
2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ (T20 World Cup 2026 Semifinal) ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್ (India vs England) ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ ಭಾರತ 1 ಪಂದ್ಯವನ್ನು ಸೋತು, 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಟಿಕೆಟ್ ಪಡೆದರೆ, ಇತ್ತ ಇಂಗ್ಲೆಂಡ್ ಆಡಿದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದ ಪೂರ್ಣ ವಿವರ ಇಲ್ಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಫೆಬ್ರವರಿ 5 ರಂದು ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ನ ವಿವಿಧ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
IND vs SA: ಟಿ20 ವಿಶ್ವಕಪ್ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.
ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಜೋಶ್ ಟಂಗ್, ಲ್ಯೂಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ