ಸಿಡ್ನಿಯಲ್ಲಿ ನಡೆದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಸೋಲಿಸಿದೆ. ಗೆಲುವಿಗೆ 162 ರನ್‌ಗಳ ಗುರಿ ಪಡೆದಿದ್ದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾವು 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು 3-1 ಅಂತರದಿಂದ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇತ್ತ ಟೀಂ ಇಂಡಿಯಾ ಕೂಡ ಈ ಸರಣಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಪಟ್ಟಿತ್ತಾದರೂ ಯಶಸ್ವಿಯಾಗಲಿಲ್ಲ. ತಂಡದ ಈ ಕಳಪೆ ಸಾಧನೆಗೆ ಬ್ಯಾಟಿಂಗ್ ವಿಭಾಗವೇ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇಡೀ ಸರಣಿಯಲ್ಲಿ ಟೀಂ ಇಂಡಿಯಾ ವೇಗಿಗಳು ನೀಡಿದ ಹೋರಾಟವನ್ನು ಬ್ಯಾಟಿಂಗ್ ವಿಭಾಗ ಮಾಡಲಿಲ್ಲ. ಹೀಗಾಗಿ ಸತತ ಮೂರನೇ ಬಾರಿಗೆ ಈ ಪ್ರತಿಷ್ಠಿತ ಸರಣಿಯನ್ನು ಗೆದ್ದುಕೊಳ್ಳುವಲ್ಲಿ ವಿಫಲವಾಯಿತು. ಸದ್ಯ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿರುವ ಟೀಂ ಇಂಡಿಯಾ ಮುಂದೆ ಯಾವ ತಂಡದ ವಿರುದ್ಧ ಯಾವ ಮಾದರಿಯ ಸರಣಿಯನ್ನು ಆಡಲಿದೆ ಎಂಬುದರ ವಿವರ ಇಲ್ಲಿದೆ.
ಆಸ್ಟ್ರೇಲಿಯಾ ಪ್ರವಾಸವನ್ನು ಸೋಲಿನೊಂದಿಗೆ ಕೊನೆಗೊಳಿಸಿರುವ ಟೀಂ ಇಂಡಿಯಾ ಇದೀಗ ಸೀಮಿತ ಓವರ್ಗಳ ಮಾದರಿಯಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿಗಳಿಗಾಗಿ ಇಂಗ್ಲೆಂಡ್ ತಂಡ ಭಾರತಕ್ಕೆ ಬರಲಿದ್ದು, ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟಿ20 ಸರಣಿ ನಡೆಯಲ್ಲಿದ್ದು, ಸರಣಿಯ ಮೊದಲ ಪಂದ್ಯ ಇದೇ ಜನವರಿ 22 ರಂದು ನಡೆಯಲಿದೆ. ಈ ಸರಣಿಗಾಗಿ ಈಗಾಗಲೇ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಆತಿಥೇಯ ಟೀಂ ಇಂಡಿಯಾವನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ.
ಮೇಲೆ ಹೇಳಿದಂತೆ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ಸರಣಿಯ ಮೊದಲ ಪಂದ್ಯ ಕೋಲ್ಕತ್ತಾದಲ್ಲಿ ಜನವರಿ 22 ರಂದು ನಡೆಯಲಿದೆ. ಈ ಸರಣಿಯ ಕೊನೆಯ ಪಂದ್ಯ ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಏಕದಿನ ಪಂದ್ಯ ನಾಗ್ಪುರದಲ್ಲಿ, ಎರಡನೇ ಏಕದಿನ ಪಂದ್ಯ ಕಟಕ್‌ನಲ್ಲಿ ಮತ್ತು ಮೂರನೇ ಏಕದಿನ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಆ ಬಳಿಕ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಕೂಡ ಏಕದಿನ ಮಾದರಿಯಲ್ಲಿ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಸರಣಿ ಉಭಯ ತಂಡಗಳಿಗೂ ಉತ್ತಮ ಅಭ್ಯಾಸವಾಗಲಿದೆ.
ಏಕದಿನ ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಟಿ20 ಸರಣಿಗೆ ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೇಡೆನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ