AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG, Live Streaming: ಭಾರತಕ್ಕೆ ಹಾಲಿ ಚಾಂಪಿಯನ್ನರ ಸವಾಲು; ಪಂದ್ಯ ಎಷ್ಟು ಗಂಟೆಗೆ ಆರಂಭ?

IND vs ENG, Live Streaming: ಈ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಕ್ರಿಕೆಟ್ ಕದನ ಇದೇ ಭಾನುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

IND vs ENG, Live Streaming: ಭಾರತಕ್ಕೆ ಹಾಲಿ ಚಾಂಪಿಯನ್ನರ ಸವಾಲು; ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ- ಇಂಗ್ಲೆಂಡ್
ಪೃಥ್ವಿಶಂಕರ
|

Updated on: Oct 28, 2023 | 8:37 AM

Share

ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್‌ (India vs England) ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಕ್ರಿಕೆಟ್ ಕದನ ಇದೇ ಭಾನುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekana Cricket Stadium in Lucknow) ನಡೆಯಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. 2023ರ ವಿಶ್ವಕಪ್‌ನಲ್ಲಿ ಭಾರತದ ಇದುವರೆಗಿನ ಪ್ರದರ್ಶನ ಅತ್ಯುತ್ತಮವಾಗಿದೆ. ಟೂರ್ನಿಯಲ್ಲಿ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಈ ಐದೂ ಪಂದ್ಯಗಳಲ್ಲಿ ಭಾರತ ಗೆದ್ದಿದೆ. ಇದರಿಂದಾಗಿ ಟೀಂ ಇಂಡಿಯಾ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇಂಗ್ಲೆಂಡ್ ಇಲ್ಲಿಯವರೆಗೆ ತನ್ನ ಪ್ರದರ್ಶನದಿಂದ ಎಲ್ಲರನ್ನು ನಿರಾಶೆಗೊಳಿಸಿದ್ದು, ತಂಡವು ಐದರಲ್ಲಿ ಒಂದು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ 9 ನೇ ಸ್ಥಾನದಲ್ಲಿದೆ.

ಪಂದ್ಯದ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವು ಭಾನುವಾರ, ಅಕ್ಟೋಬರ್ 29 ರಂದು ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ (BRSABV) ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಕೂಡಲೇ ನಾಯಕನಾಗಿ ಶತಕ ಬಾರಿಸಲಿದ್ದಾರೆ ರೋಹಿತ್..!

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬೇಕು?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಉಚಿತ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಅಭಿಮಾನಿಗಳು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ಸಂಭಾವ್ಯ ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್: ಜಾನಿ ಬೈರ್ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!