IND vs ENG: 5 ತಿಂಗಳ ನಂತರ ಶಾರ್ಟ್ ಫಾರ್ಮ್ಯಾಟ್‌ಗೆ ಕೊಹ್ಲಿ ರೀ ಎಂಟ್ರಿ; ವಿಫಲವಾದರೆ ಸ್ಥಾನಕ್ಕೆ ಕುತ್ತು!
IND vs ENG: ಕೊಹ್ಲಿ ಈ ವರ್ಷ ಕೇವಲ ಎರಡು ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವುದು ಗಮನಾರ್ಹ. ಈ ಎರಡು ಪಂದ್ಯಗನ್ನು ವಿರಾಟ್ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು.
ಭಾರತ ಮತ್ತು ಇಂಗ್ಲೆಂಡ್ (India and England) ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ಶುಕ್ರವಾರ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಐದು ತಿಂಗಳ ನಂತರ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ. ಅವರು ಈ ವರ್ಷದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಕೊಹ್ಲಿ ಮರಳುವುದರೊಂದಿಗೆ ಒತ್ತಡ ಹೆಚ್ಚಿದೆ. ಈ ಪಂದ್ಯದಲ್ಲಿ ಮಿಂಚಿ ತನ್ನ ಸಾಮರ್ಥ್ಯ ತೋರಬೇಕಿದೆ. ಇಲ್ಲದಿದ್ದರೆ ಮತ್ತೆ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ. ಸ್ವಾಭಾವಿಕವಾಗಿ, ಇದು ಸ್ವಲ್ಪ ಒತ್ತಡವನ್ನು ಉಂಟುಮಾಡುತ್ತದೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 11 ರನ್ ಗಳಿಸಿದ್ದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 20 ರನ್ ಗಳಿಸಿದ್ದರು. ಐಪಿಎಲ್ 2022ರಲ್ಲೂ ಅವರು ಪರಿಣಾಮಕಾರಿಯಾಗಿ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಐದು ತಿಂಗಳ ಬಳಿಕ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮರಳುತ್ತಿದ್ದಾರೆ. ಹಾಗಾಗಿ ಉತ್ತಮ ಪ್ರದರ್ಶನ ನೀಡಬೇಕೆಂಬ ಒತ್ತಡ ಅವರ ಮೇಲಿದೆ. ಅವರ ಕಳಪೆ ಫಾರ್ಮ್ ಭಾರೀ ಟೀಕೆಗೆ ಗುರಿಯಾಗಿದೆ.
ಕೊಹ್ಲಿ ಈ ವರ್ಷ ಕೇವಲ ಎರಡು ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವುದು ಗಮನಾರ್ಹ. ಈ ಎರಡು ಪಂದ್ಯಗನ್ನು ವಿರಾಟ್ ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದರು. ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ 17 ರನ್ ಹಾಗೂ ಇನ್ನೊಂದು ಪಂದ್ಯದಲ್ಲಿ 52 ರನ್ ಗಳಿಸಿದ್ದರು. ಆದರೆ, ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಈ ಋತುವಿನಲ್ಲಿ ಮೂರ್ನಾಲ್ಕು ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಇಷ್ಟು ದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶತಕ ಸಿಡಿಸಲು ಕೊಹ್ಲಿಗೆ ಸಾಧ್ಯವಾಗಿರಲಿಲ್ಲ.
ರ್ಯಾಕಿಂಗ್ನಲ್ಲಿ ಕೊಹ್ಲಿಗೆ ಹಿನ್ನಡೆ
ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಲು ಅವರ ನಿರಂತರ ಕಳಪೆ ಪ್ರದರ್ಶನವೇ ಕಾರಣ. ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ಕಳೆದ ಎರಡು ವರ್ಷಗಳಲ್ಲಿ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 29.78 ರ ಸರಾಸರಿಯಲ್ಲಿ ಕೇವಲ 834 ರನ್ ಗಳಿಸಿದ್ದಾರೆ. ಈ ವೇಳೆ ವಿರಾಟ್ ಬ್ಯಾಟ್‌ನಿಂದ ಒಂದೇ ಒಂದು ಶತಕ ಸಿಡಿಯಲಿಲ್ಲ. ವಿರಾಟ್ ಕೇವಲ 6 ಅರ್ಧ ಶತಕಗಳನ್ನು ಗಳಿಸಲು ಶಕ್ತರಾಗಿದ್ದು, 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.
Published On - 8:56 pm, Fri, 8 July 22