಾಧ್ಯತೆ ಹೆಚ್ಚಿದೆ. ಇದರ ಜಾಗಕ್ಕೆ ಸೂರ್ಯಕುಮಾರ್ ಯಾದವ್ ಅಥವಾ ಹನುಮಾ ವಿಹಾರಿ ಆಯ್ಕೆಯಾದರೆ ಅಚ್ಚರಿ ಪಡಬೇಕಿಲ್ಲ.

ನಾಲ್ಕನೇ ಟೆಸ್ಟ್​ನಲ್ಲಿ ರಹಾನೆ ಕಣಕ್ಕಿಳಿಯದಿದ್ದಲ್ಲಿ ಟೀಮ್ ಇಂಡಿಯಾದ ಉಪ ನಾಯಕನ ಪಟ್ಟ ಹಿಟ್​ಮ್ಯಾನ್ ರೋಹಿತ್ ಶರ್ಮಾಗೆ ಒಲಿಯಲಿದೆ. ಈಗಾಗಲೇ ರೋಹಿತ್ ಭಾರತದ ಸೀಮಿತ ಓವರ್ ಕ್ರಿಕೆಟ್​ನಲ್ಲಿ ಉಪ ನಾಯಕನಾಗಿದ್ದಾರೆ. ಸದ್ಯ ಇವರಿಗೆ ಟೆಸ್ಟ್​ನಲ್ಲೂ ಈ ಸ್ಥಾನ ಸಿಗುವ ಸಾಧ್ಯತೆ ಇದೆ.

ಅಶ್ವಿನ್​ಗೆ ಸ್ಥಾನ:

ನಾಲ್ಕನೇ ಟೆಸ್ಟ್​ನಲ್ಲಿ ರವಿಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ರವೀಂದ್ರ ಜಡೇಜಾ ಇಂಜುರಿಗೆ ತುತ್ತಾಗಿದ್ದು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ. ಹೀಗಾಗಿ ಇವರ ಜಾಗವನ್ನು ಅಶ್ವಿನ್ ಆಕ್ರಮಿಸಲಿದ್ದಾರೆ. ಜೊತೆಗೆ ಔಟ್ ಆಫ್ ಫಾರ್ಮ್​ನಲ್ಲಿರುವ ಇಶಾಂತ್ ಶರ್ಮಾ ಜಾಗಕ್ಕೆ ಶಾರ್ದೂಲ್ ಥಾಕೂರ್ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೂ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಕೊಂಚ ಬದಲಾವಣೆ ಮಾಡಿ ಬಲಿಷ್ಠ ಆಟಗಾರರನ್ನೇ ಆಯ್ಕೆ ಮಾಡಿದೆ. ತಂಡದಿಂದ ಹೊರಗುಳಿದಿದ್ದ ಸ್ಟಾರ್ ಆಲ್ರೌಂಡರ್ ಕ್ರಿಸ್ ವೋಕ್ಸ್ ಕಮ್​ಬ್ಯಾಕ್ ಮಾಡಿದ್ದು, ಆನೆಬಲ ಬಂದಂತಾಗಿದೆ. ಅನುಭವಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ನಾಲ್ಕನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರ ಜಾಗಕ್ಕೆ ಕೆಂಟ್‌ ತಂಡದ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸ್ಯಾಮ್‌ ಬಿಲ್ಲಿಂಗ್ಸ್‌ ಅವರು ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ- ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 2 ರಿಂದ ಲಂಡನ್​ನ ಕೆನ್ನಿಂಗ್ಟನ್ ಓವೆಲ್ ಮೈದಾನದಲ್ಲಿ ಆರಂಭವಾಗಲಿದೆ.

Washington Sundar: ಐಪಿಎಲ್ ಆರಂಭಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್: ಭಾರತದ ಸ್ಟಾರ್ ಸ್ಪಿನ್ನರ್ ಟೂರ್ನಿಯಿಂದ ಔಟ್

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ

(India vs England Ajinkya Rahane doubt for 4th test and rohit sharma to be the new vice captai)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?