AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೂವರ ಶತಕ, ಮೂವರ ಸೊನ್ನೆ; 471 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ

India vs England Leeds Test: ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 471 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ ಮೂವರು ಆಟಗಾರರು ಶತಕ ಬಾರಿಸಿದರು. ಮೊದಲ ದಿನ 359 ರನ್ ಗಳಿಸಿದ್ದ ಭಾರತ, ಎರಡನೇ ದಿನ 112 ರನ್ ಮಾತ್ರ ಗಳಿಸಿತು. ರಿಷಭ್ ಪಂತ್ ಶತಕ ಸಿಡಿಸಿದರೂ, ಉಳಿದವರ ಪ್ರದರ್ಶನ ನಿರಾಸೆ ಮೂಡಿಸಿತು. 600 ರನ್ ಗಳಿಸುವ ನಿರೀಕ್ಷೆ ಹುಸಿಯಾಯಿತು.

IND vs ENG: ಮೂವರ ಶತಕ, ಮೂವರ ಸೊನ್ನೆ; 471 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ
Ind Vs Eng
ಪೃಥ್ವಿಶಂಕರ
|

Updated on:Jun 21, 2025 | 7:01 PM

Share

ಲೀಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (Team India) 471 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ ಮೂವರು ಬ್ಯಾಟ್ಸ್‌ಮನ್​ಗಳು ಭರ್ಜರಿ ಶತಕ ಸಿಡಿಸುವ ಮೂಲಕ ತಂಡವನ್ನು ಈ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು. 3 ವಿಕೆಟ್ ನಷ್ಟಕ್ಕೆ 359 ರನ್ ಬಾರಿಸಿ ಮೊದಲ ದಿನದಾಟವನ್ನು ಮುಗಿಸಿದ್ದ ಟೀಂ ಇಂಡಿಯಾ, ಎರಡನೇ ದಿನದಾಟದಲ್ಲಿ 2ನೇ ಸೆಷನ್ ಮುಗಿಯುವುದಕ್ಕೆ ಮುನ್ನವೇ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ತಂಡದ ಖಾತೆಗೆ 112 ರನ್​ ಸೇರಿಸಲಷ್ಟೇ ಶಕ್ತವಾಯಿತು. ಎರಡನೇ ದಿನದಾಟದಲ್ಲಿ ಉಪನಾಯಕ ರಿಷಭ್ ಪಂತ್ (Rishabh Pant) ಭರ್ಜರಿ ಶತಕವನ್ನು ಸಿಡಿಸಿದನ್ನು ಬಿಟ್ಟರೆ, ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಹೀಗಾಗಿ ಒಂದು ಹಂತದಲ್ಲಿ 600 ರನ್ ಕಲೆಹಾಕುವ ಸೂಚನೆ ನೀಡಿದ್ದ ಭಾರತ ತಂಡ ದಿಢೀರ ಕುಸಿತ ಕಂಡಿತು.

ಮೂವರ ಶತಕ

ಭಾರತ ತಂಡದ ಮೊದಲ ಇನ್ನಿಂಗ್ಸ್ 471 ರನ್‌ಗಳಿಗೆ ಕೊನೆಗೊಂಡಿದೆ. ಭಾರತದ ಪರ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಮತ್ತು ರಿಷಭ್ ಪಂತ್ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರೆ, ಕೆಎಲ್ ರಾಹುಲ್ 42 ರನ್​ಗಳ ಕಾಣಿಕೆ ನೀಡಿದರು. ಈ ನಾಲ್ವರು ಬ್ಯಾಟ್ಸ್‌ಮನ್‌ಗಳನ್ನು ಹೊರತುಪಡಿಸಿ, ಬೇರೆ ಯಾರೂ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ಪರ, ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಜೋಶ್ ಟಂಗ್ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆದರೆ, ಬ್ರೈಡನ್ ಕಾರ್ಸೆ ಮತ್ತು ಶೋಯೆಬ್ ಬಶೀರ್ ತಲಾ ಒಂದು ವಿಕೆಟ್ ಪಡೆದರು.

112 ರನ್​ಗಳಿಗೆ 7 ವಿಕೆಟ್ ಪತನ

ಮೂರು ವಿಕೆಟ್‌ಗಳಿಗೆ 359 ರನ್‌ಗಳಿಂದ ಭಾರತ ಎರಡನೇ ದಿನದಾಟವನ್ನು ಪ್ರಾರಂಭಿಸಿದ ಭಾರತ ಎರಡನೇ ದಿನದ ಎರಡನೇ ಸೆಷನ್ ಮುಗಿಯುವ ಮುನ್ನವೇ 471 ರನ್‌ಗಳಿಗೆ ಆಲೌಟ್ ಆಯಿತು. ಅಂದರೆ ಭಾರತ ತಂಡ 112 ರನ್‌ ಕಲೆಹಾಕುವುದರೊಳಗೆ ತನ್ನ ಉಳಿದ ಏಳು ವಿಕೆಟ್‌ಗಳನ್ನು ಕಳೆದುಕೊಂಡಿತು. ಭಾರತ ತಂಡ ಒಂದು ಹಂತದಲ್ಲಿ 600 ರನ್​ಗಳ ಗಡಿ ದಾಟುವ ಸುಳಿವು ನೀಡಿತ್ತು. ಆದರೆ ಹೆಂಡಿಂಗ್ಲಿಯಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ಹವಾಮಾನವು ವೇಗದ ಬೌಲರ್‌ಗಳಿಗೆ ಬೆಂಬಲ ನೀಡಿತು. ಇದರ ಲಾಭ ಪಡೆದ ಸ್ಟೋಕ್ಸ್ ಮತ್ತು ಟಾಂಗ್‌ ಭಾರತದ ಕೆಳಕ್ರಮಾಂಕವನ್ನು ದ್ವಂಸ ಮಾಡಿದರು.

IND vs ENG: ‘ಸ್ಟುಪಿಡ್ ಟು ಸೂಪರ್ಬ್’..; ತೆಗಳಿದವರಿಂದಲೇ ಹೊಗಳಿಸಿಕೊಂಡ ರಿಷಭ್ ಪಂತ್; ವಿಡಿಯೋ

ಎಡವಿದ ಕೆಳಕ್ರಮಾಂಕ

ಮೇಲೆ ಹೇಳಿದಂತೆ ಭಾರತದ ಪರ ಮೂವರು ಶತಕ ಸಿಡಿಸಿದರೆ, ಇನ್ನು ಮೂವರು ಖಾತೆ ತೆರೆಯದೆ ಔಟಾದರು. ಅವರಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದ ಸಾಯಿ ಸುದರ್ಶನ್, ಎಂಟು ವರ್ಷಗಳ ನಂತರ ತಂಡಕ್ಕೆ ಮರಳಿದ್ದ ಕರುಣ್ ನಾಯರ್ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಸೇರಿದ್ದಾರೆ. ಉಳಿದಂತೆ ಜಡೇಜಾ 11 ರನ್ ಗಳಿಸಿದರೆ, ಪ್ರಸಿದ್ಧ್ ಕೃಷ್ಣ ಒಂದು ರನ್ ಗಳಿಸಿದರು. ಭಾರತಕ್ಕೆ ನಿರಾಶಾದಾಯಕ ಸಂಗತಿಯೆಂದರೆ, ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಗಳಿಸಿದರೂ, ತಂಡವು 500 ರನ್‌ಗಳ ಗಡಿಯನ್ನು ತಲುಪಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Sat, 21 June 25

ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!