India vs England: ಫೀಲ್ಡಿಂಗ್ ವೇಳೆ ನಿಮ್ಮ ಸ್ಕೋರ್ ಎಷ್ಟೆಂದು ಕೇಳಿದ ಫ್ಯಾನ್ಸ್​ಗೆ ಮುಟ್ಟಿನೋಡುವಂತಹ ಉತ್ತರ ಕೊಟ್ಟ ಸಿರಾಜ್

Mohammed Siraj: ಕ್ರೀಡಾಂಗಣದಲ್ಲೂ ಭಾರತೀಯ ಆಟಗಾರರು ಅವಮಾನ ಎದುರಿಸಬೇಕಾಯಿತು. ಆದರೆ, ಮೊಹಮ್ಮದ್ ಸಿರಾಜ್ ತಮ್ಮನ್ನು ಕೆಣಕಲು ಬಂದ ಇಂಗ್ಲೆಂಡ್ ಅಭಿಮಾನಿಗಳಿಗೆ ಖಡಕ್ ಆಗಿಯೇ ತಿರುಗೇಟು ನೀಡಿದ್ದಾರೆ.

India vs England: ಫೀಲ್ಡಿಂಗ್ ವೇಳೆ ನಿಮ್ಮ ಸ್ಕೋರ್ ಎಷ್ಟೆಂದು ಕೇಳಿದ ಫ್ಯಾನ್ಸ್​ಗೆ ಮುಟ್ಟಿನೋಡುವಂತಹ ಉತ್ತರ ಕೊಟ್ಟ ಸಿರಾಜ್
Mohammed Siraj
Follow us
TV9 Web
| Updated By: Vinay Bhat

Updated on: Aug 26, 2021 | 8:29 AM

ಇಂಗ್ಲೆಂಡ್ (England) ವಿರುದ್ಧದ ಮೂರನೇ ಟೆಸ್ಟ್ ಪಂದ್ಯ ಬುಧವಾರ ಆರಂಭವಾಗಿದ್ದು ಭಾರತ (India) ಊಹಿಸಲಾಗದ ರೀತಿಯ ಕಳಪೆ ಆರಂಭ ಪಡೆದುಕೊಂಡಿದೆ. ಮೊದಲ ಇನ್ನಿಂಗ್ಸ್​ ಅನ್ನು ಸಂಪೂರ್ಣವಾಗಿ ಒಂದು ದಿನವೂ ಆಡದೆ ಕೇವಲ 78 ರನ್​ಗೆ ಕೊಹ್ಲಿ (Virat Kohli) ಪಡೆ ಸರ್ವಪತನ ಕಂಡಿದೆ. ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 120 ರನ್ ಬಾರಿಸಿದ್ದು 42 ರನ್​ ಗಳ ಮುನ್ನಡೆಯೊಂದಿಗೆ ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದೆ. ಈ ಮೂಲಕ ಮೊದಲ ದಿನವೇ ರೂಟ್ (Joe Root) ಪಡೆ ಪಂದ್ಯವನ್ನು ತನ್ನ ಹಿಡಿತಕ್ಕೆ ಪಡೆದುಕೊಂಡಿದೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಎರಡನೇ ಬಾರಿಗೆ ಟೀಮ್ ಇಂಡಿಯಾ ಅತಿ ಕಡಿಮೆ ಸ್ಕೋರ್​ಗೆ ಔಟ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದೆ. ಇತ್ತ ಕ್ರೀಡಾಂಗಣದಲ್ಲೂ ಭಾರತೀಯ ಆಟಗಾರರು ಅವಮಾನ ಎದುರಿಸಬೇಕಾಯಿತು. ಆದರೆ, ಮೊಹಮ್ಮದ್ ಸಿರಾಜ್ ತಮ್ಮನ್ನು ಕೆಣಕಲು ಬಂದ ಇಂಗ್ಲೆಂಡ್ ಅಭಿಮಾನಿಗಳಿಗೆ ಖಡಕ್ ಆಗಿಯೇ ತಿರುಗೇಟು ನೀಡಿದ್ದಾರೆ.

ಟೀಮ್ ಇಂಡಿಯಾ ಆಲೌಟ್ ಆಗಿ ಫೀಲ್ಡಿಂಗ್​ಗೆ ಇಳಿದಾಗ ಗ್ಯಾಲರಿಯಲ್ಲಿ ಕೂತಿದ್ದ ಇಂಗ್ಲೆಂಡ್ ಅಭಿಮಾನಿಗಳು ಮೊಹಮ್ಮದ್ ಸಿರಾಜ್ ಬಳಿ ನಿಮ್ಮ ಸ್ಕೋರ್ ಎಷ್ಟು ಕೇಳುತ್ತಾರೆ. ಇದಕ್ಕೆ ಸರಿಯಾಗಿ ತಿರುಗೇಟು ನೀಡಿದ ಸಿರಾಜ್ 1-0 ಎಂದು ಕೈಯಲ್ಲಿ ಸನ್ನೆ ಮಾಡುವ ಮೂಲಕ ಉತ್ತರಿಸುತ್ತಾರೆ. ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಕಾರಣ ಸಿರಾಜ್ ಈರೀತಿಯಾಗಿ ಉತ್ತರ ನೀಡಿದ್ದಾರೆ.

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 40.4 ಓವರ್​ನಲ್ಲಿ 78 ರನ್​ಗೆ ಸರ್ವಪತನ ಕಂಡಿತು. ಭಾರತ ಪರ ರೋಹಿತ್ ಶರ್ಮಾ 19 ರನ್ ಹಾಗೂ ಅಜಿಂಕ್ಯಾ ರಹಾನೆ 18 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್​ಮನ್​ಗಳ ಸ್ಕೋರ್ ಎರಡಂಕಿ ದಾಟಲಿಲ್ಲ.

ಅದರಲ್ಲೂ ಭರ್ಜರಿ ಫಾರ್ಮ್​ನಲ್ಲಿದ್ದ ಕೆ. ಎಲ್ ರಾಹುಲ್ ಶೂನ್ಯಕ್ಕೆ ಔಟ್ ಆದರೆ, ಚೇತೇಶ್ವರ್ ಪೂಜಾರ 1, ನಾಯಕ ವಿರಾಟ್ ಕೊಹ್ಲಿ 7, ರಿಷಭ್ ಪಂತ್ 2 ಹಾಗೂ ರವೀಂದ್ರ ಜಡೇಜಾ 4 ರನ್​ಗೆ ನಿರ್ಗಮಿಸಿದ್ದು ಅತ್ಯಂತ ಹೀನಾಯ ಬ್ಯಾಟಿಂಗ್ ಪ್ರದರ್ಶನವಾಗಿದೆ. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ ಹಾಗೂ ಕ್ರೈಗ್ ಓವರ್​ಒನ್ ತಲಾ  ವಿಕೆಟ್ ಕಿತ್ತರು.

ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್ ಅನ್ನು ಅಮೋಘವಾಗಿ ಆರಂಭಿಸಿದೆ. ದಿನದಾಟದ ಅಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 120 ರನ್ ಬಾರಿಸಿ, 42 ರನ್​ಗಳ ಮುನ್ನಡೆ ಸಾಧಿಸಿದೆ. ರಾರಿ ಬರ್ನ್ಸ್ 52 ಹಾಗೂ ಹಸೀಬ್ ಹಮೀದ್ 60 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

India vs England: ವಿರಾಟ್ ಕೊಹ್ಲಿಯನ್ನು ಔಟ್ ಮಾಡಿದ ತಕ್ಷಣ ಜೇಮ್ಸ್ ಆ್ಯಂಡರ್ಸನ್ ಮಾಡಿದ್ದೇನು ನೋಡಿ

George Garton: RCB ತಂಡಕ್ಕೆ ಎಂಟ್ರಿ ಕೊಟ್ಟಿರುವ ಜಾರ್ಜ್ ಗಾರ್ಟನ್ ಯಾರು..?

(India vs England Mohammed Siraj mocks England fans at Headingley When they asked the score)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್