India vs England: ಭಾರತ-ಇಂಗ್ಲೆಂಡ್ ಸರಣಿಯ ವೇಳಾಪಟ್ಟಿ ಪ್ರಕಟ

India vs England Schedule 2022: ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ.

India vs England: ಭಾರತ-ಇಂಗ್ಲೆಂಡ್ ಸರಣಿಯ ವೇಳಾಪಟ್ಟಿ ಪ್ರಕಟ
india vs england 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 20, 2022 | 10:42 AM

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಮುಗಿದಿದ್ದು, ಇದರ ಬೆನ್ನಲ್ಲೇ ಟೀಮ್ ಇಂಡಿಯಾ (Team India) ಆಟಗಾರರು ಐರ್ಲೆಂಡ್​ ಹಾಗೂ ಇಂಗ್ಲೆಂಡ್​ಗೆ ಪ್ರಯಾಣ ಬೆಳೆಸಲಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಇದೇ ತಿಂಗಳು ಐರ್ಲೆಂಡ್ ವಿರುದ್ದ ಮತ್ತೊಂದು ಟಿ20 ಸರಣಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯವು ಜೂನ್ 26 ರಂದು ನಡೆದರೆ, 2ನೇ ಪಂದ್ಯ ಜೂನ್ 28 ರಂದು ನಡೆಯಲಿದೆ. ಇದಾದ ಬಳಿಕ ಇಂಗ್ಲೆಂಡ್ ವಿರುದ್ದದ ಸರಣಿ ಶುರುವಾಗಲಿದೆ. ಜುಲೈ 1 ರಿಂದ ಇಂಗ್ಲೆಂಡ್ ವಿರುದ್ದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಕ್ಕೂ ಮುನ್ನ ಜೂನ್ 24 ರಿಂದ ವಾರ್ಮ್-ಅಪ್ ಮ್ಯಾಚ್ ಆಡಲಿದೆ.

ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಾದ ಬಳಿಕ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗಳನ್ನು ಆಡಲಿದೆ. ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯೂ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಐರ್ಲೆಂಡ್ ವಿರುದ್ದದ 2 ಪಂದ್ಯಗಳ ಟಿ20 ಸರಣಿಯ ಬಳಿಕ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಟಿ20 ಸರಣಿಗಾಗಿ ತೆರಳಲಿದ್ದಾರೆ. ಅದರಂತೆ ಐರ್ಲೆಂಡ್ ವಿರುದ್ದದ ಸರಣಿ ಮುಕ್ತಾಯದ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಏಕದಿನ ಹಾಗೂ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

  1. ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)
  2. ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
  3. ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
  4. ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

  1. ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
  2. ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
  3. ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಐರ್ಲೆಂಡ್ ಸರಣಿ ವೇಳಾಪಟ್ಟಿ:

  1. ಜೂನ್ 26- ಮೊದಲ ಟಿ20 ಪಂದ್ಯ (ಡಬ್ಲಿನ್)
  2. ಜೂನ್ 28- 2ನೇ ಟಿ20 ಪಂದ್ಯ (ಡಬ್ಲಿನ್)

ಭಾರತ ತಂಡ: ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:40 am, Mon, 20 June 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ