IND vs ENG: ನಾಳೆಯಿಂದ ಏಕದಿನ ಸರಣಿ; ಮೊದಲ ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?
IND vs ENG 1st ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಫೆಬ್ರವರಿ 6, 2025 ರಂದು ನಾಗ್ಪುರದಲ್ಲಿ ನಡೆಯಲಿದೆ. ಪಂದ್ಯವು ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡವನ್ನು 1-4 ಅಂತರದಿಂದ ಸೋಲಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸಲು ಎದುರು ನೋಡುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಹಿರಿಯ ಆಟಗಾರರು ಏಕದಿನ ಸರಣಿಯಲ್ಲಿ ಆಡುತ್ತಿದ್ದು, ಕಳೆದುಹೋದ ಫಾರ್ಮ್ ಅನ್ನು ಕಂಡುಕೊಳ್ಳುವ ಉದ್ದೇಶದಿಂದ ಮೈದಾನಕ್ಕೆ ಇಳಿಯಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಬಹಳ ಮುಖ್ಯವಾಗಿದ್ದು, ಎರಡು ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಎರಡು ತಂಡಗಳ ಮೊದಲ ಪಂದ್ಯ ನಾಳೆ ಅಂದರೆ ಫೆಬ್ರವರಿ 6 ರಂದು ನಡೆಯಲ್ಲಿದ್ದು, ಈ ಪಂದ್ಯದ ಬಗ್ಗೆಗಿನ ಪೂರ್ಣ ಮಾಹಿತಿ ಇಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಗುರುವಾರ (ಫೆಬ್ರವರಿ 6, 2025) ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಏಕದಿನ ಪಂದ್ಯವನ್ನು ನೀವು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಇದಲ್ಲದೆ, ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿರುತ್ತದೆ.
ಇಂಗ್ಲೆಂಡ್‌ನ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲ್ ಸಾಲ್ಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಸಾಕಿಬ್ ಮಹಮೂದ್.
ಏಕದಿನ ಸರಣಿಗೆ ಉಭಯ ತಂಡಗಳು
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಶ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್. (ವಿಕೆಟ್ ಕೀಪರ್) ಮತ್ತು ರವೀಂದ್ರ ಜಡೇಜಾ.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್, ಬೆನ್ ಡಕೆಟ್, ಜೋ ರೂಟ್, ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಬ್ರೈಡನ್ ಕಾರ್ಸೆ, ಜೇಮೀ ಓವರ್ಟನ್, ಜೋಸ್ ಬಟ್ಲರ್, ಜೇಮೀ ಸ್ಮಿತ್, ಫಿಲಿಪ್ ಸಾಲ್ಟ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ