AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಲಾರ್ಡ್ಸ್‌ ಟೆಸ್ಟ್​ಗೂ ಇದೆಯಾ ಮಳೆಯಾತಂಕ? ಇಲ್ಲಿದೆ ಐದು ದಿನಗಳ ಹವಾಮಾನ ವರದಿ

England vs India Lord's Test: ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 10 ರಿಂದ ಆರಂಭವಾಗುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಐದು ದಿನಗಳ ಪಂದ್ಯದ ಯಾವುದೇ ದಿನ ಮಳೆಯಾಗುವ ಸಾಧ್ಯತೆ 0% ಇದೆ. ಹೀಗಾಗಿ ಅಭಿಮಾನಿಗಳು ಯಾವುದೇ ಆತಂಕವಿಲ್ಲದೆ ಪೂರ್ಣ 5 ದಿನವೂ ಪಂದ್ಯವನ್ನು ವೀಕ್ಷಿಸಬಹುದು.

IND vs ENG: ಲಾರ್ಡ್ಸ್‌ ಟೆಸ್ಟ್​ಗೂ ಇದೆಯಾ ಮಳೆಯಾತಂಕ? ಇಲ್ಲಿದೆ ಐದು ದಿನಗಳ ಹವಾಮಾನ ವರದಿ
Lords Ground
ಪೃಥ್ವಿಶಂಕರ
|

Updated on: Jul 09, 2025 | 8:51 PM

Share

ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ (Lords Test Match) ಇಂಗ್ಲೆಂಡ್ ಹಾಗೂ ಭಾರತ (India vs England) ನಡುವಿನ ಮೂರನೇ ಟೆಸ್ಟ್ ಪಂದ್ಯ ಜುಲೈ 10 ರಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಗೆಲ್ಲುವ ಉದ್ದೇಶದಿಂದ ಎರಡೂ ತಂಡಗಳು ಮೈದಾನಕ್ಕೆ ಇಳಿಯಲಿವೆ. ಈ ಎರಡೂ ತಂಡಗಳ ನಡುವೆ ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳು ನಡೆದಿದ್ದು, ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದಿದ್ದರೆ, ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಭಾರಿ ಅಂತರದಿಂದ ಗೆದ್ದಿಕೊಂಡಿದೆ. ಇದೀಗ ಉಭಯ ತಂಡಗಳ ಆಟಗಾರರ ಗಮನ ಮೂರನೇ ಟೆಸ್ಟ್‌ನ ಮೇಲಿದೆ. ಇಲ್ಲಿಯವರೆಗೆ ನಡೆದ ಎರಡು ಟೆಸ್ಟ್‌ ಪಂದ್ಯಗಳ ಸಮಯದಲ್ಲಿ ಮಳೆ ಬಂದಿತ್ತಾದರೂ ಪಂದ್ಯದ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಇದೀಗ ಲಾರ್ಡ್ಸ್‌ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೂ ಮಳೆಯ ಆತಂಕವಿದೆಯಾ (Weather forecast Lords) ಎಂಬ ಪ್ರಶ್ನೆ ಅಭಿಮಾನಿಗಳ ಮನಸ್ಸಿನಲ್ಲಿ ಉದ್ಭವಿಸಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದ ಐದು ದಿನಗಳಲ್ಲಿ ಹವಾಮಾನ ಹೇಗಿರುತ್ತದೆ? ಎಂಬುದರ ಪೂರ್ಣ ವಿವರ ಇಲ್ಲಿದೆ.

ಐದು ದಿನದ ಹವಾಮಾನ ವರದಿ

ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಎಂದರೆ ಪಂದ್ಯದ ಐದು ದಿನಗಳಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ. ಜುಲೈ 10 ಮತ್ತು 11 ರಂದು ಮಳೆಯಾಗುವ ಸಾಧ್ಯತೆ 0%. ಹವಾಮಾನ 29-30 ಡಿಗ್ರಿ ಇರುತ್ತದೆ. ಜುಲೈ 12 ರ ಬಗ್ಗೆ ಹೇಳುವುದಾದರೆ, ಈ ದಿನವೂ ಹವಾಮಾನ ಸ್ಪಷ್ಟವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪಂದ್ಯದ ನಾಲ್ಕನೇ ದಿನ ಅಂದರೆ ಜುಲೈ 13 ರಂದು ಹವಾಮಾನ ತುಂಬಾ ಬಿಸಿಯಾಗಿರುತ್ತದೆ. ಈ ದಿನದ ಗರಿಷ್ಠ ತಾಪಮಾನ 30 ಡಿಗ್ರಿ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇತರ ದಿನಗಳಂತೆ, ಪಂದ್ಯದ ಐದನೇ ಮತ್ತು ಕೊನೆಯ ದಿನದಂದು ಹವಾಮಾನವು ತುಂಬಾ ಬಿಸಿಯಾಗಿರಲಿದ್ದು, ಈ ದಿನದ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಅದೇ ಸಮಯದಲ್ಲಿ, ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.

ಜಸ್ಪ್ರೀತ್ ಬುಮ್ರಾ ಆಡುವುದು ಖಚಿತ

ಈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ಅವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತದೆ. ಏಕೆಂದರೆ ಕೆಲಸದ ಹೊರೆ ನಿರ್ವಾಹಣೆ ಕಾರಣ ನೀಡಿ ಎರಡನೇ ಟೆಸ್ಟ್ ಪಂದ್ಯದಿಂದ ಬುಮ್ರಾರನ್ನು ಟೀಮ್ ಇಂಡಿಯಾದ ಆಡುವ XI ನಿಂದ ಕೈಬಿಡಲಾಗಿತ್ತು. ಆದರೆ ಅದಕ್ಕೂ ಮುನ್ನ ನಡೆದ ಲೀಡ್ಸ್‌ ಟೆಸ್ಟ್​ನ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 5 ವಿಕೆಟ್‌ಗಳನ್ನು ಕಬಳಿಸಿದ್ದರು. ಈಗ ಮೂರನೇ ಟೆಸ್ಟ್‌ನಲ್ಲೂ ಬುಮ್ರಾ ಅವರಿಂದ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಟೀಂ ಇಂಡಿಯಾದ ಬಗ್ಗೆ ಹೇಳುವುದಾದರೆ, ತಂಡದ ಬ್ಯಾಟ್ಸ್‌ಮನ್‌ಗಳು ಇಲ್ಲಿಯವರೆಗೆ ತಮ್ಮ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ. ಆದರೆ ಮೊದಲ ಟೆಸ್ಟ್‌ನಲ್ಲಿ ತಂಡದ ಬೌಲರ್‌ಗಳು ಮಾತ್ರ ಕೊಂಚ ಪರಿಣಾಮಕಾರಿಯಾಗುವಲ್ಲಿ ವಿಫಲರಾಗಿದ್ದರು. ಆದರೆ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪುನರಾಗಮನ ಮಾಡಿ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ