IND vs ENG: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಸರಣಿಯ ಪೂರ್ಣ ವಿವರ ಹೀಗಿದೆ
IND vs ENG: ಜನವರಿ 22 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಎರಡೂ ಸರಣಿಗೆ ತಂಡಗಳನ್ನು ಪ್ರಕಟಿಸಲಾಗಿದ್ದು, ಟಿ20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಹಾಗೂ ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಎರಡೂ ಸರಣಿಗಳ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.
ಇದೇ ಜನವರಿ 22 ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಮೊದಲಿಗೆ ಟಿ20 ಸರಣಿ ನಡೆಯಲ್ಲಿದ್ದು, ಆ ಬಳಿಕ ಏಕದಿನ ಸರಣಿ ನಡೆಯಲಿದೆ. ಈ ಮೊದಲು ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿದ್ದ ಬಿಸಿಸಿಐ, ಇಂದು ಏಕದಿನ ಸರಣಿಗೂ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಘೋಷಿಸಿದೆ.
ಟಿ20 ಸರಣಿಗೆ ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಟಿ20 ಸರಣಿಯ ವೇಳಾಪಟ್ಟಿ
- ಮೊದಲ ಟಿ20 ಪಂದ್ಯ- 22 ಜನವರಿ, ಕೋಲ್ಕತ್ತಾ
- ಎರಡನೇ ಟಿ20 ಪಂದ್ಯ- 25 ಜನವರಿ, ಚೆನ್ನೈ
- ಮೂರನೇ ಟಿ20 ಪಂದ್ಯ- 28 ಜನವರಿ, ರಾಜ್‌ಕೋಟ್
- ನಾಲ್ಕನೇ ಟಿ20 ಪಂದ್ಯ- 31 ಜನವರಿ, ಪುಣೆ
- ಐದನೇ ಟಿ20 ಪಂದ್ಯ- 2 ಫೆಬ್ರವರಿ, ಮುಂಬೈ
ಏಕದಿನ ಸರಣಿಗೆ ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಏಕದಿನ ಸರಣಿ ವೇಳಾಪಟ್ಟಿ
- ಮೊದಲ ಏಕದಿನ: 6 ಫೆಬ್ರವರಿ, ನಾಗ್ಪುರ
- ಎರಡನೇ ಏಕದಿನ: 9 ಫೆಬ್ರವರಿ, ಕಟಕ್
- ಮೂರನೇ ಏಕದಿನ: 12 ಫೆಬ್ರವರಿ, ಅಹಮದಾಬಾದ್
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ