AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸ್ಫೋಟಕ ಅರ್ಧಶತಕ; ಟೀಕಾಕಾರರ ಬಾಯಿ ಮುಚ್ಚಿಸಿದ ಶ್ರೇಯಸ್ ಅಯ್ಯರ್

Shreyas Iyer's Match-Winning Knock: ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ಶ್ರೇಯಸ್ ಅಯ್ಯರ್ ಅವರ ಪಾತ್ರ ಪ್ರಮುಖವಾಗಿತ್ತು. 36 ಎಸೆತಗಳಲ್ಲಿ 59 ರನ್ ಗಳಿಸಿದ ಅವರು, ಸಂಕಷ್ಟದ ಸಮಯದಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅವರ ಭರ್ಜರಿ ಅರ್ಧಶತಕವು ಟೀಕಾಕಾರರ ಬಾಯಿ ಮುಚ್ಚಿಸಿದ್ದು ಅವರ ಬಲವಾದ ಪುನರಾಗಮನವನ್ನು ಸೂಚಿಸುತ್ತದೆ.

IND vs ENG: ಸ್ಫೋಟಕ ಅರ್ಧಶತಕ; ಟೀಕಾಕಾರರ ಬಾಯಿ ಮುಚ್ಚಿಸಿದ ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Feb 07, 2025 | 6:58 AM

Share

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 4 ವಿಕೆಟ್​ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ನಾಗ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ ರೋಹಿತ್ ಪಡೆ ಗೆಲುವು ಸಾಧಿಸುವಲ್ಲಿ ಪ್ರಮುಖವಾಗಿ ಐದು ಆಟಗಾರರ ಪಾತ್ರ ಅಪಾರವಾಗಿತ್ತು.ಅದರಲ್ಲೂ ಬಹಳ ದಿನಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಸಂಕಷ್ಟದ ಸಮಯದಲ್ಲಿ ಸಮಯೋಜಿತ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಮತ್ತೆ ಗೆಲುವಿನ ಹಾದಿಗೆ ಮರಳಿಸಿದರು. ಸತತ ವಿಕೆಟ್ ಪತನದ ನಡುವೆಯೂ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಅಯ್ಯರ್ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅಂತಿಮವಾಗಿ 36 ಎಸೆತಗಳಲ್ಲಿ 59 ರನ್ ಕಲೆಹಾಕಿದ ಅಯ್ಯರ್ ಅವರ ಇನ್ನಿಂಗ್ಸ್​ನಲ್ಲಿ 9 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್​ಗಳು ಸೇರಿದ್ದವು. ಈ ಮೂಲಕ ತನ್ನನ್ನು ಟೀಕಿಸುತ್ತಿದ್ದವರಿಗೆ ಒಂದೇ ಪಂದ್ಯದಲ್ಲಿ ಶ್ರೇಯಸ್ ತಕ್ಕ ಉತ್ತರ ನೀಡಿದ್ದಾರೆ.

ವಾಸ್ತವವಾಗಿ ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್‌ಗೆ ಏರಿಳಿತಗಳಿಂದ ತುಂಬಿತ್ತು. ಅವರ ನಾಯಕತ್ವದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತಾದರೂ ಬಿಸಿಸಿಐ ಅವರನ್ನು ಟೆಸ್ಟ್ ತಂಡದಿಂದ ಕೈಬಿಟ್ಟಿತು. ಇದಲ್ಲದೆ ಅವರನ್ನು ಕೇಂದ್ರ ಒಪ್ಪಂದದಿಂದಲೂ ಕೈಬಿಡಲಾಯಿತು. ಆದರೆ ಈಗ ಶ್ರೇಯಸ್ ಅಯ್ಯರ್ ಬಲವಾದ ಪುನರಾಗಮನ ಮಾಡಿದ್ದಾರೆ. ನಾಗ್ಪುರದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ, ಅಯ್ಯರ್ ಬಲವಾದ ಅರ್ಧಶತಕ ಗಳಿಸುವ ಮೂಲಕ ತಮ್ಮ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

ಅದ್ಭುತ ಇನ್ನಿಂಗ್ಸ್ ಕಟ್ಟಿದ ಶ್ರೇಯಸ್ ಅಯ್ಯರ್

248 ರನ್​ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಬೇಗನೆ ಔಟಾದರು. ಹೀಗಾಗಿ ಶ್ರೇಯಸ್ ಅಯ್ಯರ್ ಬೇಗನೇ ಕ್ರೀಸ್‌ಗೆ ಬರಬೇಕಾಯಿತು. ಆ ವೇಳೆಗೆ ಟೀಂ ಇಂಡಿಯಾ 19 ರನ್‌ಗಳಿಗೆ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಇದಾದ ನಂತರ ಕ್ರೀಸ್​ಗಿಳಿದ ಅಯ್ಯರ್, ಮೊದಲೆರಡು ವಿಕೆಟ್​ಗಳನ್ನು ಉರುಳಿಸಿದ್ದ ಆರ್ಚರ್‌ ಹಾಗೂ ಸಾಕಿಬ್ ಮಹಮೂದ್‌ರನ್ನು ದಂಡಿಸಲಾರಂಭಿಸಿದರು. ವಾಸ್ತವವಾಗಿ ಶ್ರೇಯಸ್ ಅಯ್ಯರ್ ಶಾರ್ಟ್ ಬಾಲ್‌ ಎದುರಿಸುವುದರಲ್ಲಿ ಕೊಂಚ ತೊಂದರೆ ಅನುಭವಿಸುತ್ತಾರೆ. ಈ ಬಾಲ್ ಅನ್ನು ಆಡುವ ಯತ್ನದಲ್ಲೇ ಅವರು ಅಧಿಕ ಬಾರಿ ಔಟಾಗಿದ್ದಾರೆ. ಇದೇ ಕಾರಣಕ್ಕೆ ಆರ್ಚರ್ ಬಂದ ತಕ್ಷಣ ಅವರಿಗೆ ಬೌನ್ಸರ್‌ಗಳನ್ನು ಎಸೆಯಲು ಪ್ರಾರಂಭಿಸಿದರು. ಆದರೆ ಅಯ್ಯರ್ ಆರ್ಚರ್‌ ಅವರ ಸತತ ಎರಡು ಬೌನ್ಸರ್‌ಗಳಿಗೆ ಎರಡು ಅದ್ಭುತ ಸಿಕ್ಸರ್‌ಗಳನ್ನು ಬಾರಿಸಿದರು.

ಈ ಎರಡು ಸಿಕ್ಸರ್‌ಗಳಲ್ಲದೆ, ಶ್ರೇಯಸ್ ಅಯ್ಯರ್ ತಮ್ಮ ಇನ್ನಿಂಗ್ಸ್‌ನಲ್ಲಿ 9 ಬೌಂಡರಿಗಳನ್ನು ಸಹ ಬಾರಿಸಿದರು. ಇದರ ಜೊತೆಗೆ ಅವರು ರಿವರ್ಸ್ ಸ್ವೀಪ್ ಹೊಡೆತಗಳನ್ನು ಆಡಿದರು. ಅದೇ ನಿರ್ಭೀತ ಶೈಲಿಯಲ್ಲಿ ತಮ್ಮ ವೃತ್ತಿಜೀವನದ 19 ನೇ ಅರ್ಧಶತಕವನ್ನು ಪೂರ್ಣಗೊಳಿಸಿದರು. ಆದರೆ ಜ್ಯಾಕ್ ಬೆಥೆಲ್ ಅವರ ಸಾಮಾನ್ಯ ಎಸೆತದಲ್ಲಿ ಕೆಟ್ಟ ಹೊಡೆತ ಆಡಿ ಔಟಾದರೂ, ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ 160 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸುವ ಮೂಲಕ ತಮ್ಮ ಪ್ರಾಮುಖ್ಯತೆಯನ್ನು ಸಾಬೀತುಪಡಿಸಿದರು.

ಏಕದಿನ ಮಾದರಿಯಲ್ಲಿ ಅಯ್ಯರ್ ಪ್ರದರ್ಶನ

ಕಳೆದ ಕೆಲವು ವರ್ಷಗಳಲ್ಲಿ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಪರ 4 ನೇ ಕ್ರಮಾಂಕದಲ್ಲಿ ಸ್ಥಿರವಾಗಿ ರನ್ ಗಳಿಸಿದ್ದಾರೆ ಮಾತ್ರವಲ್ಲದೆ, ವೇಗವಾಗಿ ಬ್ಯಾಟಿಂಗ್ ಮಾಡುವ ಮೂಲಕ ಬೌಲರ್‌ಗಳಲ್ಲಿ ಒತ್ತಡವುನ್ನುಂಟು ಮಾಡುತ್ತಿದ್ದಾರೆ ಎಂಬುದನ್ನು ಅಂಕಿಅಂಶಗಳೇ ಸಾಭೀತುಪಡಿಸಿವೆ. ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಅಯ್ಯರ್, 34 ಇನ್ನಿಂಗ್ಸ್‌ಗಳಲ್ಲಿ 52 ರ ಅತ್ಯುತ್ತಮ ಸರಾಸರಿಯಲ್ಲಿ 1456 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರ ಸ್ಟ್ರೈಕ್ ರೇಟ್ 103 ಆಗಿದ್ದು, ಇದರಲ್ಲಿ 4 ಶತಕಗಳು ಮತ್ತು 9 ಅರ್ಧಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ