India Vs England: ಭಾರತ-ಇಂಗ್ಲೆಂಡ್ ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ ಹೀಗಿದೆ

India Vs England T20 Schedule 2022: ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

India Vs England: ಭಾರತ-ಇಂಗ್ಲೆಂಡ್ ಟಿ20 ಸರಣಿ ಸಂಪೂರ್ಣ ವೇಳಾಪಟ್ಟಿ ಹೀಗಿದೆ
Team India
TV9kannada Web Team

| Edited By: Zahir PY

Jul 05, 2022 | 10:05 PM

India Vs England T20 Schedule: ಭಾರತ-ಇಂಗ್ಲೆಂಡ್ ನಡುವಣ 3 ಪಂದ್ಯಗಳ ಟಿ20 ಸರಣಿ ಜುಲೈ 7 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಈಗಾಗಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಈ ಸರಣಿಗಾಗಿ ಎರಡು ಟೀಮ್ ಇಂಡಿಯಾವನ್ನು ಕಣಕ್ಕಿಳಿಸಲಿದೆ. ಅಂದರೆ ಇಂಗ್ಲೆಂಡ್ ವಿರುದ್ದ ಟೆಸ್ಟ್ ಪಂದ್ಯವಾಡಿದ್ದ ಆಟಗಾರರು ಏಜಿಯಾಸ್ ಬೌಲ್​ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಅದರಂತೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಮೊದಲ ಟಿ20 ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್ ಹಾಗೂ ರಾಹುಲ್ ತ್ರಿಪಾಠಿ ತಂಡದಲ್ಲಿ ಅವಕಾಶ ಪಡೆದಿದ್ದಾರೆ.ಇನ್ನು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಆಟಗಾರರ ಆಗಮನದೊಂದಿಗೆ ಈ ಆಟಗಾರರು ತಂಡದಿಂದ ಹೊರಬೀಳಲಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ದದ ಟೆಸ್ಟ್ ಪಂದ್ಯದಿಂದ ಕೊರೋನಾ ಕಾರಣದಿಂದ ಹೊರಗುಳಿದ ನಾಯಕ ರೋಹಿತ್ ಶರ್ಮಾ ಸೀಮಿತ ಓವರ್​ಗಳ ಸರಣಿಯ ಮೂಲಕ ತಂಡಕ್ಕೆ ಮರಳಲಿದ್ದಾರೆ. ಹಾಗೆಯೇ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯನ್ನೂ ಸಹ ಆಡಲಿದೆ. ಈ ಸರಣಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಹಿರಿಯ ಆಟಗಾರರಾದ ಶಿಖರ್ ಧವನ್ ಹಾಗೂ ಮೊಹಮ್ಮದ್ ಶಮಿ ಸ್ಥಾನ ಪಡೆದಿರುವುದು ವಿಶೇಷ. ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯೂ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಈ ಎರಡು ಸರಣಿಗಳ ವೇಳಾಪಟ್ಟಿ ಹೀಗಿದೆ.

ಟಿ20 ಸರಣಿ ವೇಳಾಪಟ್ಟಿ:

  • ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
  • ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
  • ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

ಏಕದಿನ ಸರಣಿ ವೇಳಾಪಟ್ಟಿ:

  • ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
  • ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
  • ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

ಈ ಸರಣಿಗಾಗಿ ಟೀಮ್ ಇಂಡಿಯಾ ಹೀಗಿದೆ:

  • ಮೊದಲ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
  • ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್​ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್
  • ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಪ್ರಸಿದ್ದ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಇದನ್ನೂ ಓದಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada