AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಏಕದಿನ ಸರಣಿ; ಇಲ್ಲಿದೆ ವೇಳಾಪಟ್ಟಿ

India vs England ODI Series: ಭಾರತ-ಇಂಗ್ಲೆಂಡ್ ನಡುವಿನ ರೋಮಾಂಚಕಾರಿ ಟಿ20 ಸರಣಿ ಬಳಿಕ, ಬಹುನಿರೀಕ್ಷಿತ ಏಕದಿನ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು, ಭಾರತದ ಬಲ ಹೆಚ್ಚಿದೆ. ಜುಲೈ 14, 16, 19 ರಂದು ನಡೆಯಲಿರುವ ಈ ಸರಣಿಯ ಸಂಪೂರ್ಣ ವೇಳಾಪಟ್ಟಿ, ಸ್ಥಳಗಳು ಮತ್ತು ಎರಡೂ ತಂಡಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಭಾರತ ವೈಟ್ ವಾಶ್ ತಪ್ಪಿಸಲು ಹೋರಾಡುತ್ತಿದೆ.

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಏಕದಿನ ಸರಣಿ; ಇಲ್ಲಿದೆ ವೇಳಾಪಟ್ಟಿ
Ind Vs Eng
ಪೃಥ್ವಿಶಂಕರ
|

Updated on: Jul 11, 2026 | 5:43 PM

Share

ಪ್ರಸ್ತುತ ಭಾರತ ಹಾಗೂ ಇಂಗ್ಲೆಂಡ್‌ (India vs England) ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಇಂದು ಸರಣಿಯ ಕೊನೆಯ ಪಂದ್ಯ ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಈಗಾಗಲೇ ಸರಣಿ ಸೋತಿರುವುದರಿಂದ ವೈಟ್ ವಾಶ್​ನಿಂದ ಪಾರಾಗಲು ಈ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಈ ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯೂ ನಡೆಯಲಿದೆ. ಈ ಸರಣಿಗಾಗಿ ತಂಡಗಳನ್ನು ಪ್ರಕಟಿಸಲಾಗಿದೆ.

ಕೊಹ್ಲಿ, ಬುಮ್ರಾ ವಾಪಸ್ಸಾತಿ

ಏಕದಿನ ಸರಣಿಗಾಗಿ ಟೀಂ ಇಂಡಿಯಾ ಕೂಡ ಇಂಗ್ಲೆಂಡ್‌ ತಲುಪಿದೆ. ತಂಡದ ಇಬ್ಬರು ಮಾಜಿ ನಾಯಕರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂಡ ಈ ಏಕದಿನ ಸರಣಿಗೆ ತಯಾರಿ ಶುರು ಮಾಡಿದ್ದಾರೆ. ವಾಸ್ತವವಾಗಿ ಇಂಜುರಿ ಕಾರಣದಿಂದ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ತಪ್ಪಿಸಿಕೊಂಡಿದ್ದರು. ಆದರೀಗ ಅವರು ಸಂಪೂರ್ಣ ಫಿಟ್ ಆಗಿದ್ದು ಆಂಗ್ಲರ ವಿರುದ್ಧ ಅಬ್ಬರಿಸಲು ಸಜ್ಜಾಗಿದ್ದಾರೆ. ಕೊಹ್ಲಿ ಜೊತೆಗೆ ಬುಮ್ರಾ ಕೂಡ ಬಹಳ ದಿನಗಳ ಬಳಿಕ ಏಕದಿನ ಕ್ರಿಕೆಟ್‌ಗೆ ಮರಳುತ್ತಿದ್ದಾರೆ.

ಏಕದಿನ ಸರಣಿ ವೇಳಾಪಟ್ಟಿ

ಮೊದಲ ಏಕದಿನ ಪಂದ್ಯ: ಜುಲೈ 14, 2026 (ಮಂಗಳವಾರ) ಮಧ್ಯಾಹ್ನ 3:30 ಕ್ಕೆ, ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್.

ಎರಡನೇ ಏಕದಿನ ಪಂದ್ಯ: ಜುಲೈ 16, 2026 (ಗುರುವಾರ) ಸಂಜೆ 5:30 ಕ್ಕೆ, ಸೋಫಿಯಾ ಗಾರ್ಡನ್ಸ್, ಕಾರ್ಡಿಫ್.

ಮೂರನೇ ಏಕದಿನ ಪಂದ್ಯ: ಜುಲೈ 19, 2026 (ಭಾನುವಾರ) ಮಧ್ಯಾಹ್ನ 3:30 ಕ್ಕೆ, ಲಾರ್ಡ್ಸ್ ಕ್ರಿಕೆಟ್ ಮೈದಾನ, ಲಂಡನ್.

IND vs ENG: ಬರೋಬ್ಬರಿ 3 ವರ್ಷಗಳ ಬಳಿಕ ಏಕದಿನ ಕ್ರಿಕೆಟ್​ಗೆ ಮರಳಿದ ಯಾರ್ಕರ್ ಕಿಂಗ್

ಉಭಯ ತಂಡಗಳು

ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

ಇಂಗ್ಲೆಂಡ್‌ ತಂಡ: ಹ್ಯಾರಿ ಬ್ರೂಕ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಜೇಮ್ಸ್ ಕೋಲ್ಸ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಸಾಕಿಬ್ ಮಹಮೂದ್, ಆದಿಲ್ ರಶೀದ್, ಜೋ ರೂಟ್, ಜೋಶ್ ಟಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ