IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

India vs England ODI: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 14 ರಿಂದ ಆರಂಭವಾಗಲಿದೆ. ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿರುವ ಭಾರತಕ್ಕೆ ರೋಹಿತ್, ಕೊಹ್ಲಿ, ಬುಮ್ರಾ ಸಾಥ್ ನೀಡಲಿದ್ದಾರೆ. ಮೊದಲ ಪಂದ್ಯದ ದಿನಾಂಕ, ಸಮಯ, ಸ್ಥಳ, ಉಚಿತ ಲೈವ್ ಸ್ಟ್ರೀಮಿಂಗ್ ವಿವರಗಳು ಮತ್ತು ಎರಡೂ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

IND vs ENG: ಭಾರತ- ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?
Ind Vs Eng

Updated on: Jul 13, 2026 | 8:22 PM

ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-0 ಅಂತರದಿಂದ ಹೀನಾಯವಾಗಿ ಸೋತಿದ್ದ ಟೀಂ ಇಂಡಿಯಾ (India vs England ODI) ಇದೀಗ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ, ಟಿ20 ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಸರಣಿಯ ಇನ್ನೊಂದು ವಿಶೇಷವೆಂದರೆ ಬಹಳ ದಿನಗಳ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಒಟ್ಟಿಗೆ ಆಡುತ್ತಿದ್ದಾರೆ. ಹೀಗಾಗಿ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಸರಣಿಯ ಮೊದಲ ಪಂದ್ಯ ಯಾವಾಗ? ಎಲ್ಲಿ? ಎಷ್ಟು ಗಂಟೆಗೆ ಆರಂಭವಾಗುತ್ತದೆ ಮತ್ತು ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ ಎಂಬುದನ್ನು ನಾವು ನಿಮಗೆ ತಿಳಿಸಲಿದ್ದೇವೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಜುಲೈ 14 ರಂದು ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಏಕದಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಡಿಜಿಟಲ್ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವ ಸೌಲಭ್ಯವನ್ನು ನೀಡುತ್ತದೆ.

ಉಭಯ ತಂಡಗಳು

ಏಕದಿನ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Mon, 13 July 26

Follow Us