AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ವಿರುದ್ಧದ ಅಂತಿಮ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ! 5 ಹೊಸ ಮುಖಗಳಿಗೆ ಅವಕಾಶ

IND vs ENG: ಭಾರತ ಮತ್ತು ಇಂಗ್ಲೆಂಡ್ ಸರಣಿಯ ಕೊನೆಯ ನಾಲ್ಕು ಪಂದ್ಯಗಳಲ್ಲಿ ತಂಡದ ಭಾಗವಾಗದ ಐದು ಆಟಗಾರರಿಗೆ ತಮ್ಮ ತಂಡದಲ್ಲಿ ಅವಕಾಶ ನೀಡಿದೆ

IND vs ENG: ಭಾರತ ವಿರುದ್ಧದ ಅಂತಿಮ ಟೆಸ್ಟ್​ಗೆ ಇಂಗ್ಲೆಂಡ್ ತಂಡ ಪ್ರಕಟ! 5 ಹೊಸ ಮುಖಗಳಿಗೆ ಅವಕಾಶ
ಇಂಗ್ಲೆಂಡ್ ತಂಡ
TV9 Web
| Edited By: |

Updated on:Jun 30, 2022 | 5:04 PM

Share

ಭಾರತ ವಿರುದ್ಧದ ಎಜ್‌ಬಾಸ್ಟನ್ ಟೆಸ್ಟ್‌ಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (England Cricket Team) ತಂಡವನ್ನು ಪ್ರಕಟಿಸಿದೆ. ಸರಣಿಯನ್ನು ಉಳಿಸಲು, ಭಾರತ ಮತ್ತು ಇಂಗ್ಲೆಂಡ್ ಸರಣಿಯ ಕೊನೆಯ ನಾಲ್ಕು ಪಂದ್ಯಗಳಲ್ಲಿ ತಂಡದ ಭಾಗವಾಗದ ಐದು ಆಟಗಾರರಿಗೆ ತಮ್ಮ ತಂಡದಲ್ಲಿ ಅವಕಾಶ ನೀಡಿದೆ. ಅಂದರೆ, ಆತಿಥೇಯ ತಂಡವು ತನ್ನ ತಂಡದ ಅರ್ಧದಷ್ಟು ಮಾತ್ರ ಬದಲಾಗಿದೆ. ಕಳೆದ ವರ್ಷ, ಈ ಸರಣಿಯ ನಾಲ್ಕು ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಭಾರತ ತಂಡ ((Indian Cricket Team))ವು 2-1 ಮುನ್ನಡೆ ಸಾಧಿಸಿತು. ಅದೇನೇ ಇರಲಿ, ಇಂಗ್ಲೆಂಡ್ ಸರಣಿಯನ್ನು ಉಳಿಸಿಕೊಳ್ಳಬೇಕಾದರೆ ಎಡ್ಜ್‌ಬಾಸ್ಟನ್ ಟೆಸ್ಟ್ ಗೆಲ್ಲಲೇಬೇಕು.

ಈ ಐವರು ಆಟಗಾರರಿಗೆ ಅವಕಾಶ

ಇದನ್ನೂ ಓದಿ
Image
IND vs ENG 5th Test Match, Live Streaming: ಭಾರತ- ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ ಯಾವ ಚಾನೆಲ್​ನಲ್ಲಿ ಪ್ರಸಾರ?
Image
ಕಾಮನ್‌ವೆಲ್ತ್ ಗೇಮ್ಸ್​ ತಯಾರಿಯಲ್ಲಿರುವ ಭಾರತ ಹಾಕಿ ಅಭ್ಯಾಸ ಶಿಬಿರದಲ್ಲಿ ಕೊರೊನಾ ಹಾವಳಿ; ಐವರಿಗೆ ಸೋಂಕು..!

ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರತ ಇಂಗ್ಲೆಂಡ್‌ಗೆ ಹೋದಾಗ ಐದು ಪಂದ್ಯಗಳ ಸರಣಿಯ ನಾಲ್ಕು ಪಂದ್ಯಗಳನ್ನು ಆಡಲಾಗಿತ್ತು. ಆ 4 ಪಂದ್ಯಗಳಲ್ಲಿ ಜ್ಯಾಕ್ ಲೀಚ್, ಪಾಟ್ಸ್, ಸ್ಯಾಮ್ ಬಿಲ್ಲಿಂಗ್ಸ್, ಬೆನ್ ಸ್ಟೋಕ್ಸ್, ಅಲೆಕ್ಸ್ ಲೀಸ್‌ನಲ್ಲಿ ಯಾವುದೇ ಆಟಗಾರರು ಆ ಸರಣಿಯ ಭಾಗವಾಗಿರಲಿಲ್ಲ. ಆದಾಗ್ಯೂ, ಇವರೆಲ್ಲರೂ ಅಂತಿಮ ಮತ್ತು ನಿರ್ಣಾಯಕ ಟೆಸ್ಟ್‌ನ ಆಡುವ XI ನಲ್ಲಿ ಆಯ್ಕೆಯಾಗಿದ್ದಾರೆ.

ಜೇಮ್ಸ್ ಆಂಡರ್ಸನ್ ವಾಪಸ್

ನ್ಯೂಜಿಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಇಂಗ್ಲೆಂಡ್ ತಂಡದಲ್ಲಿ ಒಂದೇ ಒಂದು ಬದಲಾವಣೆ ಮಾಡಲಾಗಿದೆ. ಜೇಮಿ ಓವರ್‌ಟನ್ ಬದಲಿಗೆ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಮರಳಿದ್ದಾರೆ. ಈ ಪಂದ್ಯಕ್ಕಾಗಿ ಭಾರತ ಇನ್ನೂ ತನ್ನ ಪ್ಲೇಯಿಂಗ್ XI ಅನ್ನು ಪ್ರಕಟಿಸಿಲ್ಲ, ಆದರೂ ಇಂದು ಸಂಜೆಯೊಳಗೆ ಭಾರತ ತನ್ನ ತಂಡವನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಇಂಗ್ಲೆಂಡ್ ತಂಡ: ಅಲೆಕ್ಸ್ ಲೀಸ್, ಜ್ಯಾಕ್ ಕ್ರೌಲಿ, ಓಲಿ ಪೋಪ್, ಜೋ ರೂಟ್, ಜಾನಿ ಬೈರ್ಸ್ಟೋವ್, ಬೆನ್ ಸ್ಟೋಕ್ಸ್, ಸ್ಯಾಮ್ ಬಿಲ್ಲಿಂಗ್ಸ್, ಮ್ಯಾಥ್ಯೂ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

ಭಾರತಕ್ಕೆ ಸರಣಿ ಗೆಲ್ಲುವ ಅವಕಾಶ

2007ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಅವಕಾಶ ಟೀಮ್ ಇಂಡಿಯಾಗೆ ಇದೆ. ಮೊದಲ ನಾಲ್ಕು ಪಂದ್ಯಗಳ ನಂತರ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದ್ದು, ಕೇವಲ ಡ್ರಾ ಮಾಡಿಕೊಳ್ಳಬೇಕಾಗಿದೆ. ಆದಾಗ್ಯೂ, ಬೆನ್ ಸ್ಟೋಕ್ಸ್ ಹೊಸ ನಾಯಕನಾಗಿ ಮತ್ತು ಬ್ರೆಂಡನ್ ಮೆಕಲಮ್ ಹೊಸ ಟೆಸ್ಟ್ ಕೋಚ್ ಆಗಿ, ಇಂಗ್ಲೆಂಡ್ ಕ್ರಿಕೆಟ್ ತಂಡವು ಮೂರು ಪಂದ್ಯಗಳ ಸರಣಿಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಕ್ಲೀನ್ ಸ್ವೀಪ್ ಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಈ ಕೊನೆಯ ಪಂದ್ಯ ಕಳೆದ ವರ್ಷದ ಪಂದ್ಯಗಳಿಗಿಂತ ಹೆಚ್ಚು ಕಷ್ಟಕರವಾಗಲಿದೆ.

Published On - 4:48 pm, Thu, 30 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ