ಈ ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ನಡುವಿನ ಈ ಕ್ರಿಕೆಟ್ ಕದನ ಇದೇ ಭಾನುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekana Cricket Stadium in Lucknow) ನಡೆಯಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. 2023ರ ವಿಶ್ವಕಪ್‌ನಲ್ಲಿ ಭಾರತದ ಇದುವರೆಗಿನ ಪ್ರದರ್ಶನ ಅತ್ಯುತ್ತಮವಾಗಿದೆ. ಟೂರ್ನಿಯಲ್ಲಿ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಈ ಐದೂ ಪಂದ್ಯಗಳಲ್ಲಿ ಭಾರತ ಗೆದ್ದಿದೆ. ಇದರಿಂದಾಗಿ ಟೀಂ ಇಂಡಿಯಾ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಇಂಗ್ಲೆಂಡ್ ಇಲ್ಲಿಯವರೆಗೆ ತನ್ನ ಪ್ರದರ್ಶನದಿಂದ ಎಲ್ಲರನ್ನು ನಿರಾಶೆಗೊಳಿಸಿದ್ದು, ತಂಡವು ಐದರಲ್ಲಿ ಒಂದು ಗೆಲುವು ಮತ್ತು ನಾಲ್ಕು ಸೋಲುಗಳೊಂದಿಗೆ 9 ನೇ ಸ್ಥಾನದಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವು ಭಾನುವಾರ, ಅಕ್ಟೋಬರ್ 29 ರಂದು ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ (BRSABV) ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಕೂಡಲೇ ನಾಯಕನಾಗಿ ಶತಕ ಬಾರಿಸಲಿದ್ದಾರೆ ರೋಹಿತ್..!
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಅಭಿಮಾನಿಗಳು ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್: ಜಾನಿ ಬೈರ್ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ