AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG Test: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಟಿಕೆಟ್ ಮಾರಾಟಕ್ಕೆ ದಿನಾಂಕ ಫಿಕ್ಸ್: 2000 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

India vs England Test Series: ಫೆಬ್ರವರಿ 2 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣಂನ DCA - YSR ACA ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದೇ ತಿಂಗಳ 15ರಿಂದ ಟೆಸ್ಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಆರಂಭವಾಗಲಿದೆ. Paytm ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಮಾರಾಟ ಮಾಡಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ಟಿಕೆಟ್‌ಗಳನ್ನು ಒದಗಿಸಲಿದೆ.

IND vs ENG Test: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಟಿಕೆಟ್ ಮಾರಾಟಕ್ಕೆ ದಿನಾಂಕ ಫಿಕ್ಸ್: 2000 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ
IND vs ENG Test
Vinay Bhat
|

Updated on: Jan 12, 2024 | 11:53 AM

Share

ವಿಶಾಖಪಟ್ಟಣಂ ಮತ್ತೊಂದು ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ. ನಾಲ್ಕು ವರ್ಷಗಳ ನಂತರ VDCA – YSR ACA ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೆಬ್ರವರಿ 2 ರಿಂದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ಆಯೋಜಿಸಿದ್ದ ಆಂಧ್ರ ಕ್ರಿಕೆಟ್ ಸಂಸ್ಥೆ ಪಂದ್ಯದ ವಿವರಗಳನ್ನು ಬಹಿರಂಗಪಡಿಸಿದೆ. ವಿಶೇಷವಾಗಿ ಈ ಬಾರಿ ದಿನಕ್ಕೆ 2000 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿರುತ್ತದೆ ಎಂದು ಎಸಿಎ ಈ ಸಂದರ್ಭದಲ್ಲಿ ಪ್ರಕಟಿಸಿದೆ.

ಸಂಘಟನಾ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಎ. ಮಲ್ಲಿಕಾರ್ಜುನ ಈ ಕುರಿತು ವಿವರ ಬಹಿರಂಗಪಡಿಸಿ, ಪಂದ್ಯ ವೀಕ್ಷಿಸಲು ಆಗಮಿಸುವ ದೇಶ-ವಿದೇಶಿ ಅಭಿಮಾನಿಗಳಿಗೆ ಯಾವುದೇ ಅನಾನುಕೂಲವೂ ಆಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಜತೆಗೆ ಮೂರು ಹಂತದ ಭದ್ರತೆ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಸಮರ್ಪಕ ಸ್ಟಾಲ್‌ಗಳನ್ನು ನಿರ್ಮಿಸಲಾಗಿದ್ದು, ರಂಜನೀಯ ವಾತಾವರಣದಲ್ಲಿ ಪಂದ್ಯ ವೀಕ್ಷಿಸಲು ಸಕಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.

IND vs AFG: ಅರ್ಧಶತಕ ಸಿಡಿಸಿದ ದುಬೆ; ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್​ಗಳ ಸುಲಭ ಜಯ

ಇದನ್ನೂ ಓದಿ
Image
ಭಾರತ-ಅಫ್ಘಾನಿಸ್ತಾನ ಎರಡನೇ ಟಿ20 ಪಂದ್ಯ ಯಾವಾಗ?, ಎಲ್ಲಿ?
Image
ಮೈದಾನದಲ್ಲೇ ಶುಭ್​ಮನ್ ಗಿಲ್ ಮೇಲೆ ರೋಹಿತ್ ಶರ್ಮಾ ವಾಗ್ದಾಳಿ
Image
ಎರಡೂ ಕೈಗಳಿಲ್ಲದಿದ್ದರೂ ಕ್ರಿಕೆಟ್​ ಆಡುವ ಅಮೀರ್ ಹುಸೇನ್, ವಿಶ್ವಕ್ಕೆ ಮಾದರಿ
Image
ಮೊದಲ ಟಿ20 ಪಂದ್ಯ ಗೆದ್ದ ಬಳಿಕ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ರು ಗೊತ್ತೇ?

ಎಸಿಎ ಅಪೆಕ್ಸ್ ಕೌನ್ಸಿಲ್ ಕಾರ್ಯದರ್ಶಿ ಎಸ್.ಆರ್.ಗೋಪಿನಾಥ ರೆಡ್ಡಿ ಮಾತನಾಡಿ, ದೂರದ ಊರುಗಳಿಂದ ಬರುವ ಕ್ರಿಕೆಟ್ ಪ್ರೇಮಿಗಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು. ಇದೇ ತಿಂಗಳ 15ರಿಂದ ಟೆಸ್ಟ್ ಪಂದ್ಯದ ಟಿಕೆಟ್‌ಗಳ ಮಾರಾಟ ಆರಂಭವಾಗಲಿದೆ. Paytm ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಮಾರಾಟ ಮಾಡಲಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ಟಿಕೆಟ್‌ಗಳನ್ನು ಒದಗಿಸಲಿದೆ ಎಂದು ಹೇಳಿದರು.

ಪ್ರತಿದಿನ 100, 200, 300, 500 ರೂಪಾಯಿಗಳ ಟಿಕೆಟ್‌ಗಳನ್ನು ಪ್ರತ್ಯೇಕವಾಗಿ ಮಾರಾಟ ಮಾಡಲಾಗುವುದು. ಅಲ್ಲದೆ, ಐದು ದಿನಗಳವರೆಗೆ ಒಟ್ಟಿಗೆ ಟಿಕೆಟ್ ತೆಗೆದುಕೊಳ್ಳುವವರಿಗೆ 400, 800, 1,000, 1,500 ರೂ. ವರೆಗೆ ಇರಲಿದೆ ಎಂದರು.

ಟೆಸ್ಟ್ ಪಂದ್ಯವಾದ್ದರಿಂದ ಪ್ರತಿದಿನ ಕ್ರೀಡಾಂಗಣ ಭರ್ತಿಯಾಗುವ ಸಾಧ್ಯತೆ ಇಲ್ಲ. ಕ್ರೀಡಾಂಗಣದ ಸಾಮರ್ಥ್ಯ 27 ಸಾವಿರ. ಹಾಗಾಗಿ ದಿನಕ್ಕೆ 2 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಗೋಪಿನಾಥ್ ವಿವರಿಸಿದರು. ಅದಕ್ಕಾಗಿ ಮೊದಲು ನೋಂದಣಿ ಮಾಡಿಕೊಳ್ಳಬೇಕು ಎಂದು ವಿವರಿಸಿದ್ದಾರೆ. ಇದಕ್ಕಾಗಿ ವೈಎಸ್ ಆರ್ ಮತ್ತು ಸ್ವರ್ಣ ಭಾರತಿ ಕ್ರೀಡಾಂಗಣಗಳಲ್ಲಿ 26 ಕೌಂಟರ್ ಗಳನ್ನು ಸ್ಥಾಪಿಸಲಾಗುವುದು ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ