AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬರ್ಮಿಂಗ್ಹ್ಯಾಮ್​ನಲ್ಲಿ ಭಾರಿ ಮಳೆ; ಭಾರತದ ಗೆಲುವಿಗೆ ಅಡ್ಡಿಯಾದ ವರುಣ

Edgbaston Test Day 5 Weather Forecast: ಭಾರತವು ಬರ್ಮಿಂಗ್ಹ್ಯಾಮ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಮೇಲೆ ಮೇಲುಗೈ ಸಾಧಿಸಿದೆ. ಗೆಲುವಿಗೆ ಭಾರತಕ್ಕೆ 7 ವಿಕೆಟ್‌ಗಳು ಮಾತ್ರ ಬೇಕಾಗಿದ್ದರೂ, ಕೊನೆಯ ದಿನದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗಿ ಪಂದ್ಯ ವಿಳಂಬವಾಗುವ ಸಾಧ್ಯತೆಯಿದೆ, ಇದು ಇಂಗ್ಲೆಂಡ್‌ಗೆ ಅನುಕೂಲವಾಗಬಹುದು. ಹವಾಮಾನ ವರದಿಯ ಪ್ರಕಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

IND vs ENG: ಬರ್ಮಿಂಗ್ಹ್ಯಾಮ್​ನಲ್ಲಿ ಭಾರಿ ಮಳೆ; ಭಾರತದ ಗೆಲುವಿಗೆ ಅಡ್ಡಿಯಾದ ವರುಣ
Ind Vs Eng
ಪೃಥ್ವಿಶಂಕರ
|

Updated on:Jul 06, 2025 | 4:42 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ (Team India) ಮೇಲುಗೈ ಸಾಧಿಸಿದೆ. ಇದೀಗ ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಕೊನೆಯದಲ್ಲಿ ಭಾರತಕ್ಕೆ 7 ವಿಕೆಟ್‌ಗಳು ಬೇಕಾಗಿದ್ದರೆ, ಇಂಗ್ಲೆಂಡ್ ಗೆಲುವಿಗೆ ಇನ್ನೂ 536 ರನ್ ಬೇಕಾಗಿದೆ. ಆದಾಗ್ಯೂ ಕೊನೆಯ ದಿನದಾಟಕ್ಕೆ ಮಳೆ ಅಡ್ಡಿಪಡಿಸಿದೆ. ಅಂದರೆ ಭಾರತದ ಗೆಲುವಿಗೆ ಅಡ್ಡಿಯಾಗಿರುವ ಮಳೆರಾಯ ನಿಗದಿತ ಸಮಯಕ್ಕೆ ಸರಿಯಾಗಿ ಪಂದ್ಯವನ್ನು ಆರಂಭಿಸಲು ಬಿಟ್ಟಿಲ್ಲ. ಈ ಮೊದಲೇ ವರದಿಯಾದ್ದಂತೆ ಬರ್ಮಿಂಗ್ಹ್ಯಾಮ್‌ ಟೆಸ್ಟ್​ನ ಕೊನೆಯ ದಿನದಂದು ಮಳೆ ಸುರಿಯಲಾರಂಭಿಸಿದ್ದು, ಆಟಕ್ಕೆ ಅಡಚಣೆಯುಂಟಾಗಿದೆ.

ಹವಾಮಾನ ವರದಿ ಹೀಗಿದೆ

ಎಡ್ಜ್‌ಬಾಸ್ಟನ್ ಟೆಸ್ಟ್‌ನ 5 ನೇ ದಿನದ ಹವಾಮಾನದ ಬಗ್ಗೆ ಮಾತನಾಡಿದರೆ, ಅಕ್ಯೂವೆದರ್ ವರದಿಯ ಪ್ರಕಾರ, ಬೆಳಿಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಸ್ಥಳೀಯ ಸಮಯದಂತೆ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆ ಶೇ. 79 ರಷ್ಟು ಇದೆ. ಐದನೇ ದಿನದ ಆಟ ಸ್ಥಳೀಯ ಸಮಯದಂತೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದೆ. ಹೀಗಿರುವಾಗ ಮಧ್ಯಾಹ್ನ 1 ಗಂಟೆಯ ವೇಳೆಗೆ ಪುನಃ ಮಳೆಯಾಗುವ ಸಾಧ್ಯತೆ ಇದ್ದು, ಇದು ಶೇ. 22 ಕ್ಕೆ ಇಳಿಯಲಿದೆ.

ಹೀಗಾಗಿ ಬರ್ಮಿಂಗ್ಹ್ಯಾಮ್​ನಲ್ಲಿ ನಿರೀಕ್ಷೆಯಂತೆ ಮಳೆಯಾಗುತ್ತಿದ್ದು,  ಮೊದಲ ಸೆಷನ್‌ನ ಆಟದ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ಆಟ ನಿಗದಿತ ಸಮಯದಲ್ಲಿ ಪ್ರಾರಂಭವಾಗಿಲ್ಲ. ಇದರಿಂದ ಇಂಗ್ಲೆಂಡ್ ತಂಡಕ್ಕೆ ಪ್ರಯೋಜನವಾಗಿದ್ದು, ಆತಿಥೇಯ ಆಂಗ್ಲರಿಗೆ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನೆರವಾಗಿದೆ.

IND vs ENG: ಸಿಕ್ಸರ್‌ಗಳ ಸರಮಾಲೆ; ಇಂಗ್ಲೆಂಡ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ರಿಷಭ್ ಪಂತ್

ಪಂದ್ಯ ಹೀಗಿದೆ

ಭಾರತ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಆರು ವಿಕೆಟ್ ನಷ್ಟಕ್ಕೆ 427 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಆತಿಥೇಯರಿಗೆ 608 ರನ್​ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ಇಂಗ್ಲೆಂಡ್‌ ತಂಡ ಭಾರತದ ವೇಗಿಗಳ ಮುಂದೆ ಮಂಡಿಯೂರಿದ್ದು ಈಗಾಗಲೇ ಮೂರು ವಿಕೆಟ್​ಗಳನ್ನು ಕಳೆದುಕೊಂಡಿದೆ. ಆರಂಭಿಕ ಜ್ಯಾಕ್ ಕ್ರೌಲಿ, ಬೆನ್ ಡಕೆಟ್ ಮತ್ತು ಜೋ ರೂಟ್ ಪೆವಿಲಿಯನ್ ಸೇರಿಕೊಂಡಿದ್ದಾರೆ. ದಿನದಾಟದ ಅಂತ್ಯದ ವೇಳೆಗೆ, ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್​ನಲ್ಲಿ ಮೂರು ವಿಕೆಟ್​ಗಳಿಗೆ 72 ರನ್ ಗಳಿಸಿದ್ದು ಇನ್ನೂ 536 ರನ್ ಗಳಿಸಬೇಕಾಗಿದೆ. ಓಲಿ ಪೋಪ್ 24 ರನ್ ಮತ್ತು ಹ್ಯಾರಿ ಬ್ರೂಕ್ 15 ರನ್ ಬಾರಿಸಿ ಕ್ರೀಸ್​ನಲ್ಲಿದ್ದಾರೆ. ಭಾರತ ಪರ ಆಕಾಶ್ ದೀಪ್ ಎರಡು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಒಂದು ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Sun, 6 July 25

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ