AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬಿತ್ತು ಕಿಂಗ್ ಕೊಹ್ಲಿ ಫಿಟ್ನೆಸ್ ಫಲಿತಾಂಶ; ಇಂಗ್ಲೆಂಡ್‌ ವಿರುದ್ಧ ಆಡ್ತಾರಾ ವಿರಾಟ್?

Virat Kohli Fit for England ODI Series: ವಿರಾಟ್ ಕೊಹ್ಲಿ ಇಂಗ್ಲೆಂಡ್ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ಪಾಸಾಗಿದ್ದಾರೆ. ಮಂಡಿರಜ್ಜು ಗಾಯದಿಂದ ಚೇತರಿಸಿಕೊಂಡಿರುವ ಕೊಹ್ಲಿ, ಶುಭ್​ಮನ್ ಗಿಲ್ ನಾಯಕತ್ವದ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ 15 ವರ್ಷಗಳ ಶತಕದ ಬರ ನೀಗಿಸಿ, ತಮ್ಮ ಅದ್ಭುತ ಫಾರ್ಮ್ ಮುಂದುವರಿಸಲು ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಅವರು ತಂಡಕ್ಕೆ ಬಹುಮುಖ್ಯ ಆಸರೆಯಾಗಲಿದ್ದಾರೆ.

ಹೊರಬಿತ್ತು ಕಿಂಗ್ ಕೊಹ್ಲಿ ಫಿಟ್ನೆಸ್ ಫಲಿತಾಂಶ; ಇಂಗ್ಲೆಂಡ್‌ ವಿರುದ್ಧ ಆಡ್ತಾರಾ ವಿರಾಟ್?
Virat Kohli
ಪೃಥ್ವಿಶಂಕರ
|

Updated on: Jun 22, 2026 | 10:45 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಏಕದಿನ ಸರಣಿಗಾಗಿ ಬಿಸಿಸಿಐ ಇತ್ತೀಚೆಗಷ್ಟೇ ಭಾರತ ಏಕದಿನ ತಂಡವನ್ನು ಪ್ರಕಟಿಸಿತ್ತು. ಶುಭ್​ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ಬಲಿಷ್ಠ ತಂಡವನ್ನು ಇಂಗ್ಲೆಂಡ್‌ ಪ್ರವಾಸಕ್ಕೆ ಬಿಸಿಸಿಐ ಆಯ್ಕೆ ಮಾಡಿತ್ತು. ಈ 15 ಸದಸ್ಯರ ಪಟ್ಟಿಯಲ್ಲಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಕೂಡ ಸೇರಿದ್ದರು. ಆದರೆ ಕೊಹ್ಲಿ ಸರಣಿಯಲ್ಲಿ ಆಡುವುದು ಅವರ ಫಿಟ್ನೆಸ್ ಫಲಿತಾಂಶವನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ತಿಳಿಸಿತ್ತು. ಅದರಂತೆ ವಿರಾಟ್ ಕೊಹ್ಲಿ ಜೂನ್ 22 ರಂದು ಬೆಂಗಳೂರಿನಲ್ಲಿರುವ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ಫಿಟ್ನೆಸ್ ಫಲಿತಾಂಶವೂ ಹೊರಬಿದ್ದಿದ್ದು, ಕೊಹ್ಲಿ ಸಂಪೂರ್ಣವಾಗಿ ಫಿಟ್ ಆಗಿದ್ದು, ಏಕದಿನ ಸರಣಿಯಲ್ಲಿ ಆಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

2026 ರ ಐಪಿಎಲ್ ಫೈನಲ್ ಪಂದ್ಯದ ವೇಳೆ ಕೊಹ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಆಡಿರಲಿಲ್ಲ. ಅದಾದ ಬಳಿಕ ಇಂಗ್ಲೆಂಡ್‌ ಪ್ರವಾಸಕ್ಕೆ ಕೊಹ್ಲಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ ಗಾಯದಿಂದ ಬಳಲುತ್ತಿರುವ ವಿರಾಟ್ ಈ ಸರಣಿಯಿಂದಲೂ ಹೊರಗುಳಿಯಬಹುದೆಂದು ಅಭಿಮಾನಿಗಳು ಚಿಂತಿತರಾಗಿದ್ದರು. ಆದರೆ ಕೊಹ್ಲಿ ಸಂಪೂರ್ಣವಾಗಿ ಫಿಟ್ ಆಗಿದ್ದು, ಆಂಗ್ಲರ ನೆಲದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

15 ವರ್ಷಗಳ ನಂತರ ಬರುತ್ತಾ ಶತಕ?

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 54 ಶತಕಗಳನ್ನು ಗಳಿಸಿದ್ದಾರೆಯಾದರೂ ಇಂಗ್ಲೆಂಡ್‌ ನೆಲದಲ್ಲಿ ಕೇವಲ ಒಂದು ಏಕದಿನ ಶತಕವನ್ನಷ್ಟೇ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಕೊನೆಯದಾಗಿ ಇಂಗ್ಲೆಂಡ್‌ನಲ್ಲಿ 15 ವರ್ಷಗಳ ಹಿಂದೆ ಅಂದರೆ, 2011 ರಲ್ಲಿ ಏಕದಿನ ಶತಕ ಬಾರಿಸಿದ್ದರು. ಕಾರ್ಡಿಫ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ವಿರಾಟ್ ಕೊಹ್ಲಿ 93 ಎಸೆತಗಳಲ್ಲಿ 107 ರನ್ ಬಾರಿಸಿದರಾದರೂ ಟೀಂ ಇಂಡಿಯಾ ಆ ಪಂದ್ಯವನ್ನು ಸೋತಿತು. ಡಕ್ವರ್ತ್-ಲೂಯಿಸ್ ವಿಧಾನದ ಪ್ರಕಾರ, ಇಂಗ್ಲೆಂಡ್ ಆ ಪಂದ್ಯವನ್ನು ಗೆದ್ದಿತು. ಆದರೆ ಈಗ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಏಕದಿನ ಶತಕದ ಬರವನ್ನು ನೀಗಿಸಿಕೊಳ್ಳುವುದರ ಜೊತೆಗೆ ತಂಡವನ್ನು ಸರಣಿ ಗೆದ್ದುಕೊಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಹೇಗಿದೆ?

ಇಂಗ್ಲೆಂಡ್‌ನಲ್ಲಿ ವಿರಾಟ್ ಕೊಹ್ಲಿ ದಾಖಲೆ ಅದ್ಭುತವಾಗಿದೆ. ಇಂಗ್ಲೆಂಡ್‌ನಲ್ಲಿ ಒಟ್ಟು 33 ಏಕದಿನ ಪಂದ್ಯಗಳನ್ನು ಆಡಿದ್ದಾರುವ ಕೊಹ್ಲಿ, 51.88 ಸರಾಸರಿಯಲ್ಲಿ 1349 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 12 ಅರ್ಧಶತಕಗಳು ಸೇರಿವೆ. ಇದಲ್ಲದೆ ವಿರಾಟ್ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಎರಡು ಬಾರಿ ಶೂನ್ಯಕ್ಕೂ ಔಟಾಗಿದ್ದಾರೆ.

ಅದ್ಭುತ ಫಾರ್ಮ್​ನಲ್ಲಿರುವ ಕೊಹ್ಲಿ

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಪ್ರಸ್ತತ ಅದ್ಭುತ ಫಾರ್ಮ್​ನಲ್ಲಿದ್ದಾರೆ. ಕಳೆದ ಏಳು ಏಕದಿನ ಪಂದ್ಯಗಳಲ್ಲಿ ಅವರು ಮೂರು ಶತಕ ಮತ್ತು ಮೂರು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ವರ್ಷ ಅವರು 80 ರ ಸರಾಸರಿಯಲ್ಲಿ 240 ರನ್ ಗಳಿಸಿದ್ದಾರೆ. ಕಳೆದ ವರ್ಷ ವಿರಾಟ್ 65.1 ರ ಸರಾಸರಿಯಲ್ಲಿ 651 ರನ್ ಕಲೆಹಾಕಿದ್ದರು.

IND vs ENG: ಕೊಹ್ಲಿ ಇನ್, ಹಾರ್ದಿಕ್ ಔಟ್; ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ ಏಕದಿನ ತಂಡ ಪ್ರಕಟ

ಭಾರತದ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಗುರ್ನೂರ್ ಬ್ರಾರ್.

ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ ಜುಲೈ 14 ರಂದು ಮಧ್ಯಾಹ್ನ 3:30 ಕ್ಕೆ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯಲಿದೆ.
  • ಎರಡನೇ ಏಕದಿನ ಪಂದ್ಯ ಜುಲೈ 16 ರಂದು ಸಂಜೆ 5:30 ಕ್ಕೆ ಕಾರ್ಡಿಫ್‌ನಲ್ಲಿ ನಡೆಯಲಿದೆ.
  • ಮೂರನೇ ಏಕದಿನ ಪಂದ್ಯ ಜುಲೈ 19 ರಂದು ಮಧ್ಯಾಹ್ನ 3:30 ಕ್ಕೆ ಲಾರ್ಡ್ಸ್‌ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ