ಆಸೀಸ್ ಪ್ರವಾಸ ಮುಗಿಸಿರುವ ಟೀಂ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?

India cricket team schedule: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಂತರ ಭಾರತ, ಇಂಗ್ಲೆಂಡ್ ವಿರುದ್ಧ 5 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಜನವರಿ 22 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಫೆಬ್ರವರಿ 6 ರಿಂದ ಏಕದಿನ ಸರಣಿ ನಡೆಯಲಿದೆ. ಎರಡೂ ಸರಣಿಗಳಿಗೆ ಇಂಗ್ಲೆಂಡ್ ತಂಡಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಆತಿಥೇಯ ಟೀಂ ಇಂಡಿಯಾವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.

ಆಸೀಸ್ ಪ್ರವಾಸ ಮುಗಿಸಿರುವ ಟೀಂ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jan 05, 2025 | 4:33 PM

ಸಿಡ್ನಿಯಲ್ಲಿ ನಡೆದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಸೋಲಿಸಿದೆ. ಗೆಲುವಿಗೆ 162 ರನ್‌ಗಳ ಗುರಿ ಪಡೆದಿದ್ದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾವು 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇತ್ತ ಟೀಂ ಇಂಡಿಯಾ ಕೂಡ ಈ ಸರಣಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿತ್ತಾದರೂ ಯಶಸ್ವಿಯಾಗಲಿಲ್ಲ. ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವಿಭಾಗವೇ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇಡೀ ಸರಣಿಯಲ್ಲಿ ಟೀಂ ಇಂಡಿಯಾ ವೇಗಿಗಳು ನೀಡಿದ ಹೋರಾಟವನ್ನು ಬ್ಯಾಟಿಂಗ್ ವಿಭಾಗ ಮಾಡಲಿಲ್ಲ. ಹೀಗಾಗಿ ಸತತ ಮೂರನೇ ಬಾರಿಗೆ ಈ ಪ್ರತಿಷ್ಠಿತ ಸರಣಿಯನ್ನು ಗೆದ್ದುಕೊಳ್ಳುವಲ್ಲಿ ವಿಫಲವಾಯಿತು. ಸದ್ಯ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿರುವ ಟೀಂ ಇಂಡಿಯಾ ಮುಂದೆ ಯಾವ ತಂಡದ ವಿರುದ್ಧ ಯಾವ ಮಾದರಿಯ ಸರಣಿಯನ್ನು ಆಡಲಿದೆ ಎಂಬುದರ ವಿವರ ಇಲ್ಲಿದೆ.

ಭಾರತದ ಮುಂದಿನ ಎದುರಾಳಿ ಇಂಗ್ಲೆಂಡ್

ಆಸ್ಟ್ರೇಲಿಯಾ ಪ್ರವಾಸವನ್ನು ಸೋಲಿನೊಂದಿಗೆ ಕೊನೆಗೊಳಿಸಿರುವ ಟೀಂ ಇಂಡಿಯಾ ಇದೀಗ ಸೀಮಿತ ಓವರ್​ಗಳ ಮಾದರಿಯಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿಗಳಿಗಾಗಿ ಇಂಗ್ಲೆಂಡ್ ತಂಡ ಭಾರತಕ್ಕೆ ಬರಲಿದ್ದು, ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟಿ20 ಸರಣಿ ನಡೆಯಲ್ಲಿದ್ದು, ಸರಣಿಯ ಮೊದಲ ಪಂದ್ಯ ಇದೇ ಜನವರಿ 22 ರಂದು ನಡೆಯಲಿದೆ. ಈ ಸರಣಿಗಾಗಿ ಈಗಾಗಲೇ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಆತಿಥೇಯ ಟೀಂ ಇಂಡಿಯಾವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.

ಏಕದಿನ- ಟಿ20 ಸರಣಿ

ಮೇಲೆ ಹೇಳಿದಂತೆ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದಲ್ಲಿ ಜನವರಿ 22 ರಂದು ನಡೆಯಲಿದೆ. ಈ ಸರಣಿಯ ಕೊನೆಯ ಪಂದ್ಯ ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಏಕದಿನ ಪಂದ್ಯ ನಾಗ್ಪುರದಲ್ಲಿ, ಎರಡನೇ ಏಕದಿನ ಪಂದ್ಯ ಕಟಕ್‌ನಲ್ಲಿ ಮತ್ತು ಮೂರನೇ ಏಕದಿನ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಆ ಬಳಿಕ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಕೂಡ ಏಕದಿನ ಮಾದರಿಯಲ್ಲಿ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಸರಣಿ ಉಭಯ ತಂಡಗಳಿಗೂ ಉತ್ತಮ ಅಭ್ಯಾಸವಾಗಲಿದೆ.

ಟಿ20 ಸರಣಿ ವೇಳಾಪಟ್ಟಿ

  1. ಮೊದಲ ಟಿ20: 22 ಜನವರಿ- ಕೋಲ್ಕತ್ತಾ
  2. ಎರಡನೇ ಟಿ20: 25 ಜನವರಿ- ಚೆನ್ನೈ
  3. ಮೂರನೇ ಟಿ20: 28 ಜನವರಿ- ರಾಜ್ಕೋಟ್
  4. ನಾಲ್ಕನೇ ಟಿ20: 31 ಜನವರಿ- ಪುಣೆ
  5. ಐದನೇ ಟಿ20: 2 ಫೆಬ್ರವರಿ- ಮುಂಬೈ

ಏಕದಿನ ಸರಣಿ ವೇಳಾಪಟ್ಟಿ

  1. ಮೊದಲ ಏಕದಿನ: 6 ಫೆಬ್ರವರಿ- ನಾಗ್ಪುರ
  2. ಎರಡನೇ ಏಕದಿನ: 9 ಫೆಬ್ರವರಿ- ಕಟಕ್
  3. ಮೂರನೇ ಏಕದಿನ: 12 ಫೆಬ್ರವರಿ- ಅಹಮದಾಬಾದ್

ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಟಿ20 ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೇಡೆನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್