IND vs ENG 2nd Test: ಇಂದಿನಿಂದ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಆರಂಭ: ರೋಚಕತೆ ಸೃಷ್ಟಿಸಿದ ಪಿಚ್

India vs England Second Test: ಇಂದಿನಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣ ಈ ಮಹತ್ವದ ಪಂದ್ಯಕ್ಕೆ ಸಜ್ಜಾಗಿದೆ. ಈಗಾಗಲೇ ಸರಣಿಯ ಮೊದಲ ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ಕಮ್​ಬ್ಯಾಕ್ ಮಾಡಲು ಎದುರು ನೋಡುತ್ತಿದೆ.

IND vs ENG 2nd Test: ಇಂದಿನಿಂದ ಭಾರತ-ಇಂಗ್ಲೆಂಡ್ ಎರಡನೇ ಟೆಸ್ಟ್ ಆರಂಭ: ರೋಚಕತೆ ಸೃಷ್ಟಿಸಿದ ಪಿಚ್
IND vs ENG 2nd Test (1)
Follow us
Vinay Bhat
|

Updated on: Feb 02, 2024 | 6:57 AM

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಸೋತ ನಂತರ, ಟೀಮ್ ಇಂಡಿಯಾ (India vs England) ಗೆಲುವಿನ ಮೂಲಕ ಕಮ್​ಬ್ಯಾಕ್ ಮಾಡುವುದರ ಮೇಲೆ ಮೇಲೆ ಕಣ್ಣಿಟ್ಟಿದೆ. ಇಂದಿನಿಂದ (ಫೆಬ್ರವರಿ 2) ವೈಜಾಗ್‌ನ ಡಾ. ವೈಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಟೀಮ್ ಇಂಡಿಯಾ ಕೊಹ್ಲಿ, ರಾಹುಲ್, ಜಡೇಜಾರಂಹ ಕೆಲ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿದೆ. ಯುವ ಆಟಗಾರರಿಂದ ಕೂಡಿರುವ ಭಾರತ ಹೇಗೆ ಪ್ರದರ್ಶನ ನೀಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಮೊದಲ ಟೆಸ್ಟ್‌ನಲ್ಲಿ ನಿಧಾನಗತಿಯ ಪಿಚ್‌ನಿಂದಾಗಿ ಭಾರತ ತಂಡ ಸೋಲನ್ನು ಎದುರಿಸಬೇಕಾಯಿತು. ಈ ಹಿಂದೆ ವಿಶ್ವಕಪ್‌ನಲ್ಲೂ ನಿಧಾನಗತಿಯ ಪಿಚ್‌ನಿಂದಾಗಿ ಟೀಮ್ ಇಂಡಿಯಾ ಪ್ರಶಸ್ತಿ ಕಳೆದುಕೊಂಡಿದ್ದು ಗೊತ್ತೇ ಇದೆ. ಇದೀಗ ಇಂಡೋ-ಇಂಗ್ಲೆಂಡ್ ಎರಡನೇ ಟೆಸ್ಟ್‌ಗಾಗಿ ವಿಶಾಖಪಟ್ಟಣಂನ ಪಿಚ್ ಕೂಡ ನಿಗೂಢವಾಗಿದೆ. ಪಂದ್ಯಕ್ಕೂ ಮುನ್ನ ವೈಜಾಗ್ ಪಿಚ್ ಊಹಿಸುವುದು ಕಷ್ಟ. ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡೂ ಟೆಸ್ಟ್ ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಸಾಮಾನ್ಯವಾಗಿ ಇದು ಸ್ಪಾಟ್ ಪಿಚ್ ಆಗಿರಬಹುದು ಎಂದು ನಂಬಲಾಗಿದೆ. ಅದೇನೆ ಇದ್ದರೂ ಪಂದ್ಯ ಆರಂಭವಾಗದ ಬಳಿಕವಷ್ಟೆ ಸ್ಪಷ್ಟ ಚಿತ್ರಣ ಸಿಗಲಿದೆ.

IND vs ENG: ವೈಜಾಗ್​ನಲ್ಲಿ ರನ್ ಮಳೆಯಾ? ಬ್ಯಾಟರ್ಸ್​ಗಳ ಪೆವಿಲಿಯನ್ ಪರೇಡಾ? ಇಲ್ಲಿದೆ ಪಿಚ್ ವರದಿ

ಇದನ್ನೂ ಓದಿ
Image
ಸೂಪರ್ ಸಿಕ್ಸ್ ಹಂತದಲ್ಲಿ ಬಲಿಷ್ಠ ಭಾರತಕ್ಕೆ ನೇಪಾಳ ಎದುರಾಳಿ
Image
ಎರಡನೇ ಟೆಸ್ಟ್​ಗೆ ಹೇಗಿರಲಿದೆ ತಂಡ? ಇಲ್ಲಿದೆ ಭಾರತ ಸಂಭಾವ್ಯ ತಂಡ
Image
12 ವರ್ಷಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!
Image
ಟೀಂ ಇಂಡಿಯಾಗೆ ಸಿಹಿ ಸುದ್ದಿ; ಮೂರನೇ ಟೆಸ್ಟ್​ಗೆ ಸ್ಟಾರ್ ಬ್ಯಾಟರ್ ಎಂಟ್ರಿ

ಟೀಮ್ ಇಂಡಿಯಾ ವಿಶಾಖಪಟ್ಟಣದಲ್ಲಿ ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದೆ. ತನ್ನ ಮೊದಲ ಟೆಸ್ಟ್ ಪಂದ್ಯವನ್ನು 2016 ರಲ್ಲಿ ಆಡಿದ್ದ ಭಾರತ, ಇಂಗ್ಲೆಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಭಾರತ ತಂಡ 246 ರನ್‌ಗಳ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಶತಕದ ಇನಿಂಗ್ಸ್ ಆಡಿದ್ದರು. ನಂತರ, ಭಾರತ 2019 ರಲ್ಲಿ ಇಲ್ಲಿ ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಿತು. ಈ ಪಂದ್ಯದಲ್ಲೂ ಭಾರತ 203 ರನ್‌ಗಳ ಜಯ ಸಾಧಿಸಿತ್ತು.

ಅನೇಕರಿಗೆ ಇಂಜುರಿ:

ಭಾರತ ಮಾತ್ರವಲ್ಲದೆ ಇಂಗ್ಲೆಂಡ್ ಆಟಗಾರರು ಕೂಡ ಇಂಜುರಿಯಿಂದ ಬಳಲುತ್ತಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಮಂಡಿರಜ್ಜು ಗಾಯದ ಸಮಸ್ಯೆಗೆ ಒಳಗಾಗಿರುವ ರವೀಂದ್ರ ಜಡೇಜಾ ಇದೀಗ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ತೊಡೆಸಂಧು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ದ್ವಿತೀಯ ಟೆಸ್ಟ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಕೊಹ್ಲಿ ಈ ಟೆಸ್ಟ್ ಕೂಡ ಆಡುವುದಿಲ್ಲ ಎಂದಿದ್ದಾರೆ. ಅತ್ತ ಮೊದಲ ಟೆಸ್ಟ್‌ನಲ್ಲಿ ಎಡ ಮೊಣಕಾಲಿಗೆ ಗಾಯಗೊಂಡ ಜ್ಯಾಕ್ ಲೀಚ್ ಗುಣಮುಖರಾಗದ ಎರಡನೇ ಟೆಸ್ಟ್​ನಲ್ಲಿ ಇವರು ಆಡುವುದಿಲ್ಲ.

ಉಭಯ ತಂಡಗಳು:

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಸರ್ಫರಾಝ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅವೇಶ್ ಖಾನ್.

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ