AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಒಂದಲ್ಲ ಎರಡಲ್ಲ ಬರೋಬ್ಬರಿ 6 ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾರ ಶತಕದ ನೆರವಿನಿಂದ ಉತ್ತಮ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 270 ರನ್ ಬಾರಿಸಿದ್ದು, ಇಂಗ್ಲೆಂಡ್​ಗಿಂತ 171 ರನ್​ಗಳ ಮುಂದಿದೆ.

Rohit Sharma: ಒಂದಲ್ಲ ಎರಡಲ್ಲ ಬರೋಬ್ಬರಿ 6 ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ
Rohit Sharma
TV9 Web
| Edited By: |

Updated on: Sep 05, 2021 | 9:09 AM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ (Oval) ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ (England) ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ (India) ಭರ್ಜರಿ ಕಮ್​ಬ್ಯಾಕ್ ಮಾಡಿದೆ. ವಿದೇಶಿ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿ ಹಿಟ್​ಮ್ಯಾನ್ ರೋಹಿತ್ ಶರ್ಮಾ (Rohit Sharma) ಅಬ್ಬರಿಸಿದರೆ, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ (Cheteshwar Pujara) ತಮ್ಮ ಹೆಸರಿಗೆ ತಕ್ಕಂತೆ ಬ್ಯಾಟ್ ಬೀಸಿದರು. ಪರಿಣಾಮ ಟೀಮ್ ಇಂಡಿಯಾ (Team India) 171 ರನ್​ಗಳ ಮುನ್ನಡೆ ಸಾಧಿಸಿದ್ದು, ದೊಡ್ಡ ಮೊತ್ತದತ್ತ ಕಣ್ಣಿಟ್ಟಿದೆ. ಟೆಸ್ಟ್ ಕ್ರಿಕೆಟ್​ನಲ್ಲಿ 8ನೇ ಶತಕ ಪೂರೈಸಿದ ರೋಹಿತ್ ಶರ್ಮಾ ತಂಡಕ್ಕೆ ಆಸರೆಯಾಗಿ ನಿಂತರು. ಪೂಜಾರ ಜೊತೆಗೂಡಿ 153 ರನ್​ಗಳ ಕಾಣಿಕೆ ನೀಡಿದರು. ಅಲ್ಲದೆ ವಿಶೇಷ ದಾಖಲೆಯನ್ನೂ ಬರೆದಿದ್ದಾರೆ.

ತಮ್ಮ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ, ಮನಮೋಹಕ ಹೊಡೆತಗಳ ಮೂಲಕ ರೋಹಿತ್‌ ಶರ್ಮಾ ನೆರದಿದ್ದ ಅಪಾರ ಕ್ರಿಕೆಟ್‌ ಪ್ರೇಮಿಗಳಿಗೆ ಭರ್ಜರಿ ರಸದೌತಣ ಉಣಬಡಿಸಿದರು. 256 ಎಸೆತಗಳನ್ನು ಎದುರಿಸಿದ್ದ ರೋಹಿತ್‌, ಒಂದು ಭರ್ಜರಿ ಸಿಕ್ಸರ್‌ ಹಾಗೂ 14 ಬೌಂಡರಿಗಳ ನೆರವಿನಿಂದ 127 ರನ್‌ ಗಳಿಸಿದರು. ಹೊಸ ಚೆಂಡಿನಲ್ಲಿ ಬೌಲ್ ಮಾಡಿದ ಓಲ್ಲೀ ರಾಬಿನ್ಸನ್‌ ಎಸೆತವನ್ನು ಅರಿಯುವಲ್ಲಿ ವಿಫಲರಾದ ರೋಹಿತ್‌, ಪುಲ್‌ ಹೊಡೆಯಲು ಪ್ರಯತ್ನಿಸಿ ಕ್ಯಾಚ್ ನೀಡಿ ನಿರ್ಗಮಿಸಿದರು.

ವಿದೇಶಿ ನೆಲದಲ್ಲಿ ಚೊಚ್ಚಲ ಶತಕದ ಜೊತೆಗೆ ರೋಹಿತ್‌ ಶರ್ಮಾ ಪ್ರಸಕ್ತ ವರ್ಷದಲ್ಲಿ 1000 ರನ್‌ ಹಾಗೂ ಟೆಸ್ಟ್ ವೃತ್ತಿ ಜೀವನದಲ್ಲಿ 3000 ರನ್ ಪೂರ್ಣಗೊಳಿಸಿದರು. ಅದರಲ್ಲೂ ಸಿಕ್ಸರ್ ಮೂಲಕ ಮೂರಂಕಿ ವೈಯಕ್ತಿಕ ಮೊತ್ತ ಕಲೆಹಾಕಿದ್ದು ರೋಹಿತ್‌ ಇನಿಂಗ್ಸ್‌ಗೆ ಇನ್ನಷ್ಟು ವಿಶೇಷತೆ ತಂದುಕೊಟ್ಟಿತು. ಈ ಮೂಲಕ ಒಟ್ಟು ಆರು ದಾಖಲೆಯನ್ನು ಹಿಟ್​ಮ್ಯಾನ್ ತನ್ನ ತೆಕ್ಕೆಗೆ ಸೇರಿಸಿಕೊಂಡರು.

  • 2021ರಲ್ಲಿ ರೋಹಿತ್ ಶರ್ಮಾ 1,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ಸಾಧನೆ ಮಾಡಿದರು.
  • ಈ ಇನ್ನಿಂಗ್ಸ್ ಮೂಲಕ ರೋಹಿತ್ ಶರ್ಮಾ ಇಂಗ್ಲೆಂಡ್ ನೆಲದಲ್ಲಿ 2,000 ಅಂತರರಾಷ್ಟ್ರೀಯ ರನ್‌ ಗಳಿಸಿದರು.
  • ರೋಹಿತ್ ಶರ್ಮಾ 3,000 ಟೆಸ್ಟ್ ರನ್‌ಗಳನ್ನು ಈ ಇನ್ನಿಂಗ್ಸ್ ಮೂಲಕ ಪೂರೈಸಿಕೊಂಡಿದ್ದಾರೆ.
  • ಈ ಇನ್ನಿಂಗ್ಸ್ ಮೂಲಕ ರೋಹಿತ್ ಶರ್ಮಾ ಒಟ್ಟಾರೆಯಾಗಿ 15,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ್ದಾರೆ.
  • ರೋಹಿತ್ ಶರ್ಮಾ ತನ್ನ ಟೆಸ್ಟ್ ಕ್ರಿಕೆಟ್ ಜೀವನದಲ್ಲಿಯೇ ಇದೇ ಮೊದಲ ಬಾರಿಗೆ ಓವರ್‌ಸೀಸ್ ಶತಕವನ್ನು ಬಾರಿಸಿರುವುದು.
  • ಈ ಇನ್ನಿಂಗ್ಸ್ ಮೂಲಕ ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ 11,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ವಿಶೇಷ ಸಾಧನೆ ಮಾಡಿದ್ದಾರೆ.

ಸದ್ಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಕೊಹ್ಲಿ ಪಡೆ 3 ವಿಕೆಟ್ ಕಳೆದುಕೊಂಡು 270 ರನ್ ಬಾರಿಸಿದ್ದು, ಇಂಗ್ಲೆಂಡ್​ಗಿಂತ 171 ರನ್​ಗಳ ಮುಂದಿದೆ. ಕೆ. ಎಲ್ ರಾಹುಲ್ 46 ರನ್ ಗಳಿಸಿ ಔಟ್ ಆದರೆ, ರೋಹಿತ್ ಶರ್ಮಾ 127 ಹಾಗೂ ಚೇತೇಶ್ವರ್ ಪೂಜಾರ 61 ರನ್ ಬಾರಿಸಿ ಆಸರೆಯಾದರು. ನಾಯಕ ವಿರಾಟ್ ಕೊಹ್ಲಿ 22 ರನ್ ಗಳಿಸಿ ಹಾಗೂ ರವೀಂದ್ರ ಜಡೇಜಾ 9 ರನ್ ಗಳಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ: ಬ್ಯಾಡ್ಮಿಂಟನ್​ನಲ್ಲಿ ಐಎಎಸ್ ಅಧಿಕಾರಿ ಸುಹಾಸ್​ಗೆ ಪದಕ

(India vs England Rohit Sharmas century creates a new 6 records in ind vs eng 4th test)

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ