AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

when and where to watch India vs England Semi Final match Live Streaming in Kannada: 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಫೆಬ್ರವರಿ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಮುಖಾಮುಖಿಯಾಗಲಿವೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು. ಎರಡೂ ತಂಡಗಳ ಬಲಿಷ್ಠ ಸ್ಕ್ವಾಡ್‌ಗಳ ವಿವರ ಇಲ್ಲಿದೆ. ಈ ರೋಚಕ ಕದನಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?
Ind Vs Eng
ಪೃಥ್ವಿಶಂಕರ
|

Updated on: Mar 04, 2026 | 6:08 PM

Share

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ (T20 World Cup 2026 Semifinal) ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ (India vs England) ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ ಭಾರತ 1 ಪಂದ್ಯವನ್ನು ಸೋತು, 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಟಿಕೆಟ್ ಪಡೆದರೆ, ಇತ್ತ ಇಂಗ್ಲೆಂಡ್‌ ಆಡಿದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಫೆಬ್ರವರಿ 5 ರಂದು ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!