AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಮೊಹಮ್ಮದ್ ಸಿರಾಜ್ ಎಸೆದ ಬೆಂಕಿಯ ಚೆಂಡಿಗೆ ಹಸೀಬ್ ಕ್ಲೀನ್ ಬೌಲ್ಡ್: ಇಲ್ಲಿದೆ ವಿಡಿಯೋ

India vs England: 14ನೇ ಓವರ್​ನ ತನ್ನ ಎರಡನೇ ಎಸೆತದಲ್ಲಿ ಸಿರಾಜ್ ಅವರು 11 ರನ್ ಗಳಿಸಿದ್ದ ಡಾಮಿನಿಕ್ ಸಿಬ್ಲಿ ಅವರನ್ನು ಪೆವಿಲಿಯನ್​ಗೆ ಅಟ್ಟಿದರು. ಇದಾದ ಮುಂದಿನ ಎಸೆತದಲ್ಲೇ ಹಸೀಬ್ ಹಮೀದ್​ರನ್ನು ಕ್ಲೀನ್ ಬೌಲ್ಡ್ ಮಾಡಿ ಪರಾಕ್ರಮ ಮೆರೆದರು.

Mohammed Siraj: ಮೊಹಮ್ಮದ್ ಸಿರಾಜ್ ಎಸೆದ ಬೆಂಕಿಯ ಚೆಂಡಿಗೆ ಹಸೀಬ್ ಕ್ಲೀನ್ ಬೌಲ್ಡ್: ಇಲ್ಲಿದೆ ವಿಡಿಯೋ
Mohammed Siraj
TV9 Web
| Edited By: |

Updated on: Aug 14, 2021 | 10:06 AM

Share

ಲಂಡನ್​ನ ಲಾರ್ಡ್ ಕ್ರೀಡಾಂಗಣದಲ್ಲಿ ಸಾಗುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs Englan) ನಡುವಣ ಎರಡನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟದತ್ತ ಸಾಗುತ್ತಿದೆ. ಭಾರತವನ್ನು 364 ರನ್​ಗೆ ಆಲೌಟ್ ಮಾಡಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿದೆ. ಇನ್ನೂ 245 ರನ್​ಗಳ ಹಿನ್ನಡೆಯಲ್ಲಿದೆ. ಪ್ರಮುಖ 3 ವಿಕೆಟ್ ಕಳೆದುಕೊಂಡಿರುವ ಆಂಗ್ಲರಿಗೆ ನಾಯಕ ಜೋ ರೂಟ್ ಆಸರೆಯಾಗಿ ನಿಂತಿದ್ದು ಇಂದಿನ ಮೂರನೇ ದಿನದಾಟ ರೋಚಕತೆ ಸೃಷ್ಟಿಸಿದೆ.

ಭಾರತವನ್ನು ಆಲೌಟ್ ಮಾಡಿ ಇನ್ನಿಂಗ್ಸ್​ ಶುರುಮಾಡಿದ ಇಂಗ್ಲೆಂಡ್​ಗೆ ಆರಂಭದಲ್ಲೇ ಶಾಕ್ ನೀಡಿದ್ದು ಮೊಹಮ್ಮದ್ ಸಿರಾಜ್. ವಿಕೆಟ್​ಗಾಗಿ ಕಾದು ಕುಳಿತಿದ್ದ ಭಾರತಕ್ಕೆ ಸಿರಾಜ್ ಉತ್ತಮ ಬ್ರೇಕ್ ತಂದುಕೊಟ್ಟರು. ಅದರಲ್ಲೂ ತಮ್ಮ ವೇಗದ ಬೌಲಿಂಗ್ ಮೂಲಕ ಬಂದ ಮೊದಲ ಎಸೆತದಲ್ಲೇ ಹಸೀಬ್ ಹಮೀದ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತು.

14ನೇ ಓವರ್​ನ ತನ್ನ ಎರಡನೇ ಎಸೆತದಲ್ಲಿ ಸಿರಾಜ್ ಅವರು 11 ರನ್ ಗಳಿಸಿದ್ದ ಡಾಮಿನಿಕ್ ಸಿಬ್ಲಿ ಅವರನ್ನು ಪೆವಿಲಿಯನ್​ಗೆ ಅಟ್ಟಿದರು. ಇದಾದ ಮುಂದಿನ ಎಸೆತದಲ್ಲೇ ಹಸೀಬ್ ಹಮೀದ್​ರನ್ನು ಕ್ಲೀನ್ ಬೌಲ್ಡ್ ಮಾಡಿ ಪರಾಕ್ರಮ ಮೆರೆದರು. ಆದರೆ, ಹ್ಯಾಟ್ರಿಕ್ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ.

ಸದ್ಯ ಇಂಗ್ಲೆಂಡ್ ಎರಡನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿದೆ. ನಾಯಕ ಜೋ ರೂಟ್ 48 ರನ್ ಹಾಗೂ ಜಾನಿ ಬೈರ್​ಸ್ಟೋ 6 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಇದಕ್ಕೂ ಮುನ್ನ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ (83) ಮತ್ತು ಕೆ. ಎಲ್ ರಾಹುಲ್ 126 ರನ್​ಗಳ ಜೊತೆಯಾಟದ ಕಾಣಿಕೆ ನೀಡಿದ್ದು ಬಿಟ್ಟರೆ ಮತ್ಯಾವ ಬ್ಯಾಟ್ಸ್​ಮನ್​ಗಳಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬರಲೇಯಿಲ್ಲ. ರಾಹುಲ್ 250 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ಮೂಲಕ 129 ರನ್​ಗೆ ಇನ್ನಿಂಗ್ಸ್ ಅಂತ್ಯಗೊಳಿಸಿದರೆ, ರಹಾನೆ ಆಟ 1 ರನ್​ಗೆ ಸೀಮಿತವಾಯಿತು. ರವೀಂದ್ರ ಜಡೇಜಾ 40 ರನ್ ಹಾಗೂ ರಿಷಭ್ ಪಂತ್ 37 ರನ್ ಗಳಿಸಿ ತಂಡಕ್ಕೆ ಕೆಲ ಸಮಯ ಆಸರೆಯಾದರು.

ಇಶಾಂತ್ ಶರ್ಮಾ 8, ಮೊಹಮ್ಮದ್ ಶಮಿ ಮತ್ತು ಜಸ್​ಪ್ರೀತ್ ಬುಮ್ರಾ ಸೊನ್ನೆ ಸುತ್ತುವ ಮೂಲಕ ಭಾರತ 364 ರನ್​ಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ 5 ವಿಕೆಟ್ ಕಿತ್ತು ಮಿಂಚಿದರು.

IND vs ENG: ಸ್ವಾತಂತ್ರ್ಯ ದಿನದಂದೇ ಸಿಗುತ್ತಾ ಗೆಲುವು? ಪ್ರಶ್ನೆಗೆ ರೋಹಿತ್ ಶರ್ಮಾ ಕೊಟ್ಟ ಉತ್ತರವೇನು ಗೊತ್ತಾ?

IPL 2021: ಐಪಿಎಲ್ ಫೀವರ್ ಶುರು: ದುಬೈ ತಲುಪಿದ ಧೋನಿ ಸೈನ್ಯ: ಇಲ್ಲಿದೆ ಫೋಟೋಗಳು

(Mohammed Siraj sends Haseeb Hameed back to the pavilion misses hat-trick Watch Video)

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು