IND vs ENG: ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್; ಟೆಸ್ಟ್​ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಆಂಡರ್ಸನ್

IND vs ENG: ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವ ಮೂಲಕ ಅವರು ಟೆಸ್ಟ್ ನಲ್ಲಿ 620 ವಿಕೆಟ್ ಗಳನ್ನು ಪೂರೈಸಿದರು. ಇದರೊಂದಿಗೆ, ಜೇಮ್ಸ್ ಆಂಡರ್ಸನ್ ಭಾರತದ ಶ್ರೇಷ್ಠ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು.

IND vs ENG: ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್; ಟೆಸ್ಟ್​ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ಆಂಡರ್ಸನ್
ಜೇಮ್ಸ್ ಆಂಡರ್ಸನ್
Follow us
TV9 Web
| Updated By: Vinay Bhat

Updated on: Aug 07, 2021 | 6:42 AM

ಇಂಗ್ಲೆಂಡ್ ನ ಅನುಭವಿ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ಅವರನ್ನು ಔಟ್ ಮಾಡುವ ಮೂಲಕ ಅವರು ಟೆಸ್ಟ್ ನಲ್ಲಿ 620 ವಿಕೆಟ್ ಗಳನ್ನು ಪೂರೈಸಿದರು. ಇದರೊಂದಿಗೆ, ಜೇಮ್ಸ್ ಆಂಡರ್ಸನ್ ಭಾರತದ ಶ್ರೇಷ್ಠ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದರು. ಕುಂಬ್ಳೆ 619 ಟೆಸ್ಟ್ ವಿಕೆಟ್ ಪಡೆದಿದ್ದಾರೆ. ಈಗ ಶ್ರೀಲಂಕಾದ ಶ್ರೇಷ್ಠ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ (800 ವಿಕೆಟ್) ಮತ್ತು ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ (708 ವಿಕೆಟ್) ಮಾತ್ರ ಆಂಡರ್ಸನ್ಗಿಂತ ಮುಂದಿದ್ದಾರೆ. ಆಂಡರ್ಸನ್ ಟೆಸ್ಟ್​ನಲ್ಲಿ ವಿಕೆಟ್​ಗಳ ವಿಷಯದಲ್ಲಿ ಅತ್ಯಂತ ಯಶಸ್ವಿ ವೇಗದ ಬೌಲರ್.

ಜೇಮ್ಸ್ ಆಂಡರ್ಸನ್ 2003 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದರು. ಅವರು 163 ನೇ ಟೆಸ್ಟ್ ಆಡುತ್ತಿದ್ದಾರೆ. ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ಆಟಗಾರರಲ್ಲಿ ಅವರು ಏಳನೇ ಸ್ಥಾನದಲ್ಲಿದ್ದಾರೆ. ಆದಾಗ್ಯೂ, ಅವರು ಇಂಗ್ಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ಆಡಿದ ಆಟಗಾರ ಎನಿಸಿಕೊಂಡಿದ್ದಾರೆ. ಜೇಮ್ಸ್ ಆಂಡರ್ಸನ್ ಭಾರತದ ವಿರುದ್ಧ ನಾಟಿಂಗ್ ಹ್ಯಾಮ್ ಟೆಸ್ಟ್​ನಲ್ಲಿ ಅದ್ಭುತ ಬೌಲಿಂಗ್ ಮಾಡಿದ್ದಾರೆ. ಪಂದ್ಯದ ಎರಡನೇ ದಿನ ಸತತ ಎರಡು ಎಸೆತಗಳಲ್ಲಿ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರ ವಿಕೆಟ್ ಪಡೆದರು. ಅವರು ಕೊಹ್ಲಿಗೆ ಖಾತೆ ತೆರೆಯಲೂ ಅವಕಾಶ ನೀಡಲಿಲ್ಲ.

ಆಂಡರ್ಸನ್ ಅತಿ ವೇಗವಾಗಿ 600 ಟೆಸ್ಟ್ ವಿಕೆಟ್ ಪಡೆದ ಬೌಲರ್ ಜೇಮ್ಸ್ ಆಂಡರ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ವೇಗವಾಗಿ 600 ವಿಕೆಟ್ ಪಡೆದ ಬೌಲರ್. ಏಳು ಪ್ರಮುಖ ಟೆಸ್ಟ್ ಆಡುವ ರಾಷ್ಟ್ರಗಳ ವಿರುದ್ಧ 50 ಕ್ಕೂ ಹೆಚ್ಚು ವಿಕೆಟ್ ಪಡೆದ ಏಕೈಕ ಬೌಲರ್ ಅವರು. ಟೆಸ್ಟ್​ನಲ್ಲಿ 30 ಬಾರಿ ಒಂದು ಇನ್ನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದ ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ತಿಂಗಳು, ಅವರು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 1000 ವಿಕೆಟ್ ಪೂರೈಸಿದರು. ಜೊತೆಗೆ 1000 ಪ್ರಥಮ ದರ್ಜೆ ವಿಕೆಟ್ ಪಡೆದ 216 ನೇ ಬೌಲರ್ ಎನಿಸಿಕೊಂಡಿದ್ದಾರೆ.

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ