Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಇಂಗ್ಲೆಂಡ್ ಮುಖಾಮುಖಿ: ಆಂಗ್ಲರಿಗೆ ಮಾಡು ಇಲ್ಲವೇ ಮಡಿ ಪಂದ್ಯ

India vs England, ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿ ಆಗಲಿದೆ. ಆಂಗ್ಲರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಕೂಡ ಗೆಲುವಿನ ಮೇಲೆ ಕಣ್ಣಿಟ್ಟಿದೆ.

IND vs ENG, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಇಂಗ್ಲೆಂಡ್ ಮುಖಾಮುಖಿ: ಆಂಗ್ಲರಿಗೆ ಮಾಡು ಇಲ್ಲವೇ ಮಡಿ ಪಂದ್ಯ
IND vs ENG
Follow us
Vinay Bhat
|

Updated on: Oct 29, 2023 | 7:01 AM

ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಆಯೋಜಿಸಲಾಗಿರುವ 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್ (India vs England) ಮುಖಾಮುಖಿ ಆಗಲಿದೆ. ಆಂಗ್ಲರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಭಾರತ ತಂಡ ಹೇಗಿದೆ?:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ. ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್ ಆಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ, ಯಾರ ಜಾಗದಲ್ಲಿ ಆಡುತ್ತಾರೆ ಎಂಬುದು ನೋಡಬೇಕಿದೆ. ಮೊಹಮ್ಮದ್ ಶಮಿ ಕಳೆದ ನ್ಯೂಝಿಲೆಂಡ್ ವಿರುದ್ಧದ ತಮ್ಮ ಚೊಚ್ಚಲ ಪಂದ್ಯದಲ್ಲೇ 5 ವಿಕೆಟ್ ಕಿತ್ತು ಮಿಂಚಿದ್ದರು. ಹೀಗಾಗಿ ಇವರನ್ನು ಕೈಬಿಡುವುದು ಅನುಮಾನ. ಮೊಹಮ್ಮದ್ ಸಿರಾಜ್ ಅಥವಾ ಕುಲ್ದೀಪ್ ಯಾದವ್​ಗೆ ವಿಶ್ರಾಂತಿ ನೀಡಿ ಅಶ್ವಿನ್ ಆಡಿಸಿದರೆ ಅಚ್ಚರಿ ಪಡಬೇಕಿಲ್ಲ.

NED vs BAN ICC World Cup 2023: ಬಾಂಗ್ಲಾ ವಿರುದ್ಧ ನೆದರ್​ಲೆಂಡ್ಸ್​ಗೆ​ ಭರ್ಜರಿ ಜಯ

ಇದನ್ನೂ ಓದಿ
Image
ಬಾಂಗ್ಲಾದೇಶ್​ ವಿರುದ್ಧ ಗೆದ್ದು ಬೀಗಿದ ನೆದರ್​ಲೆಂಡ್ಸ್​
Image
ಬರೋಬ್ಬರಿ 771 ರನ್​​ಗಳು: ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ
Image
ಸ್ಪೋಟಕ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಕನ್ನಡಿಗ ರಚಿನ್ ರವೀಂದ್ರ
Image
ಶಮಿ, ಸಿರಾಜ್ ಅಥವಾ ಅಶ್ವಿನ್? ಇಂಗ್ಲೆಂಡ್ ವಿರುದ್ಧ ಯಾರಿಗೆ ಅವಕಾಶ?

ಉಳಿದಂತೆ ಟೀಮ್ ಇಂಡಿಯಾ ಭರ್ಜರಿ ಫಾರ್ಮ್​ನಲ್ಲಿದೆ. ಆಡಿದ ಎಲ್ಲ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆದ್ದು ಬೀಗಿದೆ. ಇಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ ಸೆಮಿ ಫೈನಲ್​ಗೆ ಲಗ್ಗೆಯಿಟ್ಟಂತೆ. ರೋಹಿತ್ ಶರ್ಮಾ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಶುಭ್​ಮನ್ ಗಿಲ್ ಕೂಡ ಫಾರ್ಮ್​ನಲ್ಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಕೊಡುಗೆ ಉತ್ತಮವಾಗಿದೆ. ಶ್ರೇಯಸ್ ಅಯ್ಯರ್ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಸೂರ್ಯಕುಮಾರ್ ಯಾದವ್​ಗೆ ಇನ್ನೊಂದು ಅವಕಾಶ ಸಿಗಬೇಕು. ಬೌಲಿಂಗ್​ನಲ್ಲಿ ಜಡೇಜಾ ಬ್ರೇಕ್ ತಂದುಕೊಡುತ್ತಿದ್ದಾರೆ. ಬುಮ್ರಾ ಕೂಡ ಲಯದಲ್ಲಿದ್ದಾರೆ.

ಆಂಗ್ಲರಿಗೆ ಗೆಲ್ಲಲೇ ಬೇಕು:

ಇಂಗ್ಲೆಂಡ್ ತಂಡದಿಂದ ವಿಶ್ವಕಪ್​ನಲ್ಲಿ ಹಿಂದೆಂದೂ ಕಾಣದ ಕಳಪೆ ಪ್ರದರ್ಶನ ಕಂಡುಬರುತ್ತಿದೆ. ಇದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋತು ಕೇವಲ ಒಂದರಲ್ಲಷ್ಟೆ ಗೆದ್ದಿದೆ. ಸೆಮೀಸ್ ಆಸೆ ಬಹುತೇಖ ಕಮರಿ ಹೋಗಿದೆ. ತಂಡದಲ್ಲಿ ಸ್ಟಾರ್ ಆಟಗಾರರಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬಟ್ಲರ್ ನಾಯಕತ್ವ ಸದ್ದು ಮಾಡುತ್ತಿಲ್ಲ. ಹಿಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಕೇವಲ 170 ರನ್​ಗಳಿಗೆ ಹಾಗೂ ಲಂಕಾ ವಿರುದ್ಧ 156 ರನ್​ಗಳಿಗೆ ಆಲೌಟ್ ಆಗಿತ್ತು.

ಏಕಾನ ಪಿಚ್ ರಿಪೋರ್ಟ್:

ಏಕಾನ ಕ್ರಿಕೆಟ್ ಸ್ಟೇಡಿಯಂ ಬೌಲರ್‌ಗಳಿಗೆ, ವಿಶೇಷವಾಗಿ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟರ್‌ಗಳು ಪರದಾಡುವುದು ಖಚಿತ. ಪಂದ್ಯವು ಮುಂದುವರೆದಂತೆ, ವೇಗಿಗಳಿಗೆ ಪ್ರಯೋಜನವನ್ನು ಆಗುತ್ತದೆ. ಮೈದಾನದ ಗಾತ್ರವು ಚಿಕ್ಕದಾಗಿರುವುದರಿಂದ ದೊಡ್ಡ ಸ್ಕೋರ್ ಆಗಬಹುದು. ಈ ಮೈದಾನದಲ್ಲಿ ಒಟ್ಟು 12 ಏಕದಿನ ಪಂದ್ಯಗಳು ನಡೆದಿದೆ. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಮೂರು ಬಾರಿ ಹಾಗೂ ಚೇಸಿಂಗ್ ಮಾಡಿದ ತಂಡ 9 ಬಾರಿ ಗೆದ್ದಿದೆ. ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 229 ಆಗಿದೆ. ಎರಡನೇ ಇನಿಂಗ್ಸ್‌ನ ಸರಾಸರಿ ಸ್ಕೋರ್ 213 ರನ್ಸ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ