
ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ (Lords Test Match) ಇಂಗ್ಲೆಂಡ್ ಹಾಗೂ ಭಾರತ (India vs England) ನಡುವಿನ ಮೂರನೇ ಟೆಸ್ಟ್ ಪಂದ್ಯ ಜುಲೈ 10 ರಿಂದ ಆರಂಭವಾಗಲಿದೆ. ಈ ಪಂದ್ಯವನ್ನು ಗೆಲ್ಲುವ ಉದ್ದೇಶದಿಂದ ಎರಡೂ ತಂಡಗಳು ಮೈದಾನಕ್ಕೆ ಇಳಿಯಲಿವೆ. ಈ ಎರಡೂ ತಂಡಗಳ ನಡುವೆ ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳು ನಡೆದಿದ್ದು, ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದಿದ್ದರೆ, ಟೀಂ ಇಂಡಿಯಾ ಎರಡನೇ ಟೆಸ್ಟ್ ಪಂದ್ಯವನ್ನು ಭಾರಿ ಅಂತರದಿಂದ ಗೆದ್ದಿಕೊಂಡಿದೆ. ಇದೀಗ ಉಭಯ ತಂಡಗಳ ಆಟಗಾರರ ಗಮನ ಮೂರನೇ ಟೆಸ್ಟ್‌ನ ಮೇಲಿದೆ. ಇಲ್ಲಿಯವರೆಗೆ ನಡೆದ ಎರಡು ಟೆಸ್ಟ್ ಪಂದ್ಯಗಳ ಸಮಯದಲ್ಲಿ ಮಳೆ ಬಂದಿತ್ತಾದರೂ ಪಂದ್ಯದ ಮೇಲೆ ಹೆಚ್ಚು ಪರಿಣಾಮ ಬೀರಿಲ್ಲ. ಇದೀಗ ಲಾರ್ಡ್ಸ್‌ನಲ್ಲಿ ನಡೆಯಲ್ಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೂ ಮಳೆಯ ಆತಂಕವಿದೆಯಾ (Weather forecast Lords) ಎಂಬ ಪ್ರಶ್ನೆ ಅಭಿಮಾನಿಗಳ ಮನಸ್ಸಿನಲ್ಲಿ ಉದ್ಭವಿಸಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದ ಐದು ದಿನಗಳಲ್ಲಿ ಹವಾಮಾನ ಹೇಗಿರುತ್ತದೆ? ಎಂಬುದರ ಪೂರ್ಣ ವಿವರ ಇಲ್ಲಿದೆ.
ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಎಂದರೆ ಪಂದ್ಯದ ಐದು ದಿನಗಳಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ. ಜುಲೈ 10 ಮತ್ತು 11 ರಂದು ಮಳೆಯಾಗುವ ಸಾಧ್ಯತೆ 0%. ಹವಾಮಾನ 29-30 ಡಿಗ್ರಿ ಇರುತ್ತದೆ. ಜುಲೈ 12 ರ ಬಗ್ಗೆ ಹೇಳುವುದಾದರೆ, ಈ ದಿನವೂ ಹವಾಮಾನ ಸ್ಪಷ್ಟವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪಂದ್ಯದ ನಾಲ್ಕನೇ ದಿನ ಅಂದರೆ ಜುಲೈ 13 ರಂದು ಹವಾಮಾನ ತುಂಬಾ ಬಿಸಿಯಾಗಿರುತ್ತದೆ. ಈ ದಿನದ ಗರಿಷ್ಠ ತಾಪಮಾನ 30 ಡಿಗ್ರಿ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇತರ ದಿನಗಳಂತೆ, ಪಂದ್ಯದ ಐದನೇ ಮತ್ತು ಕೊನೆಯ ದಿನದಂದು ಹವಾಮಾನವು ತುಂಬಾ ಬಿಸಿಯಾಗಿರಲಿದ್ದು, ಈ ದಿನದ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಅದೇ ಸಮಯದಲ್ಲಿ, ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ.
ಈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ಅವರಿಂದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತದೆ. ಏಕೆಂದರೆ ಕೆಲಸದ ಹೊರೆ ನಿರ್ವಾಹಣೆ ಕಾರಣ ನೀಡಿ ಎರಡನೇ ಟೆಸ್ಟ್ ಪಂದ್ಯದಿಂದ ಬುಮ್ರಾರನ್ನು ಟೀಮ್ ಇಂಡಿಯಾದ ಆಡುವ XI ನಿಂದ ಕೈಬಿಡಲಾಗಿತ್ತು. ಆದರೆ ಅದಕ್ಕೂ ಮುನ್ನ ನಡೆದ ಲೀಡ್ಸ್ ಟೆಸ್ಟ್‌ನ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 5 ವಿಕೆಟ್‌ಗಳನ್ನು ಕಬಳಿಸಿದ್ದರು. ಈಗ ಮೂರನೇ ಟೆಸ್ಟ್‌ನಲ್ಲೂ ಬುಮ್ರಾ ಅವರಿಂದ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಟೀಂ ಇಂಡಿಯಾದ ಬಗ್ಗೆ ಹೇಳುವುದಾದರೆ, ತಂಡದ ಬ್ಯಾಟ್ಸ್‌ಮನ್‌ಗಳು ಇಲ್ಲಿಯವರೆಗೆ ತಮ್ಮ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ. ಆದರೆ ಮೊದಲ ಟೆಸ್ಟ್‌ನಲ್ಲಿ ತಂಡದ ಬೌಲರ್‌ಗಳು ಮಾತ್ರ ಕೊಂಚ ಪರಿಣಾಮಕಾರಿಯಾಗುವಲ್ಲಿ ವಿಫಲರಾಗಿದ್ದರು. ಆದರೆ ಎರಡನೇ ಟೆಸ್ಟ್‌ನಲ್ಲಿ ಉತ್ತಮ ಪುನರಾಗಮನ ಮಾಡಿ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ